ಕೆಎಸ್‌ಆರ್‌ಟಿಸಿಗೆ ಈ ವರ್ಷದೊಳಗೆ 1000 ಬಸ್ ಸೇರ್ಪಡೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸ ಕರ್ನಾಟಕ ಸಾರಿಗೆ (ಅಶ್ವಮೇಧ ಕ್ಲಾಸಿಕ್ ಪ್ರಯಾಣದ ಮರುಕಲ್ಪನೆ ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್) ಬಸ್ಸುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿ, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಈ ವರ್ಷ ಒಂದು ಸಾವಿರ ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು, ಇಂದು ನೂರು ಬಸ್ಸುಗಳ ಬಿಡುಗಡೆಯಾಗಿದೆ. ರಾಜ್ಯದ ಜನರಿಗೆ 4 ಕಾರ್ಪೋರೇಷನ್‍ಗಳು ಬಸ್ಸುಗಳ ಸೇವೆಯನ್ನು ಒದಗಿಸುತ್ತಿವೆ. ನಾಲ್ಕು ವರ್ಷಗಳಿಂದ ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ 3,800 ಬಸ್ಸುಗಳನ್ನು ಸ್ಥಗಿತಗೊಳಿಸಲಾಗಿತ್ತು.

1000-buses-added-to-ksrtc-within-this-year-chief-minister-siddaramaiah

ನಾವು ಅಧಿಕಾರಕ್ಕೆ ಬಂದ ನಂತರ ಸಂಸ್ಥೆಗೆ 5,800 ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದೇವೆ. ಈ ರಾಜ್ಯದ ಜನರಿಗೆ ಸುರಕ್ಷಿತ ಮತ್ತು ಸರಾಗ ಪ್ರಯಾಣ ಮಾಡಲು ಅಗತ್ಯ ಅನುಕೂಲಗಳನ್ನು ಮಾಡಿಕೊಡಲಿದ್ದೇವೆ. ಬೆಲೆಯೇರಿಕೆ, ಹಣದುಬ್ಬರ, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವ ಪರಿಸ್ಥಿತಿಯಲ್ಲೂ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡಿದ್ದೇವೆ ಎಂದರು.

ಸಿಬ್ಬಂದಿಗೆ ವಿಮಾ ಸೌಲಭ್ಯ: ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ವಿಮಾ ಸೌಲಭ್ಯವನ್ನು 1 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಕರ್ತವ್ಯದ ವೇಳೆ ಮೃತಪಡುವ ಸಿಬ್ಬಂದಿಗೆ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಚುನಾವಣಾ ಪೂರ್ವದಲ್ಲಿ ಹೇಳಿದಂತೆಯೇ ಮಹಿಳಾ ಸಬಲೀಕರಣಕ್ಕಾಗಿ ಕ.ರ.ಸಾ.ಸಂ ಮತ್ತು ಇತರೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿದ್ದೇವೆ ಎಂದರು.

1000-buses-added-to-ksrtc-within-this-year-chief-minister-siddaramaiah

ಹೊಸ ಬಸ್‌ಗಳ ವೈಶಿಷ್ಟ್ಯಗಳು: ವಾಹನದ ಎತ್ತರ 3.4 ಮೀಟರ್ (ಈ ಹಿಂದೆ 3.2 ಮೀಟರ್ ಇತ್ತು), ಆಸನಗಳ ಸಂಖ್ಯೆ 50, ಉತ್ತಮ ಗುಣಮಟ್ಟದ ಕುಷನ್ ಮತ್ತು ರೆಕ್ಸಿನ್ ಒಳಗೊಂಡಂತೆ ಪ್ರತಿ ಆಸನದ ಹಿಂಬದಿಯಲ್ಲಿ ಮ್ಯಾಗಜೈನ್ ಹಾಗೂ ನೀರಿನ ಬಾಟಲ್ ಪೌಚ್‌ನ ಸೌಕರ್ಯ, ವಾಹನದ ಹಿಂಭಾಗ ಹಾಗೂ ಮುಂಭಾಗದಲ್ಲಿ ವಿಶಾಲವಾದ ವಿಂಡ್‌ಶೀಲ್ಡ್ ನೀಡಲಾಗಿದೆ.

ವಿಶಾಲವಾದ ಪ್ರಯಾಣಿಕರ ಕಿಟಕಿ ಫ್ರೇಮ್, ಮೇಲ್ಛಾವಣಿಯಲ್ಲಿ 2 ಸಾಲು ಗ್ರಾಬ್ ರೈಲ್, ಬಸ್ಸಿನ ಹಿಂದೆ ಹಾಗೂ ಮುಂದೆ LED ಮಾರ್ಗ ಫಲಕ ಅಳವಡಿಕೆ, ಜಾಹೀರಾತು ಮಾದರಿಯ ಹ್ಯಾಂಡ್ ಗ್ರಿಪ್, FRP ಡ್ಯಾಷ್ ಬೋರ್ಡ್, ಪ್ರವೇಶದ ಫುಟ್‌ ಸ್ಟೆಪ್ಸ್ ಮೇಲೆ ಸ್ಟ್ರಿಪ್ ಮಾದರಿಯ LED ಬಲ್ಬ್‌ಗಳು, ಮುಂಬದಿ ಹಾಗೂ ಹಿಂಬದಿಯಲ್ಲಿ ತಲಾ 1 ಕ್ಯಾಮರಾ ಆಳವಡಿಸಲಾಗಿದೆ.

1000-buses-added-to-ksrtc-within-this-year-chief-minister-siddaramaiah

EBSC (ಎಲೆಕ್ಟ್ರಿಕ್ ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್ ಸಿಸ್ಟಮ್) ಅಳವಡಿಕೆ, Bs - 6 OBD - 2 ಕಂಪ್ಲೈಂಟ್, ವಾಹನಕ್ಕೆ ಟ್ರಾಕಿಂಗ್ ಉಪಕರಣ, ಪ್ಯಾನಿಕ್ ಬಟನ್‌ಗಳು ಮತ್ತು ಬಸ್ ನಿಲ್ದಾಣಗಳ ಮಾಹಿತಿ ನೀಡುವ ಧ್ವನಿವರ್ಧಕ ಯಂತ್ರಗಳನ್ನು ಅಳವಡಿಸಲಾಗಿದೆ. ಒಟ್ಟಾರೆ ಹೊಸ ವಾಹನಗಳು ಆಧುನಿಕ ಫೀಚರ್‌ಗಳನ್ನು ಒಳಗೊಂಡಿದ್ದು, ಪ್ರಯಾಣಿಕರಿಗೆ ಉತ್ತಮ ಪ್ರಯಾಣ ಅನುಭವ ನೀಡಲಿವೆ ಎಂದು ಕೆಸ್‌ಆರ್‌ಟಿಸಿ ತಿಳಿಸಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, February 5, 2024, 17:32 [IST]
English summary
1000 buses added to ksrtc within this year chief minister siddaramaiah
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+