Gruhalakshmi Scheme: ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್‌! ಬಿಗ್‌ ಅಪ್ಡೇಟ್‌ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್‌

By Prajwal B

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರ (Congress Govt) ಪಂಚ ಗ್ಯಾರಂಟಿ ಯೋಜನೆಗಳನ್ನು ಚುನಾವಣಾ ಅಸ್ತ್ರವಾಗಿ ಬಳಸಿತ್ತು. ಅದರಲ್ಲೂ ಗೃಹಲಕ್ಷ್ಮಿ ಯೋಜನೆ ಭಾರೀ ಮಹತ್ವವನ್ನು ಪಡೆದಿದೆ. 2023 ಜೂನ್‌ 6 ರಂದು ಆರಂಭವಾದ ಈ ಯೋಜನೆ, ಕುಟುಂಬದ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಇದರ ಉದ್ದೇಶ. ಆ ಪ್ರಕಾರ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮನೆಯ ಒಬ್ಬರಿಗೆ 2 ಸಾವಿರ ಹಣ ಸಿಗುತ್ತಿದೆ. ಆದರೆ ಕಳೆದ ವರ್ಷದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ (Gruha lakshmi Money) ಬಾಕಿಯಾಗಿತ್ತು.

Gruhalakshmi Scheme Update

ಗೃಹಲಕ್ಷ್ಮಿ ಹಣ ಬಾಕಿ ಬಗ್ಗೆ ಸದನದಲ್ಲಿ ಭಾರೀ ಚರ್ಚೆಯಾಗಿತ್ತು. ಅಲ್ಲದೇ ಸಿಎಂ ಸಿದ್ದರಾಮಯ್ಯ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕೂಡಾ ಈ ಬಗ್ಗೆ ಭರವಸೆ ನೀಡಿದ್ದರು. ಇದೀಗ ಮತ್ತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟಿದ್ದಾರೆ.

ಯಾವಾಗ ಸಿಗಲಿದೆ ಗೃಹಲಕ್ಷ್ಮಿ ಹಣ!
ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ಈಗಾಗಲೇ ಸರ್ಕಾರ ಬಿಡುಗಡೆ ಮಾಡಿದೆ. ಆದ್ದರಿಂದ ಸದ್ಯದಲ್ಲೇ ಇದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ ನೀಡಿದ್ದಾರೆ.

ಸಚಿವೆ ಹೇಳಿದ್ದೇನು?
ಬೆಳಗಾವಿಯಲ್ಲಿ ಜನವರಿ 19ರಂದು ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌, ಎರಡು ತಿಂಗಳ ಗೃಹಲಕ್ಷ್ಮಿ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರೆ. ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಮಹಿಳೆಯರ ಸ್ವಾವಲಂಬನೆ, ಆರ್ಥಿಕ ಸಬಲೀಕರಣ ಮತ್ತು ಕುಟುಂಬದ ಖರ್ಚುಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಗುರಿಯನ್ನು ಹೊಂದಿದೆ. ಇದುವರೆಗೆ ಈ ಯೋಜನೆಯಿಂದ ರಾಜ್ಯದಲ್ಲಿ 1.28 ಕೋಟಿ ಮಹಿಳೆಯರು ಫಲಾನುಭಿಗಳಾಗಿದ್ದಾರೆ ಎಂದು ಹೇಳಲಾಗಿದೆ.

ಗೃಹಲಕ್ಷ್ಮಿ ಯೋಜನೆಯ ಅರ್ಹತೆಗಳು:

  • ಅರ್ಜಿದಾರ ಮಹಿಳೆಯಾಗಿರಬೇಕು.
  • ಕರ್ನಾಟಕದ ನಿವಾಸಿಯಾಗಿರಬೇಕು.
  • ಕುಟುಂಬದಲ್ಲಿ ಒಬ್ಬ ಮಹಿಳೆ ಮಾತ್ರ (ರೇಷನ್‌ ಕಾರ್ಡ್‌ನಲ್ಲಿ ಹೆಸರಿರಬೇಕು)
  • ರೇಷನ್‌ ಕಾರ್ಡ್‌ ಹೊಂದಿರಬೇಕು.
  • ಇತರ ಯೋಜನೆಗಳಲ್ಲಿ ತೆರಿಗೆದಾರರಾಗಿರಬಾರದು ಅಥವಾ ಹೆಚ್ಚು ಆದಾಯ ಇಲ್ಲದವರಾಗಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

  • ಆನ್‌ಲೈನ್‌ನಲ್ಲಿ ಸೇವಾ ಸಿಂಧು ಅಥವಾ ಮಾಹಿತಿ ಕಣಜ ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು.
  • ಆಫ್‌ಲೈನ್‌ನಲ್ಲಿ ಗ್ರಾಮ ಪಂಚಾಯತ್‌, ತಹಸೀಲ್ದಾರ್‌ ಕಚೇರಿ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ.
  • ದಾಖಲೆಗಳು: ರೇಷನ್‌ ಕಾರ್ಡ್‌, ಆಧಾರ್‌ ಕಾರ್ಡ್‌, ಬ್ಯಾಂಕ್‌ ಅಕೌಂಟ್‌ ವಿವರ, ಫೋಟೋ

ತಿಂಗಳಿಗೆ 2 ಸಾವಿರದಂತೆ ಹಣ ಜಮಾ ಆಗುತ್ತಿತ್ತು. ಆದ್ರೆ ಕಳೆದ ವರ್ಷದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿರಲಿಲ್ಲ. ಅದಕ್ಕೆ ಕಾರಣ ಕೇಳಿದಾಗ ರೇಷನ್‌ ಕಾರ್ಡ್‌ ಪರಿಷ್ಕರಣೆ ಅಂತನೂ ಹೇಳಲಾಗಿತ್ತು. ಅಂದರೆ ಕಳೆದ ವರ್ಷ ಹಲವು ಅಕ್ರಮ ರೇಷನ್‌ ಕಾರ್ಡ್‌ಗಳನ್ನು ಪರಿಷ್ಕರಣೆ ನಡೆಸಲಾಗಿತ್ತು. ಅಲ್ಲದೇ ಕೆಲವು ರೇಷನ್‌ ಕಾರ್ಡ್‌ಗಳನ್ನು ಎಪಿಎಲ್‌ನಿಂದ ಬಿಪಿಎಲ್‌ಗೆ ವರ್ಗಾವಣೆಯನ್ನೂ ಮಾಡಲಾಗಿತ್ತು. ಅದೇ ಕಾರಣದಿಂದ ಕೆಲವರಿಗೆ ಹಣ ಜಮಾ ಆಗಲು ವಿಳಂಬವಾಗಿದೆ ಎಂದು ಸಚಿವೆ ತಿಳಿಸಿದ್ದರು.

Credit: Goodreturns

More from DriveSpark

Article Published On: Tuesday, January 20, 2026, 10:23 [IST]
Read more on notification
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+