ಅಂಬಾನಿ ಬಂಧುವಲ್ಲ.. ಸ್ವಂತ ಹಣದಲ್ಲಿ ಹೊಸ 'ರೋಲ್ಸ್ ರಾಯ್ಸ್' ಕಾರು ಖರೀದಿಸಿದ ಅತಿ ಕಿರಿಯ ಉದ್ಯಮಿ!
'ರೋಲ್ಸ್ ರಾಯ್ಸ್' ಕಾರನ್ನು ಆಗರ್ಭ ಶ್ರೀಮಂತ ಉದ್ಯಮಿಗಳು, ಖ್ಯಾತ ಸೆಲೆಬ್ರಿಟಿಗಳು ಹಾಗೂ ಕ್ರಿಕೆಟಿಗರು ಖರೀದಿ ಮಾಡುವುದು ಸರ್ವೇ ಸಾಮಾನ್ಯ. ಸದ್ಯ, ಆ ಸಾಲಿಗೆ 25 ವರ್ಷದ ಯುವ ಉದ್ಯಮಿ ಕೂಡ ಸೇರ್ಪಡೆಯಾಗಿದ್ದಾರೆ. ಇತ್ತೀಚೆಗೆ ವಿವಿಧ ಉದ್ದಿಮೆಗಳಲ್ಲಿ ತೊಡಗಿಸಿಕೊಂಡಿರುವ ಕೃಷ್ಣ ಅರೋರಾ (Krishna Arora) ಅವರು, ತಾವು ಕಷ್ಟಪಟ್ಟು ದುಡಿದ ಹಣದಲ್ಲಿ ದುಬಾರಿ ಬೆಲೆಯ ಹೊಚ್ಚ ಹೊಸ ರೋಲ್ಸ್ ರಾಯ್ಸ್ (Rolls Royce) ಕಾರನ್ನು ಖರೀದಿ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಇದಕ್ಕೆ ಸಂಬಂಧಿಸಿದ ವಿಡಿಯೋವೊಂದನ್ನು ಕೃಷ್ಣ ಅರೋರಾ ಅವರು, ಸ್ವತಃ ತಮ್ಮ ಯುಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದಾರೆ. ನೂತನ ರೋಲ್ಸ್ ರಾಯ್ಸ್ ಕಾರನ್ನು ಕೃಷ್ಣ ಅರೋರಾ ತಂದೆ, ತಾಯಿಯೊಂದಿಗೆ ದುಬೈನ ಶೋರೂಂ ತೆರಳಿ ಡೆಲಿವರಿ ಪಡೆದುಕೊಳ್ಳುತ್ತಿರುವುದನ್ನು ಕಾಣಬಹುದು. ಅತಿ ಕಿರಿಯ ವಯಸ್ಸಿನಲ್ಲಿ ಹೊಸ ರೋಲ್ಸ್ ರಾಯ್ಸ್ ಕಾರನ್ನು ತೆಗೆದುಕೊಂಡಿರುದಕ್ಕೆ ಸ್ನೇಹಿತರು ಹಾಗೂ ಫಾಲೋವರ್‌ಗಳಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಕೃಷ್ಣ ಅರೋರಾ ಅವರು ರೋಲ್ಸ್ ರಾಯ್ಸ್ ಘೋಸ್ಟ್ (Rolls Royce Ghost) ಕಾರನ್ನು ಕೊಂಡುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕಾರು ರೂ.6.95 ಕೋಟಿಯಿಂದ ರೂ.7.95 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಕೃಷ್ಣ ಅರೋರಾ ತಮ್ಮ ಅಭಿರುಚಿಗೆ ತಕ್ಕಂತೆ ಈ ಕಾರಿನಲ್ಲಿ ಒಂದಷ್ಟು ಬದಲಾವಣೆಗಳನ್ನು ಸಹ ಮಾಡಿಸಿದ್ದಾರೆ.
ನೂತನ ರೋಲ್ಸ್ ರಾಯ್ಸ್ ಘೋಸ್ಟ್ ಕಾರು 6.75-ಲೀಟರ್ ಟ್ವಿನ್ ಟರ್ಬೊ ವಿ12 ಪೆಟ್ರೋಲ್ ಎಂಜಿನ್ ಹೊಂದಿದೆ. ಇದು 571 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 850 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.

ಈ ಕಾರು 6.33 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 250 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 4.8 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಎಡಬ್ಲ್ಯೂಡಿ (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 490 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್‌ನ್ನು ಒಳಗೊಂಡಿದೆ.
ಹೊಸ ರೋಲ್ಸ್ ರಾಯ್ಸ್ ಘೋಸ್ಟ್ ಹಲವು ನವೀನ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ ದೊಡ್ಡ ಗಾತ್ರದ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಹೆಡ್-ಅಪ್ ಡಿಸ್‌ಪ್ಲೇ, 1300ಡಬ್ಲ್ಯೂ ಆಡಿಯೋ ಸಿಸ್ಟಮ್, ಏರ್‌ಬ್ಯಾಗ್‌ಗಳು, ಸೆಂಟ್ರಲ್ ಲಾಕಿಂಗ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಹಿಂದೆ ಕೇರಳದ ಉದ್ಯಮಿ ಹಾಗೂ ಬಿಸಿಸಿ ಗ್ರೂಪ್ ಮುಖ್ಯಸ್ಥ ಅಮ್ಜದ್ ಸಿತಾರಾ ಅವರು 33ನೇ ವಯಸ್ಸಿನಲ್ಲಿ ನೂತನ 'ರೋಲ್ಸ್ ರಾಯ್ಸ್' ಕಾರನ್ನು ಖರೀದಿ ಮಾಡಿದ್ದ ದಾಖಲೆ ಹೊಂದಿದ್ದರು. ಅಮ್ಜದ್ ರೋಲ್ಸ್ ರಾಯ್ಸ್ ಕುಲ್ಲಿನನ್ (Rolls Royce Cullinan) ಮಾಡೆಲ್‌ನ್ನು ತೆಗೆದುಕೊಂಡಿದ್ದರು. ಪ್ರಸ್ತುತ ಇದೇ ಕಾರು, ರೂ.10.50 ಕೋಟಿಯಿಂದ ರೂ.12.25 ಕೋಟಿ (ಎಕ್ಸ್ ಶೋರೂಂ) ದರವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications