ಆಧಾರ್ ಕಾರ್ಡ್‌ನೊಂದಿಗೆ ಡ್ರೈವಿಂಗ್ ಲೈಸೆನ್ಸ್ ಲಿಂಕ್ ಮಾಡುವ ಸರಳ ವಿಧಾನಗಳಿವು

ಕೇಂದ್ರ ಸರ್ಕಾರವು ಡ್ರೈವಿಂಗ್ ಲೈಸೆನ್ಸ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಈ ಮೂಲಕ ಡ್ರೈವಿಂಗ್ ಲೈಸೆನ್ಸ್'ಗಳ ನಕಲನ್ನು ತಡೆಯಲು ಕೇಂದ್ರ ಸರ್ಕಾರವು ಮುಂದಾಗಿದೆ.

ಆಧಾರ್ ಕಾರ್ಡ್‌ನೊಂದಿಗೆ ಡ್ರೈವಿಂಗ್ ಲೈಸೆನ್ಸ್ ಲಿಂಕ್ ಮಾಡುವ ಸರಳ ವಿಧಾನಗಳಿವು

ಡ್ರೈವಿಂಗ್ ಲೈಸೆನ್ಸ್'ಗೆ ಇನ್ನೂ ಆಧಾರ್ ಕಾರ್ಡ್ ಲಿಂಕ್ ಮಾಡಿರದಿದ್ದರೆ ಶೀಘ್ರದಲ್ಲಿಯೇ ಲಿಂಕ್ ಮಾಡುವುದು ಒಳಿತು. ಒಂದು ವೇಳೆ ಮಾಡದಿದ್ದರೆ ಪ್ರಾದೇಶಿಕ ಸಾರಿಗೆ ಕಚೇರಿಯ (ಆರ್‌ಟಿಒ) ಸೇವೆಗಳನ್ನು ಪಡೆಯಲು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಡ್ರೈವಿಂಗ್ ಲೈಸೆನ್ಸ್ ಅನ್ನು ಆಧಾರ್ ಕಾರ್ಡ್'ನೊಂದಿಗೆ ಲಿಂಕ್ ಮಾಡುವುದು ಹೇಗೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ಆಧಾರ್ ಕಾರ್ಡ್‌ನೊಂದಿಗೆ ಡ್ರೈವಿಂಗ್ ಲೈಸೆನ್ಸ್ ಲಿಂಕ್ ಮಾಡುವ ಸರಳ ವಿಧಾನಗಳಿವು

1. ಡ್ರೈವಿಂಗ್ ಲೈಸೆನ್ಸ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು , ಸಾರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://parivahan.gov.inಗೆ ಭೇಟಿ ನೀಡಬೇಕು. ನಂತರ ಲಿಂಕ್ ಆಧಾರ್ ಆಯ್ಕೆಯನ್ನು ಕ್ಲಿಕ್ ಮಾಡಬೇಕು.

ಆಧಾರ್ ಕಾರ್ಡ್‌ನೊಂದಿಗೆ ಡ್ರೈವಿಂಗ್ ಲೈಸೆನ್ಸ್ ಲಿಂಕ್ ಮಾಡುವ ಸರಳ ವಿಧಾನಗಳಿವು

2. ನಂತರ ಡ್ರಾಪ್-ಡೌನ್'ನಲ್ಲಿ ಡ್ರೈವಿಂಗ್ ಲೈಸೆನ್ಸ್ ಆಯ್ಕೆಯನ್ನು ಕ್ಲಿಕ್ ಮಾಡಬೇಕು. ಇಲ್ಲಿ ಡ್ರೈವಿಂಗ್ ಲೈಸೆನ್ಸ್ ನಂಬರ್ ಕೇಳಲಾಗುತ್ತದೆ. ಇಲ್ಲಿ ನಿಮ್ಮ ಡ್ರೈವಿಂಗ್ ಲೈಸೆನ್ಸ್ ನಂಬರ್ ನಮೂದಿಸಬೇಕು.

ಆಧಾರ್ ಕಾರ್ಡ್‌ನೊಂದಿಗೆ ಡ್ರೈವಿಂಗ್ ಲೈಸೆನ್ಸ್ ಲಿಂಕ್ ಮಾಡುವ ಸರಳ ವಿಧಾನಗಳಿವು

3. ನಂತರ ವಿವರಗಳನ್ನು ಪಡೆಯಿರಿ (ಗೆಟ್ ಡಿಟೆಲ್ಸ್) ಆಯ್ಕೆಯನ್ನು ಕ್ಲಿಕ್ ಮಾಡಬೇಕು. ಇದಾದ ಬಳಿಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ನಂಬರ್ ನಮೂದಿಸಬೇಕು. ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿದ ನಂತರ ಸಬ್ಮಿಟ್ ಬಟನ್ ಕ್ಲಿಕ್ ಮಾಡಬೇಕು.

