ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್, ವಿಜಯಪುರಕ್ಕೆ ಸ್ಲೀಪರ್ ವಂದೇ ಭಾರತ್ ರೈಲು: ಎಂಬಿ ಪಾಟೀಲ್

By Shankrappa Parangi

ಬೆಂಗಳೂರು: ಕೇಂದ್ರ ಸರ್ಕಾರ ಇತ್ತೀಚೆಗೆ ಬೆಂಗಳೂರು ಮಹಾನಗರದಿಂದ ಹೈದರಾಬಾದ್, ಚೆನ್ನೈ ಮಾರ್ಗವಾಗಿ ಹೈ ಸ್ಪೀಡ್ ರೈಲು ಕಾರಿಡಾರ್ ಘೋಷಿಸಿದೆ. ಇದರಿಂದ ಬೆಂಗಳೂರಿಗೆ ಒಂದಷ್ಟು ಅನುಕೂಲ ಆಗಲಿದೆ. ಅದೇ ರೀತಿ ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್ ಸ್ಥಾಪನೆಗೆ ಸಂಬಂಧಿಸಿದಂತೆ ತಾತ್ವಿಕ ಅನುಮೋದನೆ ಸಿಗುವ ಎಲ್ಲ ಲಕ್ಷಣಗಳು ದೊರೆತಿವೆ. ಇವು ಸೇರಿದಂತೆ ಕರ್ನಾಟಕದ ಕೆಲ ರೈಲು ಯೋಜನೆಗಳ ಬಗ್ಗೆ ಕೇಂದ್ರ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ ಮತ್ತು ಪ್ರಹ್ಲದ್ ಜೋಶಿಯವರ ಮನವಿ ಬೆನ್ನಲ್ಲೆ ರಾಜ್ಯ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ಶನಿವಾರ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರೊಂದಿಗೆ ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ಚರ್ಚೆ ನಡೆಸಿದರು. ಪ್ರಮುಖ ಯೋಜನೆ ಬಗ್ಗೆ ಅವರು ಮನವಿ ಮಾಡಿದ್ದಾರೆ. ಅದರಲ್ಲಿ ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲು ಕಾರ್ಯಾಚರಣೆಗೆ ಮನವಿ ಮಾಡಿದ್ದಾರೆ.


Bengaluru-Mumbai High-Speed Rail

ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್

ಬೆಂಗಳೂರು ದೇಶದ ತಂತ್ರಜ್ಞಾನ ರಾಜಧಾನಿಯಾಗಿದೆ. ಮುಂಬಯಿ ಆರ್ಥಿಕ ರಾಜಧಾನಿ ಆಗಿದೆ. ಇವೆರಡೂ ನಗರಗಳನ್ನು ಅತ್ಯುತ್ತಮ ಸಂಪರ್ಕ ವ್ಯವಸ್ಥೆಯಿಂದ ಬೆಸೆಯುವುದು ಅನಿವಾರ್ಯವಾಗಿದೆ. ಈಗಾಗಲೇ ಮುಂಬೈ-ಪುಣೆ ನಡುವೆ ಘೋಷಿಸಿರುವ ಹೈಸ್ಪೀಡ್ ರೈಲು ಕಾರಿಡಾರ್‌ ಅನ್ನು ಬೆಂಗಳೂರಿನ ತನಕ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಎಂಬಿ ಪಾಟೀಲ ತಿಳಿಸಿದ್ದಾರೆ.

Union Budget 2026: ಬೆಂಗಳೂರಿನಿಂದ ಹೈದರಾಬಾದ್, ಚೆನ್ನೈಗೆ ಹೈಸ್ಪೀಡ್ ರೈಲು ಕಾರಿಡಾರ್: ದೆಹಲಿ, ವಾರಣಾಸಿಗೂ ಬಂಪರ್

ಇದರಿಂದ ಕರ್ನಾಟಕ ಅದರಲ್ಲೂ ಉತ್ತರ ಕರ್ನಾಟಕದ ಹುಬ್ಬಳ್ಳಿ, ಹಾವೇರಿ, ಬೆಳಗಾವಿ, ಗದಗ, ಬಾಗಲಕೋಟೆ ಸೇರಿದಂತೆ ಆರೇಳು ಜಿಲ್ಲೆಗಳಿಗೆ ಅನುಕೂಲ ಆಗಲಿದೆ. ಈ ಭಾಗದ ಅಭಿವೃದ್ಧಿಗೆ ಈ ಯೋಜನೆ ನಿರ್ಣಾಯಕ ಪಾತ್ರ ವಹಿಸಲಿದೆ. ಶಿಕ್ಷಣ, ವ್ಯಾಪಾರ, ಕೈಗಾರಿಕೆ, ಸಾರಿಗೆ ವಲಯಕ್ಕೆ ಉತ್ತೇಜನ ಸಿಗಲಿದೆ.

