Just In
- 8 min ago
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- 1 hr ago
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- 2 hrs ago
2020ರ ಡಿಸೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾದ ಟಾಟಾ ಹ್ಯಾರಿಯರ್
- 3 hrs ago
ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನರ ಒತ್ತಾಯಕ್ಕೆ ಮಣಿದು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಸಲಿವೆಯೇ ಸರ್ಕಾರಗಳು?
ಭಾರತದಲ್ಲಿ ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗುತ್ತಿರುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಬೆಲೆ ಏರಿಕೆಯಿಂದಾಗಿ ದಿನ ನಿತ್ಯ ವಾಹನಗಳನ್ನು ಬಳಸುವ ಮಧ್ಯಮ ವರ್ಗದವರು ಪ್ರತಿ ತಿಂಗಳು ಇಂಧನಕ್ಕಾಗಿಯೇ ದೊಡ್ಡ ಮೊತ್ತವನ್ನು ಖರ್ಚು ಮಾಡಬೇಕಾಗಿದೆ.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ಮೇಲೆ ಭಾರೀ ಪ್ರಮಾಣದಲ್ಲಿ ಅಬಕಾರಿ ಸುಂಕ ವಿಧಿಸುತ್ತಿವೆ. ಇದರಿಂದಾಗಿ ಭಾರತದಲ್ಲಿ ವಾಹನ ಸವಾರರು ಪೆಟ್ರೋಲ್, ಡೀಸೆಲ್‌ಗಾಗಿ ಹೆಚ್ಚು ಹಣ ವ್ಯಯಿಸಬೇಕಾಗಿದೆ.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತೆರಿಗೆಯನ್ನು ಕಡಿಮೆ ಮಾಡಿದರೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುತ್ತದೆ. ಆದ್ದರಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಗಳನ್ನು ಕಡಿಮೆ ಮಾಡುವಂತೆ ವಾಹನ ಸವಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸುತ್ತಿದ್ದಾರೆ.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಆದರೆ ಅದರಿಂದ ಸರ್ಕಾರಗಳ ಮೇಲೆ ಆರ್ಥಿಕ ಹೊರೆ ಎದುರಾಗುವ ಸಾಧ್ಯತೆಗೆಳಿವೆ. ಈಗ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ವಿಧಿಸುವ ತೆರಿಗೆಗಳ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ.

ಸಮೀಕ್ಷೆಗೆ ಒಳಗಾದವರಲ್ಲಿ 69%ನಷ್ಟು ಜನರು ಸರ್ಕಾರಗಳೂ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಲಿ ಎಂದು ಹೇಳಿದ್ದಾರೆ. ಸ್ಥಳೀಯ ವಲಯಗಳು ನಡೆಸಿದ ಅಧ್ಯಯನದಲ್ಲಿ ಈ ಮಾಹಿತಿ ಬಹಿರಂಗವಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿಮೆಯಾಗಬೇಕೆಂದು ಒಟ್ಟು 69%ನಷ್ಟು ಜನರು ಬಯಸುತ್ತಾರೆ. ಈ ಪೈಕಿ ಹೆಚ್ಚಿನವರು ಪೆಟ್ರೋಲ್, ಡೀಸೆಲ್ ಬೆಲೆ 20%ನಷ್ಟು ಅಥವಾ 6 ರೂಪಾಯಿಗಿಂತ ಕಡಿಮೆಯಾಗಬೇಕೆಂದು ಬಯಸಿದ್ದಾರೆ.

ಭಾರತದ 201 ಜಿಲ್ಲೆಗಳಲ್ಲಿರುವ 9,326 ಜನರ ಸಮೀಕ್ಷೆ ನಡೆಸಿ ಈ ಮಾಹಿತಿ ಪಡೆಯಲಾಗಿದೆ. ಸಮೀಕ್ಷೆಗೆ ಒಳಗಾದವರಲ್ಲಿ 71%ನಷ್ಟು ಪುರುಷರು, ಉಳಿದ 29% ಮಹಿಳೆಯರು ಎಂಬುದು ಗಮನಾರ್ಹ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಈ ಅಧ್ಯಯನದಿಂದ ಭಾರತದ ಬಹುತೇಕ ಜನರು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ರೋಸಿ ಹೋಗಿದ್ದಾರೆ ಎಂಬುದನ್ನು ಕಾಣಬಹುದು. ಇಂಧನ ಬೆಲೆ ಏರಿಕೆಯಿಂದಾಗಿ ಹಲವಾರು ಜನರು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಮುಂದಾಗಿದ್ದಾರೆ.

ಆದರೆ ಎಲೆಕ್ಟ್ರಿಕ್ ವಾಹನಗಳಿಗೆ ಅಗತ್ಯವಿರುವಷ್ಟು ಚಾರ್ಜಿಂಗ್ ಕೇಂದ್ರಗಳನ್ನು ಭಾರತದಲ್ಲಿ ಇನ್ನೂ ಸ್ಥಾಪಿಸಿಲ್ಲ. ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್, ಡೀಸೆಲ್ ವಾಹನಗಳ ಬೆಲೆಗಿಂತ ಹೆಚ್ಚು.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಈ ಎಲ್ಲಾ ಕಾರಣಗಳಿಂದಾಗಿ ಜನರು ಪೆಟ್ರೋಲ್, ಡೀಸೆಲ್ ವಾಹನಗಳಲ್ಲಿ ಪ್ರಯಾಣಿಸುತ್ತಾರೆ. ಆದರೆ ಮುಂಬರುವ ದಿನಗಳಲ್ಲಿ ಈ ಪರಿಸ್ಥಿತಿ ಬದಲಾಗಲಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿರುವುದೇ ಇದಕ್ಕೆ ಕಾರಣ.

ಎಲೆಕ್ಟ್ರಿಕ್ ವಾಹನಗಳನ್ನು ಜನಪ್ರಿಯಗೊಳಿಸಲು ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಿಸಲಾಗುತ್ತಿದೆ. ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ಹಾಗೂ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡುವುದರ ಜೊತೆಗೆ ಸಬ್ಸಿಡಿ ಸಹ ನೀಡಲಾಗುತ್ತಿದೆ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.