ಆಧಾರ್ ಕಾರ್ಡ್‌ನೊಂದಿಗೆ ಡ್ರೈವಿಂಗ್ ಲೈಸೆನ್ಸ್ ಲಿಂಕ್ ಮಾಡುವ ಸರಳ ವಿಧಾನಗಳಿವು

4. ಸಬ್ಮಿಟ್ ಬಟನ್ ಕ್ಲಿಕ್ ಮಾಡಿದ ನಂತರ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ. ಅದರ ಸಹಾಯದಿಂದ ನಿಮ್ಮ ಆಧಾರ್ ಸಂಖ್ಯೆಯನ್ನು ನೀವು ಪರಿಶೀಲಿಸಬೇಕಾಗುತ್ತದೆ.

ಆಧಾರ್ ಕಾರ್ಡ್‌ನೊಂದಿಗೆ ಡ್ರೈವಿಂಗ್ ಲೈಸೆನ್ಸ್ ಲಿಂಕ್ ಮಾಡುವ ಸರಳ ವಿಧಾನಗಳಿವು

ಒಟಿಪಿಯನ್ನು ನಮೂದಿಸಿದ ನಂತರ ನಿಮ್ಮ ಡ್ರೈವಿಂಗ್ ಲೈಸೆನ್ಸ್'ನೊಂದಿಗೆ ನಿಮ್ಮ ಆಧಾರ್ ಅನ್ನು ಲಿಂಕ್ ಮಾಡುವ ಪ್ರಕ್ರಿಯೆಯು ಪೂರ್ಣಗೊಂಡಿದೆ ಎಂಬುದು ದೃಢಪಡುತ್ತದೆ.

ಆಧಾರ್ ಕಾರ್ಡ್‌ನೊಂದಿಗೆ ಡ್ರೈವಿಂಗ್ ಲೈಸೆನ್ಸ್ ಲಿಂಕ್ ಮಾಡುವ ಸರಳ ವಿಧಾನಗಳಿವು

ಕೇಂದ್ರ ಸರ್ಕಾರವು ಕೆಲವು ವರ್ಷಗಳಿಂದ ಡ್ರೈವಿಂಗ್ ಲೈಸೆನ್ಸ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ. ಇನ್ನು ಮುಂದೆ ಈ ಎರಡು ಪ್ರಮುಖ ದಾಖಲೆಗಳನ್ನು ಲಿಂಕ್ ಮಾಡುವುದು ಕಡ್ಡಾಯ.

ಆಧಾರ್ ಕಾರ್ಡ್‌ನೊಂದಿಗೆ ಡ್ರೈವಿಂಗ್ ಲೈಸೆನ್ಸ್ ಲಿಂಕ್ ಮಾಡುವ ಸರಳ ವಿಧಾನಗಳಿವು

ಇಲ್ಲದಿದ್ದರೆ ಡ್ರೈವಿಂಗ್ ಲೈಸೆನ್ಸ್ ನವೀಕರಣ ಹಾಗೂ ಡ್ರೈವಿಂಗ್ ಲೈಸೆನ್ಸ್'ನಲ್ಲಿ ವಿಳಾಸ ಬದಲಾವಣೆ ಸೇರಿದಂತೆ ಹಲವು ಆನ್‌ಲೈನ್ ಸೇವೆಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ.

ಆಧಾರ್ ಕಾರ್ಡ್‌ನೊಂದಿಗೆ ಡ್ರೈವಿಂಗ್ ಲೈಸೆನ್ಸ್ ಲಿಂಕ್ ಮಾಡುವ ಸರಳ ವಿಧಾನಗಳಿವು

ಈ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಕೇಂದ್ರ ಸಾರಿಗೆ ಇಲಾಖೆಯು ಸಂಪರ್ಕವಿಲ್ಲದ ಸೇವೆಗಳನ್ನು ಆರಂಭಿಸುತ್ತಿದೆ. ಈ ಸೇವೆಗಳನ್ನು ಪಡೆಯಲು ಡ್ರೈವಿಂಗ್ ಲೈಸೆನ್ಸ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು ಸೂಚಿಸಲಾಗಿದೆ. ಡ್ರೈವಿಂಗ್ ಲೈಸೆನ್ಸ್ ಪರಿಶೀಲಿಸಲು ಆಧಾರ್ ಕಾರ್ಡ್ ಅಗತ್ಯವಾಗಿದೆ. ಡ್ರೈವಿಂಗ್ ಲೈಸೆನ್ಸ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡುವುದನ್ನು ಈಗಾಗಲೇ ಹಲವು ರಾಜ್ಯಗಳಲ್ಲಿ ಜಾರಿಗೊಳಿಸಲಾಗಿದೆ. ಶೀಘ್ರದಲ್ಲಿಯೇ ನಮ್ಮ ರಾಜ್ಯದಲ್ಲಿಯೂ ಜಾರಿಗೊಳಿಸುವ ಸಾಧ್ಯತೆಗಳಿವೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Easy ways to link driving license with Aadhaar card. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X