ವಿಜಯಪುರಕ್ಕೆ ಸ್ಲೀಪರ್ ವಂದೇ ಭಾರತ್ ರೈಲು, ಬೈಪಾಸ್ ಮಾರ್ಗ

ರಾಜ್ಯ ರಾಜಧಾನಿಯಿಂದ ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್ ಎಕ್ಸ್‌ಪ್ರೆಸ್ ರೈಲು ಹಾಗೂ ಬೆಂಗಳೂರು-ವಿಜಯಪುರ ನಡುವೆ ದಿನವಹಿ ವಿಶೇಷ ರೈಲುಗಳನ್ನು ಮಂಜೂರು ಮಾಡಬೇಕೆಂದು ಕೋರಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಖುದ್ದು ಮನವಿ ಸಲ್ಲಿಸಿದೆವು. ಇದರಿಂದ ಆಗುವ ಪ್ರಯೋಜನ, ರೈಲುಗಳ ಅಗತ್ಯತೆ ಕುರಿತು ಕೇಂದ್ರ ಸಚಿವರಿಗೆ ತಿಳಿಸಲಾಯಿತು ಎಂದರು.


Bengaluru-Mumbai High-Speed Rail

ಬೆಂಗಳೂರು-ವಿಜಯಪುರ ನಡುವೆ 530 ಕಿಲೋ ಮೀಟರ್ ದೂರವಿದ್ದು, ರೈಲು ಪ್ರಯಾಣಕ್ಕೆ 15-16 ಗಂಟೆ ಹಿಡಿಯುತ್ತಿದೆ. ಇದನ್ನು 10 ಗಂಟೆಗೆ ಇಳಿಸಬೇಕು. ಇದಕ್ಕಾಗಿ ಬೆಂಗಳೂರು-ಹುಬ್ಬಳ್ಳಿ ನಡುವೆ ನಿಯಮಿತ ನಿಲುಗಡೆಗಳನ್ನು ಮಾತ್ರ ಕೊಟ್ಟು, ರೈಲುಗಳನ್ನು ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಓಡಿಸಬೇಕು. ಸ್ಲೀಪರ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಓಡಿಸಬೇಕು ಎಂಬ ಬೇಡಿಕೆಯನ್ನು ಸಹ ರೈಲ್ವೆ ಸಚಿವರ ಮುಂದೆ ಇರಿಸಿದ್ದೇನೆ.

ಇದೇ ರೀತಿಯಲ್ಲಿ ದಿನವಹಿ ಆಧಾರದ ಮೇಲೆ ಇದೇ ಮಾರ್ಗದಲ್ಲಿ ವಿಶೇಷ ರೈಲನ್ನು ಓಡಿಸಬೇಕು. ಈ ಮೂರೂ ಬಗೆಯ ಸೇವೆಗಳಿಂದ ಮಧ್ಯ ಮತ್ತು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಸಾಮಾಜಿಕ, ಕೈಗಾರಿಕಾ ಮತ್ತು ಆರ್ಥಿಕ ಲಾಭವಾಗಲಿದೆ ಎಂದು ಮನವಿ ಪತ್ರದ ಮೂಲಕ ಕೇಳಿಕೊಳ್ಳಲಾಗಿದೆ. ನನ್ನ ಎಲ್ಲ ಮನವಿಗಳಿಗೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಎಕ್ಸ್ ಮೂಲಕ ಎಂಬಿ ಪಾಟೀಲ ಅವರು ತಿಳಿಸಿದರು.

ಹೈಟೆಕ್ ಹಾರ್ಡ್‌ವೇರ್ ಪಾರ್ಕ್

ಬಾಗಲೂರಿನ ಹೈಟೆಕ್ ಹಾರ್ಡ್‌ವೇರ್ ಪಾರ್ಕ್ ನಲ್ಲಿ ಜೆಟ್ ವೆರ್ಕ್ ಸಂಸ್ಥೆಯ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಉತ್ಪಾದನೆಗೆ ಚಾಲನೆ ನೀಡಿದ ಬಳಿಕ ಅಲ್ಲೇ ಕೆಲಹೊತ್ತು ವೈಷ್ಣವ್ ಅವರನ್ನು ಭೇಟಿಮಾಡಿ, ಮನವಿ ಪತ್ರಗಳನ್ನು ನೀಡಿದೆ. ಸಕಾರಾತ್ಮಕವಾಗಿ ಪರಿಶೀಲಿಸುವುದಾಗಿ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ.

Credit: Oneindia

More from DriveSpark

Article Published On: Sunday, February 8, 2026, 6:47 [IST]
English summary
MB Patil meets Railway Minister Ashwini Vaishnaw to push for Bengaluru-Mumbai High-Speed Rail Corridor and a Sleeper Vande Bharat Express to Vijayapura to boost connectivity.
Read more on notification
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+