ಡ್ರೈವಿಂಗ್ ಲೈಸೆನ್ಸ್ ವಿಚಾರದಲ್ಲಿ ಯುವ ಸಮುದಾಯಕ್ಕೊಂದು ಸಿಹಿ ಸುದ್ದಿ...

Written By: Rahul TS

ದೇಶಾದ್ಯಂತ ಸಾರಿಗೆ ನಿಯಮಗಳ ಪ್ರಕಾರ 18 ವರ್ಷಕ್ಕಿಂತ ಮೇಲ್ಪಟ್ಟವರು ಮಾತ್ರ ಡ್ರೈವಿಂಗ್ ಲೈಸೆನ್ಸ್‌ಗೆ ಅರ್ಹರು ಎಂಬ ನಿಯಮ ಜಾರಿಗೆಯಲ್ಲಿದೆ. ಹೀಗಾಗಿರುವಾಗ 16ರಿಂದ 18ರ ವರ್ಷದೊಳಗಿನ ಯುವ ಸಮುದಾಯಕ್ಕೆ ಕೇಂದ್ರ ಸರ್ಕಾರ ಸಿಹಿಸುದ್ದಿಯೊಂದನ್ನು ಪ್ರಕಟಿಸಿದೆ.

ಡ್ರೈವಿಂಗ್ ಲೈಸೆನ್ಸ್ ವಿಚಾರದಲ್ಲಿ ಯುವ ಸಮುದಾಯಕ್ಕೊಂದು ಸಿಹಿ ಸುದ್ದಿ...

ಕೇಂದ್ರ ಸಾರಿಗೆ ಇಲಾಖೆಯು ಪ್ರಕಟಿಸಿರುವ ಹೊಸ ನಿಯಮಗಳ ಪ್ರಕಾರ 16 ವರ್ಷಕ್ಕಿಂತ ಮೇಲ್ಪಟ್ಟ ಮತ್ತು 18ಕ್ಕಿಂತ ಕೆಳಗಿನ ಯುವಕ ಯುವತಿಯರಿಗೆ ಇನ್ಮುಂದೆ ಡ್ರೈವಿಂಗ್ ಲೈಸೆನ್ಸ್‌ಗೆ ಅರ್ಹರು ಎಂಬ ನಿಯಮ ಜಾರಿಗೆ ಮಾಡಿರುವುದು ಭಾರೀ ಬದಲಾವಣೆಗೆ ಕಾರಣವಾಗಿದೆ. ಹೀಗಾಗಿ ಕಾನೂನು ಬಾಹಿರವಾಗಿ ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವ ಬದಲು ಕಾನೂನು ಬದ್ದವಾಗಿಯೇ ಚಾಲನೆ ಮಾಡಬಹುದು.

ಡ್ರೈವಿಂಗ್ ಲೈಸೆನ್ಸ್ ವಿಚಾರದಲ್ಲಿ ಯುವ ಸಮುದಾಯಕ್ಕೊಂದು ಸಿಹಿ ಸುದ್ದಿ...

ಆದ್ರೆ, ಕೇಂದ್ರ ಸರ್ಕಾರವು ಈ ಯೋಜನೆ ಜಾರಿಗೆ ಮಾಡುವ ಒಂದು ಪ್ರಮುಖ ನಿರ್ಣಯ ಕೈಗೊಳ್ಳಲಾಗಿದ್ದು, 16ರಿಂದ 18 ವರ್ಷದ ಯವಕ ಮತ್ತು ಯುವತಿ 100ಸಿಸಿಗಿಂತ ಕೆಳಮಟ್ಟದ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ಸ್ಕೂಟರ್‌ಗಳನ್ನು ಮಾತ್ರ ಚಾಲನೆ ಮಾಡಲು ಅರ್ಹರು ಎಂದು ಹೇಳಿದೆ.

ಡ್ರೈವಿಂಗ್ ಲೈಸೆನ್ಸ್ ವಿಚಾರದಲ್ಲಿ ಯುವ ಸಮುದಾಯಕ್ಕೊಂದು ಸಿಹಿ ಸುದ್ದಿ...

