Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಗಾಯಾಳು ಸಾವಿಗೆ ಕಾರಣವಾದ ವೈದ್ಯರ ನಿರ್ಲಕ್ಷ್ಯ
ಭಾರತದಲ್ಲಿ ಪ್ರತಿ ವರ್ಷ ಸುಮಾರು 1.50 ಲಕ್ಷ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವುದು, ಸಂಚಾರಿ ನಿಯಮಗಳನ್ನು ಉಲ್ಲಂಘಿಸುವುದು ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ.

ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡದೇ ಇರುವುದು ಸಹ ರಸ್ತೆ ಅಪಘಾತ ಸಂಬಂಧಿತ ಸಾವುಗಳಿಗೆ ಕಾರಣವಾಗಿದೆ. ರಸ್ತೆ ಅಪಘಾತಗಳಲ್ಲಿ ಗಾಯಗೊಂಡು ನರಳುತ್ತಿರುವವರ ಸಹಾಯಕ್ಕೆ ಅನೇಕರು ಮುಂದೆ ಬರುವುದೇ ಇಲ್ಲ. ಕೋರ್ಟು ಕಚೇರಿ ಎಂದು ಅಲೆದಾಡಬೇಕಾಗುತ್ತದೆ ಎಂಬುದು ಇದಕ್ಕಿರುವ ಮುಖ್ಯ ಕಾರಣ.

ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸುವವರಿಗೆ ಯಾವುದೇ ರೀತಿಯಲ್ಲಿ ಪೊಲೀಸರು ಕಿರುಕುಳ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರಿಂದಾಗಿ ಪೂರ್ತಿಯಾಗಿ ಅಲ್ಲದಿದ್ದರೂ ಕೆಲವರು ಗಾಯಾಳುಗಳ ನೆರವಿಗೆ ಧಾವಿಸುತ್ತಿದ್ದಾರೆ.
MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್

ರಸ್ತೆ ಅಪಘಾತದಲ್ಲಿ ಸಿಲುಕಿರುವವರಿಗೆ ಸಕಾಲದಲ್ಲಿ ವೈದ್ಯರು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರುವುದು ಸಹ ಸಾವಿನ ಸಂಖ್ಯೆ ಹೆಚ್ಚಲು ಕಾರಣವಾಗಿದೆ. ಇದಕ್ಕೆ ಪುಷ್ಟಿ ನೀಡುವ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರಿಗೆ ವೈದ್ಯರು ಹಾಗೂ ಪೊಲೀಸರ ವಾಗ್ವಾದದಿಂದಾಗಿ ಸಕಾಲದಲ್ಲಿ ಚಿಕಿತ್ಸೆ ದೊರೆತಿಲ್ಲ.

ಇದರಿಂದಾಗಿ ಆ ಮಹಿಳೆ ಮೃತಪಟ್ಟಿದ್ದಾರೆ. ಅಮೂಲ್ಯ ಸಮಯ ವ್ಯರ್ಥವಾಗಲು ವೈದ್ಯರೇ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು 48 ವರ್ಷದ ರಾಮವತಿ ಎಂದು ಗುರುತಿಸಲಾಗಿದೆ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ರಾಮವತಿ ತನ್ನ ಮಗ ಹಾಗೂ ಸೋದರಸಂಬಂಧಿ ಜೊತೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೂವರು ಪ್ರಯಾಣಿಸುತ್ತಿದ್ದ ಬೈಕಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕಿನಲ್ಲಿದ್ದ ಮೂವರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಪಟಾನ್ ಜಿಲ್ಲೆಯ ಪಿಲ್ಸಿಯಲ್ಲಿ ಈ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರಾಮವತಿಯ ಸಂಬಂಧಿಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾದರೆ, ರಾಮವತಿ ಹಾಗೂ ಆಕೆಯ ಮಗನನ್ನು ಉತ್ತರ ಪ್ರದೇಶ ಸರ್ಕಾರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಇದೇ ವೇಳೆ ವೈದ್ಯರು ಹಾಗೂ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಡುವೆ ವಾಗ್ವಾದ ನಡೆದಿದೆ. ವರದಿಗಳ ಪ್ರಕಾರ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದ ವೈದ್ಯರು ರಾಮವತಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಈ ಕಾರಣಕ್ಕೆ ಸಬ್ ಇನ್ಸ್‌ಪೆಕ್ಟರ್ ವೈದ್ಯರೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಆಸ್ಪತ್ರೆಗೆ ಕರೆದೊಯ್ಯುವಾಗ ರಾಮವತಿ ಜೀವಂತವಾಗಿದ್ದರು. ವಾಗ್ವಾದದ ನಂತರ ವೈದ್ಯರು ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ವೈದ್ಯ ಹಾಗೂ ಸಬ್ ಇನ್ಸ್‌ಪೆಕ್ಟರ್ ನಡುವೆ ಸುಮಾರು 20 ನಿಮಿಷಗಳ ಕಾಲ ವಾಗ್ವಾದ ನಡೆದಿದೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಮಾತನಾಡಿರುವ ಸಬ್ ಇನ್ಸ್‌ಪೆಕ್ಟರ್ ವೈದ್ಯರ ವರ್ತನೆ ಸ್ವೀಕಾರಾರ್ಹವಲ್ಲ. ಗಾಯಾಳು ಮಹಿಳೆಯ ಸ್ಥಿತಿ ಹದಗೆಡುತ್ತಿರುವುದರಿಂದ, ಬೇಗ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಹೇಳಿದೆ ಎಂದು ಹೇಳಿದ್ದಾರೆ.

ವೈದ್ಯರ ಪ್ರಕಾರ ಈ ಪ್ರದೇಶದಲ್ಲಿ ಅಪಘಾತಗಳು ಸಾಮಾನ್ಯವಾಗಿದ್ದು, ಆತಂಕಪಡುವ ಅಗತ್ಯವಿಲ್ಲವೆಂದು ಅಸಡ್ಡೆ ತೋರಿದ್ದಾರೆ. ಈ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ನಿರ್ಲಕ್ಷ್ಯದಿಂದ ಸಾವು ಸಂಭವಿಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ರಸ್ತೆ ಅಪಘಾತಕ್ಕೊಳಗಾದವರು ಸಕಾಲದಲ್ಲಿ ಚಿಕಿತ್ಸೆ ಪಡೆದರೆ ಬದುಕುಳಿಯುವ ಸಾಧ್ಯತೆಗಳು ಹೆಚ್ಚು.
ಆದರೆ ವೈದ್ಯರು ಸಕಾಲದಲ್ಲಿ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ತೋರಿರುವುದು ನಿಜಕ್ಕೂ ಆಘಾತಕಾರಿಯಾಗಿದೆ. ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ವರದಿಗಳ ಪ್ರಕಾರ, ಸಂಬಂಧಪಟ್ಟ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗಾಯಾಳುವನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ವೈದ್ಯರ ನಿರ್ಲಕ್ಷದಿಂದಾಗಿ ಮಹಿಳೆ ಸಾವನ್ನಪ್ಪಿದ್ದಾರೆ.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದು, ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.