ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ವಾಯು ಮಾಲಿನ್ಯವು ಭಾರತದ ಬಹುದೊಡ್ಡ ಸಮಸ್ಯೆಗಳಲ್ಲಿ ಒಂದಾಗಿದೆ. ವಾಯು ಮಾಲಿನ್ಯಕ್ಕೆ ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯೂ ಕಾರಣವಾಗಿದೆ. ಇದರ ಜೊತೆಗೆ ಕೃಷಿ ತ್ಯಾಜ್ಯಕ್ಕೆ ಬೆಂಕಿ ಹಚ್ಚುವುದು ಹಾಗೂ ಕಾರ್ಖಾನೆಗಳ ಹೊಗೆಯು ಸಹ ಕಾರಣವಾಗಿವೆ.

ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಂತೂ ವಾಯು ಮಾಲಿನ್ಯ ಪ್ರಮಾಣವು ವಿಪರೀತವಾಗಿ ಹದಗೆಟ್ಟಿದೆ. ಈ ಕಾರಣಕ್ಕಾಗಿ ಅಲ್ಲಿನ ಸರ್ಕಾರವು ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ, ಸಮ ಬೆಸ ಯೋಜನೆಯನ್ನು ಜಾರಿಗೊಳಿಸಿದೆ.

ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಇದರ ಜೊತೆಗೆ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ವಾಹನಗಳು ಬಿಡುಗಡೆಗೊಳಿಸುವ ಹೊಗೆಯು ಸಹ ವಾಯು ಮಾಲಿನ್ಯಕ್ಕೆ ಕಾರಣವಾಗಿದೆ. ಹಳೆಯ ವಾಹನಗಳಿಂದ ಉಂಟಾಗುತ್ತಿರುವ ವಾಯು ಮಾಲಿನ್ಯವು ಹೆಚ್ಚು ಕಳವಳಕ್ಕೆ ಕಾರಣವಾಗಿದೆ.

ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಈ ಕಾರಣಕ್ಕಾಗಿ ಹತ್ತು ವರ್ಷಕ್ಕೂ ಹಳೆಯ ವಾಹನಗಳನ್ನು ಸ್ಕ್ರಾಪ್ ಯೋಜನೆಯನ್ನು ಜಾರಿಗೊಳಿಸುವ ಉದ್ದೇಶವು ಸಹ ಕೇಂದ್ರ ಸರ್ಕಾರದ ಮುಂದಿದೆ. ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಉತ್ತೇಜಿಸಲಾಗುತ್ತಿದೆ.

ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ದೇಶಿಯ ಮಾರುಕಟ್ಟೆಯಲ್ಲಿರುವ ಬಹುತೇಕ ವಾಹನ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್ ಕಂಪನಿಗಳು ಪರಿಸರ ಸ್ನೇಹಿಯಾಗಿರುವ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ. ಜನರೂ ಸಹ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸುತ್ತಿದ್ದಾರೆ.

ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಐದು ವರ್ಷಗಳಿಗಿಂತ ಹೆಚ್ಚು ಕಾಲದಿಂದ ಬಳಕೆಯಲ್ಲಿರುವ ವಾಹನಗಳ ವಾಯು ಮಾಲಿನ್ಯ ಪ್ರಮಾಣವನ್ನು ಪರೀಕ್ಷಿಸುವುದರ ಮೂಲಕ ಅವುಗಳ ಜೀವಿತಾವಧಿಯನ್ನು ಪರೀಕ್ಷಿಸಲಾಗುತ್ತಿದೆ. ಇದಕ್ಕಾಗಿ ದೇಶದಲ್ಲಿರುವ ಆಟೋಮೊಬೈಲ್ ಡೀಲರ್‍‍ಗಳು ವಾಯು ಮಾಲಿನ್ಯ ತಪಾಸಣಾ ಕೇಂದ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.

ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಸಾರಿಗೆ ಇಲಾಖೆಯು ವಾಯು ಮಾಲಿನ್ಯ ತಪಾಸಣಾ ಕೇಂದ್ರವನ್ನು ಹೊಂದಿಲ್ಲದ ದೇಶಾದ್ಯಂತವಿರುವ 14 ಪ್ರಮುಖ ಆಟೋಮೊಬೈಲ್ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್‍‍ಗಳನ್ನು ಅಮಾನತುಗೊಳಿಸಿದೆ. ಇದರಿಂದಾಗಿ ಈ ಡೀಲರ್‍‍ಗಳು ಮುಂದಿನ ಎರಡು ತಿಂಗಳವರೆಗೆ ಯಾವುದೇ ವಾಹನಗಳನ್ನು ಮಾರಾಟ ಹಾಗೂ ರಫ್ತು ಮಾಡುವಂತಿಲ್ಲ.

MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿ‍ಎಲ್ ಕಳೆದುಕೊಂಡ ಡ್ರೈವರ್..!

ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಈ ಬಗ್ಗೆ ಮಾತನಾಡಿರುವ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಡೀಲರ್‍‍ಶಿಪ್ ತೆರೆಯುವಾಗ ವಿಧಿಸಲಾಗುವ ಮುಖ್ಯ ಷರತ್ತೆಂದರೆ ವಾಯು ಮಾಲಿನ್ಯ ತಪಾಸಣಾ ಕೇಂದ್ರವನ್ನು ಕಡ್ಡಾಯವಾಗಿ ಹೊಂದುವುದು. ಇವುಗಳನ್ನು ಹೊಂದಿಲ್ಲದಿದ್ದರೆ, ಡೀಲರ್‍‍ಗಳು ಯಾವುದೇ ವಾಹನಗಳನ್ನು ಮಾರಾಟ ಮಾಡುವಂತಿಲ್ಲವೆಂದು ತಿಳಿಸಿದರು.

MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ

ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ವಾಹನಗಳನ್ನು ಮಾರಾಟ ಮಾಡುವ ಪ್ರತಿ ಡೀಲರ್ ತಮ್ಮ ಬಳಿ ಬರುವ ವಾಹನವು ಎಷ್ಟು ಪ್ರಮಾಣದಲ್ಲಿ ಮಾಲಿನ್ಯವಾಗಿದೆ ಎಂಬುದನ್ನು ಪರೀಕ್ಷಿಸಬೇಕು. ಇದರ ಬಗ್ಗೆ ಮಾಹಿತಿಯನ್ನು ಈಗಾಗಲೇ ಸಂಬಂಧಪಟ್ಟ ಡೀಲರ್‍‍‍ಗಳಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.

MOST READ: ಕಾರು ಖರೀದಿಸಿದ ಮಾಲೀಕನ ಮೇಲೆ ಕೇಸ್ ಜಡಿದ ಎಂಜಿ ಮೋಟಾರ್..!

ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ

ಈ ಡೀಲರ್‍‍ಗಳು ವಾಯು ಮಾಲಿನ್ಯ ತಪಾಸಣಾ ಕೇಂದ್ರಗಳನ್ನು ಹೊಂದಿರುವುದು ಕಂಡು ಬಂದರೆ, ಮತ್ತೆ ಅವರಿಗೆ ವಾಹನಗಳನ್ನು ಮಾರಾಟ ಮಾಡುವ ಅವಕಾಶವನ್ನು ನೀಡಲಾಗುವುದು ಎಂದು ಆ ಅಧಿಕಾರಿ ಹೇಳಿದರು.

Most Read Articles

Kannada
English summary
Transport Department suspends vehicle dealers trade certificate - Read in Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X