71ರ ಹರೆಯದಲ್ಲೂ ಮರ್ಸಿಡಿಸ್ ಕಾರು ಖರೀದಿಸಿದ ನಟಿ ಕಿರಣ್ ಖೇರ್: ಕೋಟಿಗಿಂತ ಅಧಿಕ ಬೆಲೆ, ವಿಶೇಷತೆಗಳೇನು?

ಓಂ ಶಾಂತಿ ಓಂ, ಸಿಂಗ್ ಈಸ್ ಕಿಂಗ್ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸುವ ಮೂಲಕ ಬಾಲಿವುಡ್ ಹಿರಿಯ ನಟಿ ಕಿರಣ್ ಖೇರ್ ದೊಡ್ಡಮಟ್ಟದಲ್ಲಿ ಖ್ಯಾತಿಗಳಿಸಿದ್ದಾರೆ. ಬಿಜೆಪಿ ಸಂಸದೆಯಾಗಿಯೂ ಗುರುತಿಸಿಕೊಂಡಿರುವ 71ರ ಹರೆಯದ ನಟಿ ಕಿರಣ್, 1 ಕೋಟಿಗೂ ಅಧಿಕ ಬೆಲೆಯ ಮರ್ಸಿಡಿಸ್ ಕಾರನ್ನು ಕೊಂಡುಕೊಂಡಿದ್ದಾರೆ.

ಮುಂಬೈನಲ್ಲಿ ಗುರುವಾರ ಬೆಳಗ್ಗೆ ನಟಿ ಕಿರಣ್ ಖೇರ್ (Kirron Kher) ಹೊಚ್ಚ ಹೊಸ ಮರ್ಸಿಡಿಸ್ ಬೆಂಜ್ ಜಿ‍ಎಲ್‍‍ಸಿ (Mercedes Benz GLS) ಎಸ್‌ಯುವಿಯನ್ನು ವಿತರಣೆ ಪಡೆದುಕೊಂಡಿದ್ದಾರೆ. ಈ ಫೋಟೋವನ್ನು ಮರ್ಸಿಡಿಸ್ ಡೀಲರ್‌ಶಿಪ್‌ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ನಟಿ ಕಿರಣ್ ಜಿ‍ಎಲ್‍‍ಸಿ ಎಸ್‌ಯುವಿಯ ಯಾವ ರೂಪಾಂತರವನ್ನು ಖರೀದಿಸಿದ್ದಾರೆ ಎಂಬುದರ ಬಗ್ಗೆ ಹೆಚ್ಚಿನ ವಿವರಗಳಿಲ್ಲ.

71 Years Bollywood Actress Kirron Kher Buy New Mercedes Car Do You Know Price amp amp Features

ಸದ್ಯ ಭಾರತದ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಜ್ ಜಿ‍ಎಲ್‍‍ಸಿ ಕಾರು ಸುಮಾರು ರೂ.1.32 ಕೋಟಿಯಿಂದ ರೂ.1.37 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಜಿ‍ಎಲ್‍‍ಸಿ 450 ಹಾಗೂ ಜಿ‍ಎಲ್‍‍ಸಿ 450ಡಿ ರೂಪಾಂತರ ಆಯ್ಕೆಯಲ್ಲಿ ಸಿಗುತ್ತದೆ. ವಿನ್ಯಾಸದ ದೃಷ್ಟಿಯಿಂದಲೂ ಅತ್ಯಾಧುನಿಕವಾಗಿದ್ದು, ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ. 5 ಅಥವಾ 7 ಆಸನ ವ್ಯವಸ್ಥೆಯನ್ನು ಪಡೆದಿದೆ.

ಈ ಮರ್ಸಿಡಿಸ್ ಬೆಂಜ್ ಜಿ‍ಎಲ್‍‍ಸಿ (Mercedes Benz GLS) ಎಸ್‌ಯುವಿ ಪೆಟ್ರೋಲ್ ಹಾಗೂ ಡೀಸೆಲ್ ಪವರ್‌ಟ್ರೇನ್ ಆಯ್ಕೆಯಲ್ಲಿ ದೊರಯುತ್ತದೆ. ಇದರ 3-ಲೀಟರ್ 6-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ 381 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 500 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

71 Years Bollywood Actress Kirron Kher Buy New Mercedes Car Do You Know Price amp amp Features

ಮತ್ತೊಂದು 3-ಲೀಟರ್ 6-ಸಿಲಿಂಡರ್ ಡೀಸೆಲ್ ಎಂಜಿನ್ 367 ಪಿಎಸ್ ಪವರ್ ಮತ್ತು 750 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ರೂಪಾಂತರಗಳೆರಡು 9-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಸಿಗುತ್ತದೆ. ಜೊತೆಗೆ AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದ್ದು, ಗಂಟೆಗೆ 250 ಕಿ.ಮೀ ಗರಿಷ್ಠ ವೇಗವನ್ನು ಹೊಂದಲಿದೆ.

ನೂತನ ಮರ್ಸಿಡಿಸ್ ಬೆಂಜ್ ಜಿ‍ಎಲ್‍‍ಸಿ ಕಾರು ಬೆಲೆಗೆ ತಕ್ಕಂತೆ ಅತ್ಯುತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ & ಡಿಜಿಟಲ್ ಡ್ರೈವರ್ ಡಿಸ್ಪ್ಲೇಗಾಗಿ 12.3-ಇಂಚಿನ ಸ್ಕ್ರೀನ್, 5-ಜೋನ್ ಕ್ಲೇಮೇಟ್ ಕಂಟ್ರೋಲ್, 13-ಸ್ಪೀಕರ್ 3ಡಿ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್ ಹಾಗೂ ಪನೋರಮಿಕ್ ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತೆಯ ವಿಚಾರದಲ್ಲೂ ಮರ್ಸಿಡಿಸ್ ಬೆಂಜ್ ಜಿ‍ಎಲ್‍‍ಸಿ ಎಸ್‌ಯುವಿ ಅತ್ಯುತ್ತಮವಾಗಿದ್ದು, 9 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ವಿಶೇಷವಾಗಿ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಪಡೆದಿದೆ. ಇದು ಲೇನ್ ಕೀಪ್ ಅಸಿಸ್ಟ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ವಿವಿಧ ಅಂಶಗಳನ್ನು ಪಡೆದಿದೆ. ಈ ಕಾರಿಗೆ ಬಿಎಂಡಬ್ಲ್ಯೂ ಎಕ್ಸ್7 ಹಾಗೂ ರೇಂಜ್ ರೋವರ್ ಸ್ಪೋರ್ಟ್‌ ದೊಡ್ಡ ಎದುರಾಳಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, March 15, 2024, 16:18 [IST]
English summary
71 years bollywood actress kirron kher buy new mercedes benz gls car do you know price features
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+