Aase Actress Priyanka: ಆಸೆ ಸೀರಿಯಲ್ ಮೀನಮ್ಮ ಮನೆಗೆ ಹೊಸ ಅತಿಥಿಯ ಆಗಮನ!
ಕನ್ನಡದ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರಾವಾಹಿ 'ಆಸೆ'ಯಲ್ಲಿ ನಟಿ ಪ್ರಿಯಾಂಕಾ (Priyanka) ಅಭಿನಯಿಸುತ್ತಿದ್ದಾರೆ. ನಾಯಕಿ ಮೀನಾ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ದೊಡ್ಡ ಮಟ್ಟದಲ್ಲಿ ಖ್ಯಾತಿಯನ್ನು ಗಳಿಸಿದ್ದಾರೆ. ಈ ಧಾರವಾಹಿಯನ್ನು ನಟ ರಮೇಶ್ ಅರವಿಂದ್ ನಿರ್ಮಾಣ ಮಾಡಿದ್ದಾರೆ. ಈಚೆಗೆ ಪ್ರಿಯಾಂಕಾ 24ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟು ಹಬ್ಬವನ್ನು ಕೂಡ ಬಹಳ ಸಂಭ್ರಮ - ಸಡಗರದಿಂದ ಆಚರಿಸಿಕೊಂಡಿದ್ದಾರೆ.
ಇದೇ ವೇಳೆ ನಟಿ ಪ್ರಿಯಾಂಕಾ, ಹೊಚ್ಚ ಹೊಸ ಟಾಟಾ ಪಂಚ್ (Tata Punch) ಮೈಕ್ರೋ ಎಸ್‌ಯುವಿಯನ್ನು ಖರೀದಿ ಮಾಡಿದ್ದಾರೆ. ನೂತನ ಕಾರನ್ನು ಕುಟುಂಬ ಸಮೇತ ವಿತರಣೆ ಪಡೆದಿದ್ದಾರೆ. ಈ ಕುರಿತಂತೆ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿಯೂ ಪೋಸ್ಟ್ ಮಾಡಿದ್ದಾರೆ. ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಟಾಟಾ ಪಂಚ್ ವಿಶೇಷತೆಗಳೇನು:
ಈ ಕಾರು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.5.50 ಲಕ್ಷದಿಂದ ರೂ.9.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಪ್ಯೂರ್, ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಡ್ವೆಂಚರ್ ಪ್ಲಸ್ ಎಸ್, ಅಕಾಂಪ್ಲಿಶ್ಡ್ ಪ್ಲಸ್ ಹಾಗೂ ಅಕಾಂಪ್ಲಿಶ್ಡ್ ಪ್ಲಸ್ ಎಸ್ ಹಾಗೂ ಕ್ರಿಯೇಟಿವ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ 'ಟಾಟಾ ಪಂಚ್' ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ. ಟ್ರಾಪಿಕಲ್ ಮಿಸ್ಟ್, ಆರ್ಕಸ್ ವೈಟ್, ಡೇಟೋನಾ ಗ್ರೇ, ಟೊರ್ನಾಡೊ ಬ್ಲೂ ಹಾಗೂ ಕ್ಯಾಲಿಪ್ಸೊ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಇದು ಪುಟ್ಟ ಕಾರಿನಂತೆ ಕಂಡರೂ ಹೆಚ್ಚು ವಿಶಾಲವಾಗಿದೆ. 3,827 ಮಿ.ಮೀ ಉದ್ದ, 1,772 ಮಿ.ಮೀ ಅಗಲ ಮತ್ತು 1,615 ಮಿ.ಮೀ ಎತ್ತರವಿದೆ. 187 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,450 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 179 ಕೆಜಿ ತೂಕವಿದೆ.
ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 366 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಹೊಸ 'ಟಾಟಾ ಪಂಚ್' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ತನ್ನದಾಗಿಸಿಕೊಂಡಿದೆ.
ಇದು ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 18 ರಿಂದ 27 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 37 ಲೀಟರ್ ಪೆಟ್ರೋಲ್ ಮತ್ತು 60 ಲೀಟರ್ ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 16 ಸೆಕೆಂಡುಗಳಲ್ಲಿ 0 ರಿಂದ 50 ಕೆಎಂಪಿಹೆಚ್ ವೇಗವನ್ನು ಪಡೆದಿದೆ.
ಈ ಕಾರು 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ರೈನ್ ಸೆನ್ಸಿಂಗ್ ವೈಪರ್‌ಗಳು, ಕೀ ಲೆಸ್ ಎಂಟ್ರಿ, ಆಟೋ ಎಸಿ, ಕ್ರೂಸ್ ಕಂಟ್ರೋಲ್, 6 ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ನೂತನ 'ಟಾಟಾ ಪಂಚ್' ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಿಲ್ ಹೋಲ್ಡ್ ಅಸಿಸ್ಟ್ ರೇರ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








