ನಿಂತಿದ್ದ ಲಾರಿಗೆ ಜೀಪ್ ಡಿಕ್ಕಿ- ಘಟನೆಯಲ್ಲಿ 13 ಮಂದಿ ದುರ್ಮರಣ

Written By:

ಹೆದ್ದಾರಿ ಬಳಿ ನಿಂತಿದ್ದ ಲಾರಿಯೊಂದಕ್ಕೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಜೀಪ್‌ನಲ್ಲಿದ್ದ 13 ಮಂದಿ ದುರಂತವಾಗಿ ಸಾವಪ್ಪಿರುವ ಘಟನೆ ನಡೆದಿದ್ದು, 10ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

To Follow DriveSpark On Facebook, Click The Like Button
ನಿಂತಿದ್ದ ಲಾರಿಗೆ ಜೀಪ್ ಡಿಕ್ಕಿ- ಘಟನೆಯಲ್ಲಿ 13 ಮಂದಿ ದುರ್ಮರಣ

ಗುಜರಾತ್ ನ ಆನಂದ್ ಜಿಲ್ಲೆಯಲ್ಲಿ ಬರುವ ಅಹಮದಾಬಾದ್-ಇಂದೋರ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ನಿಂತಿದ್ದ ಲಾರಿಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಿಂತಿದ್ದ ಲಾರಿಗೆ ಜೀಪ್ ಡಿಕ್ಕಿ- ಘಟನೆಯಲ್ಲಿ 13 ಮಂದಿ ದುರ್ಮರಣ

ಮೃತರೆಲ್ಲಾ ಮಧ್ಯಪ್ರದೇಶದ ಅಲಿರಾಜ್ ಪುರ ಜಿಲ್ಲೆಯ ಸೇಜವಾಡಾ ಗ್ರಾಮದ ಕೂಲಿ ಕಾರ್ಮಿಕರು ಎಂದು ತಿಳಿದುಬಂದಿದ್ದು, ಅಹಮದಾಬಾದ್ ಸಮೀಪದ ಧೋಲ್ ಕಾ ದಿಂದ ಮರಳುತ್ತಿದ್ದಾಗ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ನಿಂತಿದ್ದ ಲಾರಿಗೆ ಜೀಪ್ ಡಿಕ್ಕಿ- ಘಟನೆಯಲ್ಲಿ 13 ಮಂದಿ ದುರ್ಮರಣ

ಮೃತರಲ್ಲಿ ಆರು ಮಹಿಳೆಯರು ಸೇರಿದಂತೆ ಒಟ್ಟು 13 ಮಂದಿ ಮೃತಪಟ್ಟಿದ್ದು, ಜೀಪ್ ಚಾಲಕ ಸಹ ಮೃತಪಟ್ಟಿದ್ದಾನೆ. ಇನ್ನುಳಿದಂತೆ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿಂತಿದ್ದ ಲಾರಿಗೆ ಜೀಪ್ ಡಿಕ್ಕಿ- ಘಟನೆಯಲ್ಲಿ 13 ಮಂದಿ ದುರ್ಮರಣ

ಇನ್ನು ಅಪಘಾತವಾದ ಜೀಪ್ ನಲ್ಲಿ ಒಟ್ಟು 25 ಮಂದಿ ಪ್ರಯಾಣಿಸುತ್ತಿದ್ದರು ಎಂದು ಗುಜರಾತ್ ಪೊಲೀಸರು ಮಾಹಿತಿ ನೀಡಿದ್ದು, ಕಾರು ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ತಪ್ಪದೇ ಓದಿ-ಸ್ಪ್ಲೆಂಡರ್ ಪ್ಲಸ್ ಬೈಕಿಗೆ 10,800 ರೂ ದಂಡ ಹಾಕಿದ್ರು !! ನಗರದಲ್ಲಿ ನಡೀತಿದೆ 'ಆಪರೇಷನ್‌ ಚೀತಾ'

ನಿಂತಿದ್ದ ಲಾರಿಗೆ ಜೀಪ್ ಡಿಕ್ಕಿ- ಘಟನೆಯಲ್ಲಿ 13 ಮಂದಿ ದುರ್ಮರಣ

ಆದ್ರೆ ಸ್ಥಳೀಯರ ಪ್ರಕಾರ ಅಪಘಾತಕ್ಕೆ ಲಾರಿ ಚಾಲಕನ ತಪ್ಪು ಇದೆ ಆರೋಪಿಸಲಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಘಟನೆಗೆ ನಿಖರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

Trending On DriveSpark Kannada:

ರಸ್ತೆ ಮೈಲುಗಲ್ಲುಗಳ ಬಗ್ಗೆ ಖಂಡಿತ ಈ ವಿಚಾರಗಳು ನಿಮಗೆ ಗೊತ್ತಿರೋದಿಲ್ಲ !!

ಮುಕೇಶ್ ಅಂಬಾನಿ ಡ್ರೈವರ್ ಸಂಬಳ ಕೇಳಿದ್ರೆ ಬೆಚ್ಚಿ ಬೀಳ್ತೀರಾ !!

ಡಿಜಿ ಲಾಕರ್ ಬಳಸಿದ್ದೇ ತಪ್ಪಾಯ್ತಾ? ಬೈಕ್ ಸವಾರನಿಗೆ 5 ಸಾವಿರ ದಂಡ ಹಾಕಿದ ಟ್ರಾಫಿಕ್ ಪೊಲೀಸರು..!!

Read more on accident ಅಪಘಾತ
English summary
Read in kannada about 13 Dead As Jeep Rams Into Truck On Ahmedabad-Indore Highway In Gujarat.
Story first published: Tuesday, November 7, 2017, 16:37 [IST]
Please Wait while comments are loading...

Latest Photos