ಲಾಕ್‌ಡೌನ್ ಉಲ್ಲಂಘಿಸಿದ 2 ಸಾವಿರಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ಭಾರತದಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ಬಾರದೇ ವೇಗವಾಗಿ ಹರಡುತ್ತಿದೆ. ಕೆಲವು ದಿನಗಳ ಹಿಂದೆ ಪ್ರಪಂಚದ ಹೆಚ್ಚು ಸೋಂಕಿತರಿರುವ ದೇಶಗಳ ಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದ್ದ ಭಾರತವು ಈಗ ಮೂರನೇ ಸ್ಥಾನಕ್ಕೇರಿದೆ.

ಲಾಕ್‌ಡೌನ್ ಉಲ್ಲಂಘಿಸಿದ 2 ಸಾವಿರಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ಈ ಕಾರಣಕ್ಕೆ ಲಾಕ್‌ಡೌನ್ ಅನಿವಾರ್ಯವಾಗಿದ್ದು, ಸರ್ಕಾರಗಳು ಲಾಕ್‌ಡೌನ್ ಅವಧಿಯಲ್ಲಿ ವಿನಾಕಾರಣ ಮನೆಯಿಂದ ಹೊರಬರದಂತೆ ಜನರಿಗೆ ಮನವಿ ಮಾಡಿವೆ. ಆದರೂ ಜನರು ಲಾಕ್ ಡೌನ್ ಗೂ ತಮಗೂ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಪೊಲೀಸರು ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೊರಬರುವ ವಾಹನಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.

ಲಾಕ್‌ಡೌನ್ ಉಲ್ಲಂಘಿಸಿದ 2 ಸಾವಿರಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾದಲ್ಲಿ ಮಂಗಳವಾರ ಲಾಕ್‌ಡೌನ್ ಉಲ್ಲಂಘಿಸಿದ 2 ಸಾವಿರ ವಾಹನಗಳನ್ನು ವಶಕ್ಕೆ ಪಡೆಯಲಾಗಿದ್ದು, 7 ಜನರನ್ನುಬಂಧಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸರು ತಿಳಿಸಿದ್ದಾರೆ.

MOST READ:ಪೊಲೀಸರಿಗೆ ತಲೆ ನೋವು ತಂದಿಟ್ಟ ಸೀಜ್ ಆದ ವಾಹನಗಳು

ಲಾಕ್‌ಡೌನ್ ಉಲ್ಲಂಘಿಸಿದ 2 ಸಾವಿರಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ಗೌತಮ್ ಬುದ್ಧ ನಗರದಲ್ಲಿ 24 ಗಂಟೆಗಳ ಅವಧಿಯಲ್ಲಿ 3,614 ಕರೋನಾ ಪಾಸಿಟಿವ್ ಪ್ರಕರಣಗಳು ಬಂದಿದ್ದು, 33 ಸೋಂಕಿತ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಗೌತಮ್ ಬುದ್ಧ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್‌ಡೌನ್ ಉಲ್ಲಂಘನೆಯ ನೂರಾರು ಪ್ರಕರಣಗಳು ದಾಖಲಾಗುತ್ತಿವೆ.

ಲಾಕ್‌ಡೌನ್ ಉಲ್ಲಂಘಿಸಿದ 2 ಸಾವಿರಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ಕೋವಿಡ್ -19 ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಯಲು ಜಾರಿಗೊಳಿಸಲಾಗಿರುವ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ 690 ವಾಹನ ಮಾಲೀಕರನ್ನು ಕಳೆದ ವಾರ ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾದಲ್ಲಿ ಬಂಧಿಸಲಾಗಿತ್ತು.

MOST READ:ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ

ಲಾಕ್‌ಡೌನ್ ಉಲ್ಲಂಘಿಸಿದ 2 ಸಾವಿರಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ಮಾರ್ಚ್ 23ರಿಂದ ಜಾರಿಗೆ ಬಂದ ಮೊದಲ ಹಂತದ ಲಾಕ್‌ಡೌನ್ ನಂತರ ಉತ್ತರ ಪ್ರದೇಶದ ಗೌತಮ್ ಬೌದ್ಧ ನಗರದಲ್ಲಿ ಇದುವರೆಗೂ 8,300 ಕ್ಕೂ ಹೆಚ್ಚು ಜನರನ್ನು ಲಾಕ್ ಡೌನ್ ಉಲ್ಲಂಘಿಸಿದ ಕಾರಣಕ್ಕೆ ಬಂಧಿಸಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ವಾಹನಗಳಿಗೂ ದಂಡ ವಿಧಿಸಲಾಗಿದೆ.

ಲಾಕ್‌ಡೌನ್ ಉಲ್ಲಂಘಿಸಿದ 2 ಸಾವಿರಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ಗೌತಮ್ ಬುದ್ಧ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಒಂದೇ ಸ್ಥಳದಲ್ಲಿ ಹೆಚ್ಚಿನ ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ನೋಯ್ಡಾ-ದೆಹಲಿ ಗಡಿಯನ್ನು ಬಂದ್ ಮಾಡಲಾಗಿದ್ದು, ಅಗತ್ಯ ಹಾಗೂ ತುರ್ತು ಸೇವೆಯ ವಾಹನಗಳಿಗೆ ಮಾತ್ರ ಗಡಿ ದಾಟಲು ಅವಕಾಶ ನೀಡಲಾಗಿದೆ.

MOSTREAD: ಕೆಟ್ಟು ನಿಂತ ವಾಹನಗಳನ್ನು ತಳ್ಳುವ ಜನಪ್ರಿಯ ವಿಧಾನವಿದು

ಲಾಕ್‌ಡೌನ್ ಉಲ್ಲಂಘಿಸಿದ 2 ಸಾವಿರಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ಕಟ್ಟುನಿಟ್ಟಿನ ಸೂಚನೆಗಳ ಹೊರತಾಗಿಯೂ, ಜನರು ಗಡಿ ದಾಟಲು ಪ್ರಯತ್ನಿಸುತ್ತಿದ್ದಾರೆ. ಅಂತಹ ಜನರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದೇ ವೇಳೆ ಮಹಾರಾಷ್ಟ್ರ ಪೊಲೀಸರು ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ 29,000ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಲಾಕ್‌ಡೌನ್ ಉಲ್ಲಂಘಿಸಿದ 2 ಸಾವಿರಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಪೊಲೀಸರು

ಮಹಾರಾಷ್ಟ್ರ ಪೊಲೀಸರು ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ 1.6 ಲಕ್ಷ ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದರ ಜೊತೆಗೆ ನಿಯಮ ಉಲ್ಲಂಘಿಸಿದ ವಾಹನಗಳಿಗೆ ರೂ.11 ಕೋಟಿ ದಂಡ ವಿಧಿಸಲಾಗಿದೆ.

Most Read Articles

Kannada
English summary
2000 vehicles seized for lockdown violations. Read in Kannada.
Story first published: Wednesday, July 15, 2020, 19:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X