ಪಶ್ಚಿಮ ಬಂಗಾಳದಲ್ಲಿ ಮೇ 30ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಕರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 15 ದಿನಗಳ ಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ. ಮೇ 16ರ ಬೆಳಿಗ್ಗೆ 6ರಿಂದ ಮೇ 30ರವರೆಗೆ ಪಶ್ಚಿಮ ಬಂಗಾಳದಲ್ಲಿ ಲಾಕ್‌ಡೌನ್ ಮುಂದುವರಿಯಲಿದೆ.

ಪಶ್ಚಿಮ ಬಂಗಾಳದಲ್ಲಿ ಮೇ 30ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿದ ಮಮತಾ ಬ್ಯಾನರ್ಜಿ

ಲಾಕ್‌ಡೌನ್ ಅವಧಿಯಲ್ಲಿ ಕೇವಲ ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ. ಇದರ ಜೊತೆಗೆ ಲಾಕ್‌ಡೌನ್ ಅವಧಿಯಲ್ಲಿ ಮೆಟ್ರೋ ರೈಲು ಹಾಗೂ ಬಸ್ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದಾಗಿ ತಿಳಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಮೇ 30ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿದ ಮಮತಾ ಬ್ಯಾನರ್ಜಿ

ಲಾಕ್‌ಡೌನ್ ಬಗ್ಗೆ ಘೋಷಿಸಿರುವ ಪಶ್ಕಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಮೇ 16ರಿಂದ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಖಾಸಗಿ ಸಂಸ್ಥೆಗಳನ್ನು ಮುಚ್ಚಲಾಗುವುದು. ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.

MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ಪಶ್ಚಿಮ ಬಂಗಾಳದಲ್ಲಿ ಮೇ 30ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿದ ಮಮತಾ ಬ್ಯಾನರ್ಜಿ

ಅಂತರ ರಾಜ್ಯ ಬಸ್ ಸೇವೆ, ಮೆಟ್ರೋ, ದೋಣಿ, ಜಿಮ್, ಸಿನೆಮಾ ಹಾಲ್, ಸಲೂನ್, ಈಜುಕೊಳಗಳನ್ನು ಸಹ ಮುಚ್ಚಲಾಗುವುದು. ದಿನಸಿ ಅಂಗಡಿಗಳು ಬೆಳಿಗ್ಗೆ 7ರಿಂದ ಬೆಳಿಗ್ಗೆ 10 ಗಂಟೆಯವರೆಗೆ ತೆರೆದಿರಲಿವೆ.

ಪಶ್ಚಿಮ ಬಂಗಾಳದಲ್ಲಿ ಮೇ 30ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿದ ಮಮತಾ ಬ್ಯಾನರ್ಜಿ

ಇದರಿಂದ ಈ ಅವಧಿಯಲ್ಲಿ ಜನರು ಅಗತ್ಯ ವಸ್ತುಗಳನ್ನು ಖರೀದಿಸಬಹುದು. 15 ದಿನಗಳ ಲಾಕ್‌ಡೌನ್ ಅವಧಿಯಲಿ ಪೆಟ್ರೋಲ್ ಬಂಕ್'ಗಳು ತೆರೆದಿರುತ್ತವೆ. ಅಗತ್ಯಸೇವೆಗಳಾದ ಹಾಲು, ನೀರು, ಔಷಧಿ, ವಿದ್ಯುತ್, ಅಗ್ನಿಶಾಮಕ, ಕಾನೂನು ಸುವ್ಯವಸ್ಥೆ ಹಾಗೂ ಮಾಧ್ಯಮಗಳಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ.

MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಪಶ್ಚಿಮ ಬಂಗಾಳದಲ್ಲಿ ಮೇ 30ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿದ ಮಮತಾ ಬ್ಯಾನರ್ಜಿ

ಇ-ಕಾಮರ್ಸ್ ಹಾಗೂ ಹೋಮ್ ಡೆಲಿವರಿ ಸೇವೆಗಳ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಎಲ್ಲಾ ರೀತಿಯ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಧಾರ್ಮಿಕ ಸಮಾರಂಭಗಳನ್ನು ನಿಷೇಧಿಸಲಾಗುತ್ತದೆ.

ಪಶ್ಚಿಮ ಬಂಗಾಳದಲ್ಲಿ ಮೇ 30ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿದ ಮಮತಾ ಬ್ಯಾನರ್ಜಿ

ಎಲ್ಲಾ ಕಾರ್ಖಾನೆಗಳು ಮುಚ್ಚಲ್ಪಡುತ್ತವೆ. 30%ನಷ್ಟು ಕಾರ್ಮಿಕರು ಮಿಲ್'ಗಳಲ್ಲಿ ಕೆಲಸ ಮಾಡಬಹುದು. ವಿವಾಹ ಸಮಾರಂಭಗಳಲ್ಲಿ 50 ಜನರಿಗೆ ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನರಿಗೆ ಅವಕಾಶ ನೀಡಲಾಗುವುದು.

MOST READ:10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಪಶ್ಚಿಮ ಬಂಗಾಳದಲ್ಲಿ ಮೇ 30ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿದ ಮಮತಾ ಬ್ಯಾನರ್ಜಿ

ಟ್ಯಾಕ್ಸಿ, ಆಟೋ ಹಾಗೂ ಖಾಸಗಿ ವಾಹನ ಸಂಚಾರಗಳು ಸಹ ಮೇ 30ರವರೆಗೆ ಸ್ಥಗಿತಗೊಳ್ಳಲಿವೆ. ಪಶ್ಚಿಮ ಬಂಗಾಳದಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಮೇ 30ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿದ ಮಮತಾ ಬ್ಯಾನರ್ಜಿ

ಶುಕ್ರವಾರ ಪಶ್ಚಿಮ ಬಂಗಾಳದಲ್ಲಿ 20,846 ಹೊಸ ಪ್ರಕರಣಗಳು ವರದಿಯಾಗಿವೆ. ಇದರಿಂದ ಪಶ್ಚಿಮ ಬಂಗಾಳದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,94,802ಕ್ಕೆ ಏರಿಕೆಯಾಗಿದೆ.

MOST READ:ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್‌ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು

ಪಶ್ಚಿಮ ಬಂಗಾಳದಲ್ಲಿ ಮೇ 30ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಿದ ಮಮತಾ ಬ್ಯಾನರ್ಜಿ

ನಿನ್ನೆ ಪಶ್ಚಿಮ ಬಂಗಾಳದಲ್ಲಿ 136 ಜನರು ಕರೋನಾ ವೈರಸ್ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರಿಂದಾಗಿ ಪಶ್ಚಿಮ ಬಂಗಾಳದಲ್ಲಿ ಕರೋನಾ ವೈರಸ್'ನಿಂದಸಾವನ್ನಪ್ಪಿದವರ ಸಂಖ್ಯೆ 12,993ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ತಿಳಿಸಿದೆ.

Most Read Articles

Kannada
English summary
15 days complete lockdown announced in West Bengal. Read in Kannada.
Story first published: Saturday, May 15, 2021, 18:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X