ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಣಿ ಅಪಘಾತ: 11 ಮಂದಿ ಸ್ಥಳದಲ್ಲೇ ಸಾವು

Written By:

ನಿನ್ನೆ ನೆಡೆದ ಸರಣಿ ಅಪಘಾತದಲ್ಲಿ ಒಟ್ಟು 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಡೆದಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಣಿ ಅಪಘಾತ: 11 ಮಂದಿ ಸ್ಥಳದಲ್ಲೇ ಸಾವು

ಬೆಳ್ಳಂಬೆಳಗ್ಗೆ ಯಲ್ಲಾಪುರದಿಂದ ಅಂಕೋಲ ಕಡೆಗೆ ತೆರಳುತ್ತಿದ್ದ ಬೊಲೇರೋ ವಾಹನದ ಮದ್ಯೆ ಮತ್ತು ಅಂಕೋಲದಿಂದ ಯಲ್ಲಾಪುರದ ಕಡೆ ತೆರಳುತ್ತಿದ್ದ ಲಾರಿ ನಡುವೆ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 4 ಮಕ್ಕಳು ಸೇರಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಣಿ ಅಪಘಾತ: 11 ಮಂದಿ ಸ್ಥಳದಲ್ಲೇ ಸಾವು

ಜಿಲ್ಲೆಯ ಭಟ್ಕಳ ತಾಲ್ಲೂಕಿನ ಸೋಡಿಗದ್ದೆ ಕ್ರಾಸ್ ಬಳಿ ಮತ್ತೊಂದು ಅಪಘಾತ ಸಂಭವಿಸಿದೆ. ಮೀನು ಸಾಗಾಟದ ಲಾರಿ ಹಾಗೂ ಮೂರು ಬಸ್ ನಡುವೆ ಅಪಘಾತ ಸಂಭವಿಸಿ ಹಲವಾರು ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಣಿ ಅಪಘಾತ: 11 ಮಂದಿ ಸ್ಥಳದಲ್ಲೇ ಸಾವು

ಗೋವಾದಿಂದ ಕೇರಳಕ್ಕೆ ಮೀನು ಹೇರಿಕೊಂಡು ಹೋಗುತ್ತಿದ್ದ ಲಾರಿ ಹಾಗೂ ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಸಂಚರಿಸುತ್ತಿದ್ದ ಗಣೇಶ್ ಟ್ರಾವೆಲ್ಸ್ ಬಸ್ ನಡುವೆ ಅಪಘಾತ ಸಂಭವಿಸಿದೆ. ಈ ಸಂದರ್ಭ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್, ಇನ್ನೊಂದು ಖಾಸಗಿ ಬಸ್ ಗೆ ಹಿಂಬದಿಯಿಂದ ಡಿಕ್ಕಿಯಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಣಿ ಅಪಘಾತ: 11 ಮಂದಿ ಸ್ಥಳದಲ್ಲೇ ಸಾವು

ಲಾರಿ ಚಾಲಕ ಮಂಜೇಶ್ವರ ನಿವಾಸಿ ನಿಹಾದಿ ಅಬ್ದುಲ್ಲಾ ಜಿ ಎಸ್ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಉಳಿದಂತೆ ಖಾಸಗಿ ಬಸ್ ಚಾಲಕ ಗೌಸ್ ಸಾಹೇಬ್, ಕ್ಲೀನರ್ ಲೋಕೇಶ್ ಸೇರಿದಂತೆ ಹಲವಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದುಬಂದಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಣಿ ಅಪಘಾತ: 11 ಮಂದಿ ಸ್ಥಳದಲ್ಲೇ ಸಾವು

ಮತ್ತೊಂದು ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಎರಡೂ ಘಟನೆಗಳಿಂದ ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಪೊಲೀಸರು ವಾಹನ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿವೆ.

Read more on ಅಪಘಾತ accident
English summary
A lorry driver from Manjeshwar of Kasaragod district died on the spot while 17 others survived with injuries after a series of road accidents occurred at Bhatkal on Sept 13, Wednesday morning.
Story first published: Thursday, September 14, 2017, 15:28 [IST]
X

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark

We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more