ಮದುವೆಗೆ ಹೊರಟಿದ್ದ ಕ್ಯಾಂಟರ್ ಮರಕ್ಕೆ ಡಿಕ್ಕಿ- ಘಟನೆಯಲ್ಲಿ 13 ಮಂದಿ ದುರ್ಮರಣ

ಮದುವೆ ಸಂಭ್ರಮಕ್ಕಾಗಿ ಹೊರಟಿದ್ದ ಕ್ಯಾಂಟರ್ ಒಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 13 ಜನ ಮೃತಪಟ್ಟು 25 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಾಚಹಳ್ಳಿಯ ಬಳಿ ನಡೆದಿದೆ.

By Praveen

ಮದುವೆ ಸಂಭ್ರಮಕ್ಕಾಗಿ ಹೊರಟಿದ್ದ ಕ್ಯಾಂಟರ್ ಒಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 13 ಜನ ಮೃತಪಟ್ಟು 25 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಾಚಹಳ್ಳಿಯ ಬಳಿ ನಡೆದಿದೆ.

ಮದುವೆಗೆ ಹೊರಟಿದ್ದ ಕ್ಯಾಂಟರ್ ಮರಕ್ಕೆ ಡಿಕ್ಕಿ- 13 ಮಂದಿ ದುರ್ಮರಣ

ಕುಣಿಗಲ್‌-ಮದ್ದೂರು ಹೆದ್ದಾರಿಯ ಮಾಚಹಳ್ಳಿ ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ವೇಗದಲ್ಲಿದ್ದ ಕ್ಯಾಂಟರ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮದುವೆಗೆ ಹೊರಟಿದ್ದ ಕ್ಯಾಂಟರ್ ಮರಕ್ಕೆ ಡಿಕ್ಕಿ- 13 ಮಂದಿ ದುರ್ಮರಣ

ಮೃತರು ತಾಲ್ಲೂಕಿನ ಗಡಿ ಗ್ರಾಮಗಳಾದ ಯಡಾನಹಳ್ಳಿ ಹಾಗೂ ಅವಸರದಹಳ್ಳಿ ಗ್ರಾಮಕ್ಕೆ ಸೇರಿದವರಾಗಿದ್ದು, ಇವರೆಲ್ಲರು ರಾಜಣ್ಣ ಎಂಬುವರ ಮಗಳ ವಿವಾಹದಲ್ಲಿ ಪಾಲ್ಗೊಳ್ಳಲು ಕ್ಯಾಂಟರ್‌ನಲ್ಲಿ ಶಿವಪುರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಮದುವೆಗೆ ಹೊರಟಿದ್ದ ಕ್ಯಾಂಟರ್ ಮರಕ್ಕೆ ಡಿಕ್ಕಿ- 13 ಮಂದಿ ದುರ್ಮರಣ

ಮೃತರನ್ನು ಜಯಮ್ಮ, ಪಾರ್ವತಿ, ಬೀರಮ್ಮ, ಸಣ್ಣಮ್ಮ, ಮಾದಮ್ಮ, ಶಿವಣ್ಣ, ರೇಣುಕಮ್ಮ, ಸೋನ, ಮೀನಾಕ್ಷಿ, ಕಾಳಮ್ಮ, ಕಮಲಮ್ಮ, ಪೂಜಾ ಹಾಗೂ ಕರಿಯಪ್ಪ ಎಂದು ಗುರುತಿಸಲಾಗಿದ್ದು, ಗಾಯಾಳುಗಳಿಗೆ ಮದ್ದೂರು ತಾಲ್ಲೂಕು ಆಸ್ಪತ್ರೆ ಹಾಗೂ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Recommended Video

[Kannada] TVS Jupiter Classic Launched In India - DriveSpark
ಮದುವೆಗೆ ಹೊರಟಿದ್ದ ಕ್ಯಾಂಟರ್ ಮರಕ್ಕೆ ಡಿಕ್ಕಿ- 13 ಮಂದಿ ದುರ್ಮರಣ

ಇನ್ನು ದುರಂತಕ್ಕೆ ಚಾಲಕ ಮಾಡಿದ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದ್ದು, ಮತ್ತೊಂದು ವಾಹನವನ್ನು ಹಿಂದಿಕ್ಕಲು ಹೋಗಿ ಲಾರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಹೀಗಾಗಿ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಉರುಳಿ ಬಿದ್ದು ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆಗೆ ಹೊರಟಿದ್ದ ಕ್ಯಾಂಟರ್ ಮರಕ್ಕೆ ಡಿಕ್ಕಿ- 13 ಮಂದಿ ದುರ್ಮರಣ

ಇತ್ತ ತಮ್ಮವರನ್ನು ಕಳೆದುಕೊಂಡ ದುಃಖದಲ್ಲಿ ಆಸ್ಪತ್ರೆ ಬಳಿ ಬಂದಿರುವ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದ್ದು, ಸಾವು ನೋವಿನ ಕಣ್ಣೀರಿನ ನಡುವೆಯೇ ವಧು-ವರರು ಸಪ್ತಪದಿ ತುಳಿದಿದ್ದಾರೆ ಎನ್ನಲಾಗಿದೆ.

ಮದುವೆಗೆ ಹೊರಟಿದ್ದ ಕ್ಯಾಂಟರ್ ಮರಕ್ಕೆ ಡಿಕ್ಕಿ- 13 ಮಂದಿ ದುರ್ಮರಣ

ಚಾಲಕನ ಮಾಡಿದ ಒಂದು ತಪ್ಪಿನಿಂದ ದೊಡ್ಡ ಅನಾಹುತವೇ ನಡೆದಿದ್ದು, ಯಾವುದೇ ಕಾರಣಕ್ಕೂ ಮುಂಜಾಗ್ರತೆ ಇಲ್ಲದೇ ವೇಗದ ಚಾಲನೆ ಮಾಡುವ ಮುನ್ನ ಸಾಕಷ್ಟು ಎಚ್ಚರಿ ವಹಿಸುವುದು ಒಳಿತು.

Trending On DriveSpark Kannada:

ಎಚ್ಚರ... ಇನ್ಮುಂದೆ ಈ ಬೈಕುಗಳು ನೊಂದಣಿಯಾಗೋದಿಲ್ಲ !!

ಮುಕೇಶ್ ಅಂಬಾನಿ ಡ್ರೈವರ್ ಸಂಬಳ ಕೇಳಿದ್ರೆ ಬೆಚ್ಚಿ ಬೀಳ್ತೀರಾ !!

660 ಸಿಸಿ ಎಂಜಿನ್‌ನೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಆಲ್ಟೋ

More from DriveSpark

Article Published On: Monday, October 30, 2017, 11:02 [IST]
English summary
Read in Kannada about 13 dead 25 injured as canter hit tree near mandya.
Read more on accident ಅಪಘಾತ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+