ಮತ್ತೆ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಿದ ಸರ್ಕಾರ

ಕರೋನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು 55 ಗಂಟೆಗಳ ಲಾಕ್‌ಡೌನ್ ಜಾರಿಗೊಳಿಸಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಜಾರಿಗೆ ಬಂದಿರುವ ಈ ಲಾಕ್‌ಡೌನ್ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಮುಂದುವರಿಯಲಿದೆ.

ಮತ್ತೆ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಿದ ಸರ್ಕಾರ

ರಾಜ್ಯದ ಮುಖ್ಯ ಕಾರ್ಯದರ್ಶಿ ಆರ್.ಕೆ. ತಿವಾರಿರವರು ಹೊರಡಿಸಿರುವ ಆದೇಶದಲ್ಲಿ ಕೋವಿಡ್ -19, ಮಲೇರಿಯಾ, ಎನ್ಸೆಫಾಲಿಟಿಸ್, ಡೆಂಗ್ಯೂ ಮುಂತಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಮತ್ತೆ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಿದ ಸರ್ಕಾರ

ಈ ಆದೇಶದ ಪ್ರಕಾರ ಹೊಸ ಲಾಕ್‌ಡೌನ್ ಅನ್ನು ಮೊದಲಿನಂತೆ ಜಾರಿಗೆ ತರಲಾಗುವುದು. ವಾಹನಗಳ ಸಂಚಾರವನ್ನು ನಿರ್ಬಂಧಿಸುವುದರ ಜೊತೆಗೆ, ಜನರು ಅನಗತ್ಯವಾಗಿ ಮನೆಗಳಿಂದ ಹೊರಬರದಂತೆ ತಡೆಯಲಾಗುವುದು.

MOSTREAD: ಕರೋನಾ ವೈರಸ್ ಎಫೆಕ್ಟ್: ಕಾರಿಗೂ ಬಂತು ಪೋರ್ಟಬಲ್ ಟಾಯ್ಲೆಟ್

ಮತ್ತೆ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಿದ ಸರ್ಕಾರ

ಅಗತ್ಯ ಸೇವೆ, ತುರ್ತು ಸೇವೆ, ಹಾಗೂ ಡೋರ್ ಡೆಲಿವರಿ ಸೇವೆಗಳಲ್ಲಿ ತೊಡಗಿರುವ ಜನರ ಚಲನವಲನಗಳ ಯಾವುದೇ ರೀತಿಯ ನಿರ್ಬಂಧವಿರುವುದಿಲ್ಲ. ಸರಕು ವಾಹನಗಳ ಸಂಚಾರಕ್ಕೂ ನಿಷೇಧವಿರುವುದಿಲ್ಲ.

ಮತ್ತೆ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಿದ ಸರ್ಕಾರ

ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳು ಸಂಚಾರಕ್ಕೆ ಮುಕ್ತವಾಗಿರಲಿದ್ದು, ಈ ಹೆದ್ದಾರಿಗಳಲ್ಲಿ ಪೆಟ್ರೋಲ್ ಬಂಕ್ ಗಳು ಕಾರ್ಯನಿರ್ವಹಿಸಲಿವೆ ಎಂದು ಆದೇಶದಲ್ಲಿ ಹೇಳಲಾಗಿದೆ. ನೋಯ್ಡಾ ಹಾಗೂ ದೆಹಲಿ ಗಡಿಯಲ್ಲಿನ ಭದ್ರತೆಯನ್ನು ಹೆಚ್ಚಿಸಲಾಗುವುದು.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಮತ್ತೆ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಿದ ಸರ್ಕಾರ

ಅಗತ್ಯ ಸೇವೆಗಳನ್ನು ನೀಡದ ವಾಹನಗಳು ಹೊರಬಂದಲ್ಲಿ ಹಾಗೂ ಇ-ಪಾಸ್ ಇಲ್ಲದೇ ಸಂಚರಿಸುವ ವಾಹನಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಇವುಗಳ ಜೊತೆಗೆ ಪ್ರಯಾಣ ಮಾಡುವಾಗ ಮಾಸ್ಕ್ ಧರಿಸುವುದು ಕಡ್ಡಾಯವಾಗಿರಲಿದ್ದು, ವಾಹನಗಳ ಒಳಗೆ ನಿಗದಿಪಡಿಸಿದಷ್ಟೇ ಸಂಖ್ಯೆಯ ಜನರು ಪ್ರಯಾಣಿಸಬೇಕಾಗುತ್ತದೆ.

ಮತ್ತೆ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಿದ ಸರ್ಕಾರ

ಅಗತ್ಯ ಸೇವೆಗಳನ್ನು ನೀಡದ ವಾಹನಗಳು ವಿನಾ ಕಾರಣ ಸಂಚರಿಸುತ್ತಿರುವುದು ಕಂಡು ಬಂದಲ್ಲಿ ಕೋವಿಡ್ -19 ನಿಯಮಗಳ ಉಲ್ಲಂಘನೆಯನ್ವಯ ಕ್ರಮ ಕೈಗೊಳ್ಳಲಾಗುತ್ತದೆ. ಉತ್ತರಪ್ರದೇಶದ ಗಡಿ ದಾಟಲು ಅಲ್ಲಿನ ಅಧಿಕಾರಿಗಳು ನೀಡುವ ಇ-ಪಾಸ್ ಗಳ ಅಗತ್ಯವಿದೆ.

MOSTREAD: ಕೆಟ್ಟು ನಿಂತ ವಾಹನಗಳನ್ನು ತಳ್ಳುವ ಜನಪ್ರಿಯ ವಿಧಾನವಿದು

ಮತ್ತೆ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಿದ ಸರ್ಕಾರ

ಲಾಕ್‌ಡೌನ್ ಉಲ್ಲಂಘನೆ ಪ್ರಕರಣಗಳು ಗೌತಮ್ ಬುದ್ಧ ನಗರ ಹಾಗೂ ಘಜಿಯಾಬಾದ್ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿವೆ. ನೋಯ್ಡಾ ಹಾಗೂ ಗ್ರೇಟರ್ ನೋಯ್ಡಾದಲ್ಲಿ ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿದ 690 ವಾಹನಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಮತ್ತೆ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಿದ ಸರ್ಕಾರ

ಮಾರ್ಚ್ 23ರಂದು ಜಾರಿಗೆ ಬಂದಿದ್ದ ಮೊದಲ ಹಂತದ ಲಾಕ್‌ಡೌನ್ ವೇಳೆ ನಿಯಮ ಉಲ್ಲಂಘಿಸಿದ ಗೌತಮ್ ಬೌದ್ಧ ನಗರದ 8,300 ಜನರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಒಂದು ಲಕ್ಷಕ್ಕೂ ಹೆಚ್ಚು ವಾಹನಗಳಿಗೆ ದಂಡ ವಿಧಿಸಿ, 2 ಸಾವಿರಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆಯಲಾಗಿತ್ತು.

Most Read Articles

Kannada
English summary
55 hours lockdown implemented in Uttar Pradesh. Read in Kannada.
Story first published: Saturday, July 11, 2020, 14:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X