ಹೊಚ್ಚ ಹೊಸ ಮಾರುತಿ ಕಾರನ್ನು ತಂದೆಯೊಂದಿಗೆ ವಿತರಣೆ ಪಡೆದ 21ರ ಸುಂದರ ಗಾಯಕಿ!
ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಜೀವದಲ್ಲಿ ಹೊಸ ಕಾರು ಖರೀದಿಯಬೇಕೆಂಬುದು ದೊಡ್ಡ ಆಸೆಯಾಗಿರುತ್ತದೆ. ಪ್ರತಿಯೊಬ್ಬರಿಗೂ ಮೊದಲ ಕಾರು ಕೊಂಡುಕೊಂಡಾಗ ಆಗುವ ಸಂತೋಷ ಹೇಳತೀರದು. ಈಗ ಗುಜರಾತಿ ಗಾಯಕಿ ಅಲ್ವಿರಾ ಮಿರ್ ಹೊಚ್ಚ ಹೊಸ ಮಾರುತಿ ಸುಜುಕಿ ಗ್ರಾಂಡ್ ವಿಟಾರಾ ಕಾರನ್ನು ಖರೀದಿಸಿದ್ದಾರೆ.
21ರ ಯುವ ಗಾಯಕಿ ಅಲ್ವಿರಾ ಮಿರ್ ಅವರು, ನೂತನ ಮಾರುತಿ ಸುಜುಕಿ ಗ್ರಾಂಡ್ ವಿಟಾರಾ ಕಾರನ್ನು ನೆಕ್ಸಾ ಡೀಲರ್‌ಶಿಪ್ ನಲ್ಲಿ ತಂದೆಯೊಂದಿಗೆ ವಿತರಣೆ ಪಡೆಯುತ್ತಿರುವ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. '20 - 21ನೇ ವಯಸ್ಸಿನಲ್ಲಿ ಸ್ವಂತ ಪರಿಶ್ರಮದಿಂದ ಹೊಸ ಕಾರು ಕೊಂಡುಕೊಂಡಿರುವ ಸಂತೋಷವನ್ನು ವಿವರಿಸಲು ಆಗುವುದಿಲ್ಲ. ದೇವರ ದಯೆ, ನಿಮ್ಮೆಲ್ಲರ ಪ್ರೀತಿಯಿಂದ ಇದು ಸಾಧ್ಯವಾಗಿದೆ' ಎಂದು ಬರೆದುಕೊಂಡಿದ್ದಾರೆ.

ಗಾಯಕಿ ಅಲ್ವಿರಾ ಮಿರ್ (Alvira Mir) ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಅಲ್ವಿರಾ, ಮಾರುತಿ ಸುಜುಕಿ ಗ್ರಾಂಡ್ ವಿಟಾರಾ (Maruti Suzuki Grand Vitara) ಕಾರಿನ ಯಾವ ರೂಪಾಂತರವನ್ನು ಖರೀದಿಸಿದ್ದಾರೆ ಎಂಬುದರ ಬಗ್ಗೆ ವಿವರಗಳಿಲ್ಲ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಈ ಎಸ್‌ಯುವಿ ರೂ.10.70 ಲಕ್ಷದಿಂದ ರೂ.19.99 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.
ಮಾರುತಿ ಸುಜುಕಿ ಗ್ರಾಂಡ್ ವಿಟಾರಾ, 1.5-ಲೀಟರ್ ಪೆಟ್ರೋಲ್ ಸ್ಟ್ರಾಂಗ್ ಹೈಬ್ರಿಡ್, ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದೆ. ರೂಪಾಂತರಗಳ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್, ಇ-ಸಿವಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ. ಜೊತೆಗೆ 2WD (ಟೂ ವೀಲ್ ಡ್ರೈವ್), AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ.

ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ವಿನ್ಯಾಸ ದೃಷ್ಟಿಯಿಂದಲೂ ಅತ್ಯಾಕರ್ಷಕವಾಗಿದ್ದು, ನೋಡುಗರನ್ನು ಸೆಳೆಯುತ್ತದೆ. ಇಂಧನ ದಕ್ಷತೆ ವಿಚಾರವಾಗಿ ಹೇಳುವುದಾದರೆ, ಪೆಟ್ರೋಲ್ ರೂಪಾಂತರಗಳು 19.38 ಕೆಎಂಪಿಎಲ್ - 25.45 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 26.6 ಕಿ.ಮೀ/ಕೆಜಿ ಮೈಲೇಜ್ ಕೊಡುತ್ತದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಗ್ರ್ಯಾಂಡ್ಯೂರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೆ ಸಿಗುತ್ತದೆ.
ಮಾರುತಿ ಸುಜುಕಿ ಗ್ರಾಂಡ್ ವಿಟಾರಾ ಯುವ ಗ್ರಾಹಕರನ್ನು ಆಕರ್ಷಿಸುವ ಭರಪೂರ ವೈಶಿಷ್ಟ್ಯಗಳನ್ನು ಪಡೆದಿದೆ. 9 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಹಾಗೂ ಹೆಡ್ಸ್ ಅಪ್ ಡಿಸ್ಪ್ಲೇಯನ್ನು ಒಳಗೊಂಡಿದೆ.
ದೇಶದಲ್ಲಿ ಖರೀದಿಗೆ ದೊರೆಯುವ ಸುರಕ್ಷಿತ ಕಾರುಗಳಲ್ಲಿ 'ಗ್ರಾಂಡ್ ವಿಟಾರಾ' ಸಹ ಒಂದಾಗಿದೆ. ವಿಶೇಷವಾಗಿ 6 ಏರ್‌ಬ್ಯಾಗ್ಸ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications