Nelamangala National Highway 48: ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಖಾಸಗಿ ಬಸ್ ಅಪಘಾತ: 40 ಜನ ಪಾರು

By Hitesh Y

Nelamangala National Highway 48: ಕರ್ನಾಟಕದಲ್ಲಿ ಖಾಸಗಿ ಬಸ್‌ಗಳಲ್ಲಿ ಅವಘಡ ಸಂಭವಿಸುವುದು ಮುಂದುವರಿದಿದೆ. ಬೆಂಕಿ ಅವಘಡ ಹಾಗೂ ಅಪಘಾತಗಳು ಮುಂದುವರಿದಿವೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆಯಾದರೂ, ಈ ಮಾರ್ಗಸೂಚಿಗಳ ಅನುಷ್ಠಾನ ಆಗುತ್ತಿದೆಯೇ ಎನ್ನುವುದನ್ನು ಪರಿಶೀಲನೆ ಮಾಡುತ್ತಿಲ್ಲ. ಹೀಗಾಗಿ, ಕರ್ನಾಟಕದಲ್ಲಿ ಖಾಸಗಿ ಬಸ್‌ಗಳಲ್ಲಿ ಅವಘಡಗಳು ಸಂಭವಿಸುವುದು ಮುಂದುವರಿದಿದೆ. ಇದೀಗ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಆಗಿದೆ. ಇದರಿಂದ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಯಾವುದೇ ಸಾವು - ನೋವು ಸಂಭವಿಸಿಲ್ಲ. ಈ ಅಪಘಾತದಲ್ಲಿ 40 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೆಲಮಂಗಲ ಸಮೀಪದ ಹನುಮಂತಪುರ ಗೇಟ್ ಸಮೀಪಲ್ಲಿ ಫೆಬ್ರವರಿ 6ರ ಶುಕ್ರವಾರ ನಸುಕಿನ ವೇಳೆ ಖಾಸಗಿ ಬಸ್ ಅಪಘಾತ ಸಂಭವಿಸಿದೆ. ತುಮಕೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಸಂಚರಿಸುತ್ತಿದ್ದ ಸಂಜನಾ ಟ್ರಾವೆಲ್ಸ್‌ ಎನ್ನುವ ಸಂಸ್ಥೆಗೆ ಸೇರಿದ್ದ ಬಸ್ ಇದಾಗಿದೆ. ಹನುಮಂತಪುರ ಗೇಟ್ ಸಮೀಪಕ್ಕೆ ಬರುವ ಸಂದರ್ಭದಲ್ಲಿ ಚರಂಡಿಯ ಸ್ಲಾಬ್‌ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಬಸ್‌ ವೇಗವಾಗಿ ವಿದ್ಯುತ್ ಕಂಬಕ್ಕೆ ಗುದ್ದಿದೆ. ಡಿಕ್ಕಿ ಹೊಡೆದ ಕೂಡಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ್ದು, ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬಸ್‌ನಲ್ಲಿದ್ದ ಪ್ರಯಾಣಿಕರು ಬಸ್ಸಿನಿಂದ ಬೇಗ ಇಳಿದು ಓಡಿದ್ದಾರೆ.


Bus Hits Electric Pole

ಪ್ರಕರಣ ದಾಖಲು

ಇನ್ನು ಬಸ್ ಅವಘಡಕ್ಕೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಬೆಂಕಿಯ ಧಗೆಗೆ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

Shivamogga Bus Accident: ಶಿವಮೊಗ್ಗ ಬಸ್ ದುರಂತ: ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು 36 ಅಮೂಲ್ಯ ಜೀವ

ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

ಖಾಸಗಿ ಬಸ್ ಬೆಂಕಿ ಅವಘಡ ಹಿನ್ನೆಲೆಯಲ್ಲಿ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಸಂಚಾರ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Sleeper Bus New Rules: ಸ್ಲೀಪರ್ ಬಸ್ ದುರಂತ; ಸುರಕ್ಷತಾ ಮಾನದಂಡ ಬಿಗಿ: ಈ ಎಲ್ಲಾ ನಿಯಮದಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಹೆಚ್ಚುತ್ತಿದೆ ಖಾಸಗಿ ಬಸ್ ಅವಘಡ

ಕರ್ನಾಟಕದ ಖಾಸಗಿ ಬಸ್‌ಗಳಲ್ಲಿ ಅಪಘಾತಗಳು ಸಂಭವಿಸುವುದು ಹೆಚ್ಚಾಗಿದೆ. ಈಚೆಗೆ ಶಿವಮೊಗ್ಗ ಹಾಗೂ ಚಿತ್ರದುರ್ಗ ಮಾರ್ಗಗಳಲ್ಲಿ ಖಾಸಗಿ ಬಸ್ ಅಪಘಾತಗಳು ಸಂಭವಿಸಿದ್ದವು. ಶಿವಮೊಗ್ಗದಲ್ಲಿ ಸಂಭವಿಸಿದ್ದ ಬಸ್ ದುರಂತದಲ್ಲಿ ಯಾವುದೇ ಸಾವು ಸಂಭವಿಸಿರಲಿಲ್ಲ. ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿತ್ತು. ಆದರೆ ಚಿತ್ರದುರ್ಗದಲ್ಲಿ ಸಂಭವಿಸಿದ್ದ ಭೀಕರ ಬಸ್ ಅಪಘಡದಲ್ಲಿ 9 ಜನ ಸಜೀವ ದಹನವಾಗಿದ್ದರು. ಇಷ್ಟೆಲ್ಲ ದುರಂತ ಸಂಭವಿಸಿದರೂ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿಲ್ಲ.

Credit: Oneindia

More from DriveSpark

Article Published On: Friday, February 6, 2026, 10:15 [IST]
English summary
Nelamangala National Highway 48: Private Bus Hits Electric Pole, 40 Safe
Read more on notification
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+