ಪ್ರಸ್ತುತ ಇರವ ಕಾಯ್ದೆಯ ಪ್ರಕಾರ 16 ರಿಂದ 18 ವರ್ಷದವರೆಗಿನ ಯುವ ಜನತೆಯು 50ಸಿಸಿಯವರೆಗಿನ ಗೇರ್‍‍ಲೆಸ್ ದ್ವಿಚಕ್ರ ವಾಹನಗಳನ್ನು ಚಲಾಯಿಸಲು ಮಾತ್ರ ಅವಕಾಶವಿತ್ತು. ಆದ್ರೆ ದೇಶಿಯ ಮಾರುಕಟ್ಟೆಯಲ್ಲಿ 50ಸಿಸಿ ಗಿಂತ ಕಡಿಮೆ ಯಿರುವ ಯಾವುದೇ ಬೈಕ್ ಮಾದರಿಗಳು ಇಲ್ಲದೇ ಇರುವ ಹಿನ್ನೆಲೆ ಹಳೆಯ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ.

ಡ್ರೈವಿಂಗ್ ಲೈಸೆನ್ಸ್ ವಿಚಾರದಲ್ಲಿ ಯುವ ಸಮುದಾಯಕ್ಕೊಂದು ಸಿಹಿ ಸುದ್ದಿ...

ದೇಶದಲ್ಲಿ 16 ರಿಂದ 18 ವರ್ಷದೊಳಗಿನ ಯುವಕ-ಯುವತಿಯರು ಅಕ್ರಮವಾಗಿ ವಾಹನ ಚಲಾನೆ ಮಾಡುತ್ತಿರುವ ಕಾರಣ ಭಾರೀ ಸಮಸ್ಯೆಯಾಗುತ್ತಿದ್ದು, ಇದರಿಂದಾಗಿಯೇ ಸಾರಿಗೆ ಇಲಾಖೆಯು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.

ಡ್ರೈವಿಂಗ್ ಲೈಸೆನ್ಸ್ ವಿಚಾರದಲ್ಲಿ ಯುವ ಸಮುದಾಯಕ್ಕೊಂದು ಸಿಹಿ ಸುದ್ದಿ...

ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ಪೊಲೀಸರು ಕಾನೂನು ಬಾಹಿರವಾಗಿ ಬೈಕ್ ಚಾಲನೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿದಿನ ನೂರಾರು ಪ್ರಕರಣಗಳು ದಾಖಲಾಗುತ್ತಿವೆ. ಜೊತೆಗೆ ನಿಯಮ ಬಾಹಿರವಾಗಿ ಬೈಕ್ ಚಾಲನೆಗೆ ಅವಕಾಶ ಮಾಡಿಕೊಟ್ಟ ಪೋಷಕರನ್ನು ಸಹ ಬಂಧನ ಮಾಡುತ್ತಿರುವುದು ಬಹುತೇಕರಿಗೆ ಗೊತ್ತಿರುವ ವಿಚಾರ.

ಡ್ರೈವಿಂಗ್ ಲೈಸೆನ್ಸ್ ವಿಚಾರದಲ್ಲಿ ಯುವ ಸಮುದಾಯಕ್ಕೊಂದು ಸಿಹಿ ಸುದ್ದಿ...

ಇದರಿಂದ ಕೇಂದ್ರ ಸರ್ಕಾರವು ಜಾರಿ ಮಾಡಿರುವ ಹೊಸ ನಿಯಮದಿಂದ ಮುಂಬರುವ ದಿನಗಳಲ್ಲಿ ಈ ಸಮಸ್ಯೆಯನ್ನು ನಿವಾರಿಸಬಹುದಾಗಿದ್ದು, ಹೊಸ ಕಾಯ್ದೆಯನ್ನು ಮುಂದಿನ ಕೆಲವೇ ದಿನಗಳಲ್ಲಿ ಜಾರಿ ಮಾಡುವ ಬಗ್ಗೆ ಕೇಂದ್ರ ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಡ್ರೈವಿಂಗ್ ಲೈಸೆನ್ಸ್ ವಿಚಾರದಲ್ಲಿ ಯುವ ಸಮುದಾಯಕ್ಕೊಂದು ಸಿಹಿ ಸುದ್ದಿ...

