ಡ್ರೈವಿಂಗ್ ಲೈಸೆನ್ಸ್ ನವೀಕರಣ ಈಗ ಇನ್ನಷ್ಟು ಸುಲಭ

ದೇಶದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ಕಾರಣಕ್ಕೆ ಜನರು ಮನೆಯಲ್ಲಿಯೇ ಇರುವಂತಾಗಿದೆ. ಇಂತಹ ಸಂದರ್ಭದಲ್ಲಿ ಕೆಲವರ ಡ್ರೈವಿಂಗ್ ಲೈಸೆನ್ಸ್ ಅವಧಿ ಮುಗಿದು ಹೋಗಿದ್ದರೆ, ಇನ್ನೂ ಕೆಲವರ ಡ್ರೈವಿಂಗ್ ಲೈಸೆನ್ಸ್ ಅವಧಿ ಶೀಘ್ರದಲ್ಲೇ ಮುಗಿಯಲಿದೆ.

ಡ್ರೈವಿಂಗ್ ಲೈಸೆನ್ಸ್ ನವೀಕರಣ ಈಗ ಇನ್ನಷ್ಟು ಸುಲಭ

ದೇಶದ ಹಲವೆಡೆ ಆರ್‌ಟಿಒ ಕಚೇರಿಗಳನ್ನು ಮುಚ್ಚಲಾಗಿದ್ದು, ಡ್ರೈವಿಂಗ್ ಲೈಸೆನ್ಸ್ ನವೀಕರಿಸಲು ಸಮಸ್ಯೆ ಎದುರಾಗಿದೆ. ಡ್ರೈವಿಂಗ್ ಲೈಸೆನ್ಸ್ ಅವಧಿ ಮುಗಿದಿರುವ ಕಾರಣಕ್ಕೆ ಹಲವರಿಗೆ ತುರ್ತು ಪರಿಸ್ಥಿತಿಯಲ್ಲೂ ವಾಹನಗಳನ್ನು ಚಾಲನೆ ಮಾಡಲು ಸಾಧ್ಯವಾಗುತ್ತಿಲ್ಲ. ಆರ್‌ಟಿಒಗಳಲ್ಲಿ ಜನಸಂದಣಿಯನ್ನು ಕಡಿಮೆಗೊಳಿಸಲು ಹಾಗೂ ಜನರು ಸುಲಭವಾಗಿ ಡ್ರೈವಿಂಗ್ ಲೈಸೆನ್ಸ್ ನವೀಕರಿಸಲು ಅನುಕೂಲವಾಗುವ ಕಾರಣಕ್ಕೆ ಕೇಂದ್ರ ಸರ್ಕಾರವು ಆನ್‌ಲೈನ್ ಸೌಲಭ್ಯವನ್ನು ಜಾರಿಗೆ ತಂದಿದೆ.

ಡ್ರೈವಿಂಗ್ ಲೈಸೆನ್ಸ್ ನವೀಕರಣ ಈಗ ಇನ್ನಷ್ಟು ಸುಲಭ

ಆನ್‌ಲೈನ್ ಚಾಲನಾ ಪರವಾನಗಿ ನವೀಕರಣಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸಮಯವನ್ನು ಉಳಿಸಬಹುದು. ಮೊದಲನೆಯದಾಗಿ, ಈ ಲಿಂಕ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಡ್ರೈವಿಂಗ್ ಲೈಸೆನ್ಸ್ ನವೀಕರಣದ ಪ್ರಕ್ರಿಯೆಯನ್ನು ಪ್ರಾರಂಭಿಸಬಹುದು. ನಂತರ ಎಡಭಾಗದಲ್ಲಿರುವ ಅಪ್ಲೈ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ಸರ್ವೀಸಸ್ ಆನ್ ಡ್ರೈವಿಂಗ್ ಲೈಸೆನ್ಸ್ ಕ್ಲಿಕ್ ಮಾಡಿ, ನಂತರ ಅಲ್ಲಿ ಸೂಚಿಸುವ ಪ್ರತಿ ಹಂತವನ್ನೂ ಅನುಸರಿಸ ಬೇಕು.

MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಡ್ರೈವಿಂಗ್ ಲೈಸೆನ್ಸ್ ನವೀಕರಣ ಈಗ ಇನ್ನಷ್ಟು ಸುಲಭ

ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಬಂಧಪಟ್ಟ ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್ ಮಾಡಬೇಕು. ಅರ್ಜಿಯನ್ನು ಭರ್ತಿ ಮಾಡಿ, ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್ ಮಾಡಿದ ನಂತರ, ಆನ್‌ಲೈನ್ ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ. ಕೆಲವು ದಿನಗಳ ನಂತರ ಹೊಸ ಡ್ರೈವಿಂಗ್ ಲೈಸೆನ್ಸ್ ಅನ್ನು ನಿಮ್ಮ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಲಾಗುತ್ತದೆ.

ಡ್ರೈವಿಂಗ್ ಲೈಸೆನ್ಸ್ ನವೀಕರಣ ಈಗ ಇನ್ನಷ್ಟು ಸುಲಭ

ಆನ್‌ಲೈನ್‌ನಲ್ಲಿ ಡ್ರೈವಿಂಗ್ ಲೈಸೆನ್ಸ್ ನವೀಕರಿಸಲು ಅಗತ್ಯವಾದ ದಾಖಲೆಗಳು:

ಮೊದಲು ನಿಗದಿತ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿ, ಅದನ್ನು ಭರ್ತಿ ಮಾಡಿ ಸ್ಕ್ಯಾನ್ ಮಾಡಿ ಮತ್ತೆ ಅಪ್‌ಲೋಡ್ ಮಾಡಬೇಕು.

40 ವರ್ಷಕ್ಕಿಂತ ಮೇಲ್ಪಟ್ಟವರು ಅರ್ಜಿ ನಮೂನೆ ಫಾರ್ಮ್ 1 ಎಗೆ ವೈದ್ಯರಿಂದ ಪ್ರಮಾಣ ಪತ್ರ ಪಡೆಯಬೇಕು.

ಅವಧಿ ಮೀರಿದ ಡ್ರೈವಿಂಗ್ ಲೈಸೆನ್ಸ್

ಪಾಸ್‌ಪೋರ್ಟ್ ಸೈಜ್‌ನ ಫೋಟೋ

ಆಧಾರ್ ಕಾರ್ಡ್

MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಡ್ರೈವಿಂಗ್ ಲೈಸೆನ್ಸ್ ನವೀಕರಣ ಈಗ ಇನ್ನಷ್ಟು ಸುಲಭ

ಡ್ರೈವಿಂಗ್ ಲೈಸೆನ್ಸ್ ಅವಧಿಯು 20 ವರ್ಷಗಳವರೆಗೆ ಇರುತ್ತದೆ. ಅವಧಿ ಮುಗಿದ ನಂತರ ನವೀಕರಣಕ್ಕೆ 30 ದಿನಗಳ ಸಮಯ ನೀಡಲಾಗುತ್ತದೆ. ಇದರ ನಂತರ, ನವೀಕರಣಕ್ಕಾಗಿ ಯಾರಾದರೂ ಅರ್ಜಿ ಸಲ್ಲಿಸಿದರೆ ದಂಡ ವಿಧಿಸಲಾಗುತ್ತದೆ.

ಡ್ರೈವಿಂಗ್ ಲೈಸೆನ್ಸ್ ನವೀಕರಣ ಈಗ ಇನ್ನಷ್ಟು ಸುಲಭ

ಡ್ರೈವಿಂಗ್ ಲೈಸೆನ್ಸ್ ಆಧಾರದ ಮೇಲೆ ದಂಡವನ್ನು ವಿಧಿಸಲಾಗುತ್ತದೆ. ಸಾರಿಗೆ ರಹಿತ ಡ್ರೈವಿಂಗ್ ಲೈಸೆನ್ಸ್ ಅನ್ನು ನವೀಕರಿಸಿದರೆ, 5 ವರ್ಷಗಳವರೆಗೆ ಮಾನ್ಯತೆಯನ್ನು ಹೊಂದಿರುತ್ತದೆ. ಸಾರಿಗೆ ವಾಹನಗಳ ಡ್ರೈವಿಂಗ್ ಲೈಸೆನ್ಸ್ ನವೀಕರಣದ ನಂತರ 3 ವರ್ಷಗಳವರೆಗೆ ಮಾನ್ಯವಾಗಿರುತ್ತದೆ.

Article Published On: Monday, May 25, 2020, 15:41 [IST]
English summary
How to apply for Driving Licence Online renewal step by step explanation. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+