ಇನ್ನು ಈ ಕಾಯ್ದೆಯನ್ನು ಸರ್ಕಾರವು ಜಾರಿಗೆ ತಂದಲ್ಲಿ ಹದಿಹರೆಯದ ಯುವಕ ಯುವತಿಯರು ಕಾನೂನುಬದ್ಧವಾಗಿ ದ್ವಿಚಕ್ರ ವಾಹನಗಳನ್ನು ಚಲಾಯಿಸಬಹುದಾಗಿದ್ದು, ಮಾರುಕಟ್ಟೆಯಲ್ಲಿ ಈಗಾಗಲೇ 100ಸಿಸಿಗಿಂತ ಕಡಿಮೆಯಿರುವ ಕೆಲವು ಸ್ಕೂಟರ್‍ ಮಾದರಿಗಳು ಲಭ್ಯವಿರುವುದು ಮತ್ತೊಂದು ಪ್ಲಸ್ ಪಾಯಿಂಟ್.

ಡ್ರೈವಿಂಗ್ ಲೈಸೆನ್ಸ್ ವಿಚಾರದಲ್ಲಿ ಯುವ ಸಮುದಾಯಕ್ಕೊಂದು ಸಿಹಿ ಸುದ್ದಿ...

ಹೀಗಾಗಿ 100ಸಿಸಿಗಿಂತ ಹೆಚ್ಚಿನ ಎಂಜಿನ್ ಸಾಮರ್ಥ್ಯದ ಬೈಕ್ ಅಥವಾ ಸ್ಕೂಟರ್‌ಗಳನ್ನು ಚಾಲನೆ ಮಾಡಲು 18 ವರ್ಷ ದಾಟಿರಲೇಬೇಕು ಎಂಬ ನಿಯಮ ಕಡ್ಡಾಯವಾಗಿರಲಿದ್ದು, 16ರಿಂದ 18 ವರ್ಷದೊಳಗಿನ ಯುವಕ-ಯುವತಿಯರಿಗೆ ಇದು ಸಹಕಾರಿಯಾಗಲಿದೆ.

ಡ್ರೈವಿಂಗ್ ಲೈಸೆನ್ಸ್ ವಿಚಾರದಲ್ಲಿ ಯುವ ಸಮುದಾಯಕ್ಕೊಂದು ಸಿಹಿ ಸುದ್ದಿ...

ಡ್ರೈವ್‌ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:

ಯಾಕ್ರಿ ಲಂಚ ಕೊಡ್ತಿರಾ? ಇನ್ಮುಂದೆ ಸುಲಭದಲ್ಲೇ ಸಿಗಲಿದೆ ಡ್ರೈವಿಂಗ್ ಲೈಸೆನ್ಸ್..!!

ಇದು ಆರ್‌ಇ ಬುಲೆಟ್‌ ಅಲ್ಲಾ ಕಣ್ರೀ 100ಸಿಸಿ ರಾಯಲ್ ಇಂಡಿಯನ್ ಬೈಕ್...

ಹೆಲ್ಮೆಟ್ ವಿಚಾರವಾಗಿ ಮಾರಾಮಾರಿ- ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಪೊಲೀಸರು..

ಹೆಲ್ಮೆಟ್ ಹಾಕದ ಬೈಕ್ ಸವಾರನ ಮೇಲೆ ಶೂ ಎಸೆದ ಟ್ರಾಫಿಕ್ ಪೊಲೀಸ್....

ವಿಡಿಯೋ- ಟೊಯೊಟಾ ಇನೋವಾ ಗುದ್ದಿದ ರಭಸಕ್ಕೆ 30 ಅಡಿ ದೂರ ಹೋಗಿ ಬಿದ್ದ ಯುವಕ...

ಟ್ರಾಫಿಕ್ ರೂಲ್ಸ್ ಬ್ರೇಕ್- ಮಗನನ್ನೇ ಹಿಡಿದು ದಂಡ ವಸೂಲಿ ಮಾಡಿದ ಪೊಲೀಸ್..

English summary
16-18-Year-Olds To Get Licence To Ride 100cc Automatic Scooters.

Latest Photos

ಕರ್ನಾಟಕ ವಿಧಾನಸಭೆ ಚುನಾವಣೆ 2018

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark