ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಕಾರಿನಲ್ಲಿ ಮಗಳೊಂದಿಗೆ ಕಾಣಿಸಿಕೊಂಡ ಜನಪ್ರಿಯ ನಟ

ಹಿಂದಿ ಚಿತ್ರರಂಗದಲ್ಲಿ ನಟ,ನಿರ್ದೇಶಕ, ನಿರ್ಮಾಪಕನಾಗಿ ಗಮನ ಸೆಳೆದಿರುವ ಅಜಯ್ ದೇವಗನ್ ಕಾರುಗಳ ಬಗ್ಗೆ ಹೆಚ್ಚು ಕ್ರೇಜ್ ಅನ್ನು ಹೊಂದಿದ್ದಾರೆ. ಬಾಲಿವುಡ್ ನಟ ಅಜಯ್ ದೇವಗನ್ ಬಳಿ Rolls Royce Cullinan ಮತ್ತು ಹೊಸ ತಲೆಮಾರಿನ BMW 7-ಸೀರಿಸ್ ನಂತಹ ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ.

ಬಾಲಿವುಡ್ ನಟ ಅಜಯ್ ದೇವಗನ್ ಇತ್ತೀಚೆಗೆ ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್600 (Mercedes-Maybach GLS600 ) ಎಸ್‍ಯುವಿಯನ್ನು ಇತ್ತೀಚೆಗೆ ಖರೀದಿಸಿದ್ದರು. ಈ ಐಷಾರಾಮಿ ಮರ್ಸಿಡಿಸ್ ಮೇಬ್ಯಾಕ್ ಎಸ್‍ಯುವಿಯು ಬಾಲಿವುಡ್ ಸೆಲೆಬ್ರಿಟಿಗಳ ನೆಚ್ಚಿನ ಆಯ್ಕೆಯಾಗಿದೆ. ಬಾಲಿವುಡ್ ಅನೇಕ ಸೆಲೆಬ್ರಿಟಿಗಳು ಈ ದುಬಾರಿ ಬೆಲೆಯ ಎಸ್‍ಯುವಿಯನ್ನು ಹೊಂದಿದ್ದಾರೆ. ವಿಮಾನ ನಿಲ್ದಾಣದಿಂದ ಅಜಯ್ ದೇವಗನ್ ತಮ್ಮ ಹೊಸ ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್600 ಎಸ್‍ಯುವಿಯಲ್ಲಿ ಮಗಳೊಂದಿಗೆ ತೆರಳಿರುವ ವೀಡಿಯೊ ವೈರಲ್ ಆಗಿದೆ.

ತಮ್ಮ ಹೊಸ ಐಷಾರಾಮಿ ಮರ್ಸಿಡಿಸ್ ಕಾರಿನಲ್ಲಿ ಮಗಳೊಂದಿಗೆ ಕಾಣಿಸಿಕೊಂಡ ನಟ

ಅಜಯ್ ದೇವಗನ್ ಅವರು ಮಗಳ ಹೆಸರು ನೈಸಾ ದೇವಗನ್ ಆಗಿದೆ. ಅಜಯ್ ದೇವಗನ್ ಮಗಳು ಇನ್ನೂ ಕೂಡ ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಆದರೂ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಬೋಲ್ಡ್ ಅವತಾರದಲ್ಲಿರುವ ನೈಸಾ ದೇವಗನ್ ಅವರ ಪೋಟೋಗಳು ವೈರಲ್ ಆಗಿ ಹೆಚ್ಚು ಸುದ್ದಿಯಾಗಿದ್ದಾರೆ. ಇನ್ನು ಅಜಯ್ ದೇವಗನ್ ಅವರ ಹೊಸ ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್600 ಎಸ್‍ಯುವಿಯು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ಪ್ರಸ್ತುತ ಈ ಅಷಾರಾಮಿ ಎಸ್‍ಯುವಿಯ ಬೆಲೆಯು ರೂ.3 ಕೋಟಿಯಾಗಿದೆ.

ಈ ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್600 ಎಸ್‍ಯುವಿಯು ಒಂದೇ ರೂಪಾಂತರದಲ್ಲಿ ಮಾತ್ರ ಲಭ್ಯವಿದೆ. ಇದು CBU ಮಾರ್ಗದ ಮೂಲಕ ತರಲಾಗಿದೆ. ಇನ್ನು ಈ ಐಷಾರಾಮಿ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಅಂತ್ಯದವರೆಗೆ ಮಾರಾಟವಾಗಿದೆ. ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್600 ಎಸ್‍ಯುವಿ ಒಟ್ಟಾರೆ ವಿನ್ಯಾಸವು ಐಷಾರಾಮಿ ಮತ್ತು ಪ್ರೀಮಿಯಂ ಆಗಿದೆ. ಇದರಲ್ಲಿ ದೊಡ್ಡದಾದ ವರ್ಟಿಕಲ್ ಸ್ಲ್ಯಾಟ್ ಗ್ರಿಲ್, ವಿಂಡೋ ಲೈನ್, ಸೈಡ್-ಸ್ಟೆಪ್, ಮುಂಭಾಗ ಮತ್ತು ಹಿಂಭಾಗದ ಬಂಪರ್‌ಗಳಲ್ಲಿ ಡಿಸೈನ್ ಆಕ್ಸೆಂಟ್ ಅನ್ನು ಹೊಂದಿದೆ.

ಇದರೊಂದಿಗೆ ರೂಫ್ ರೈಲ್ಸ್ ಮತ್ತು ಸ್ಪೋರ್ಟಿ ಎಕ್ಸಾಸ್ಟ್ ನೋಟ್ ಹೊಂದಿದೆ. ಈ ಹೊಸ ಪ್ರೀಮಿಯಂ ಐಷಾರಾಮಿ ಎಸ್‌ಯುವಿ ಕಾರಿನ ವಿನ್ಯಾಸಕ್ಕೆ ತಕ್ಕಂತೆ 23 ಇಂಚಿನ ಬ್ರಷ್ಡ್ ಮಲ್ಟಿ-ಸ್ಪೋಕ್ ವೀಲ್ಹ್ ಆಯ್ಕೆ ಜೊತೆಗೆ ವಿಂಡೋ ಪಿಲ್ಲರ್, ರೂಫ್ ಮೇಲೆ ಕಪ್ಪು ಬಣ್ಣದ ಡ್ಯುಯಲ್ ಟೋನ್ ಪೇಂಟ್ ಸ್ಕೀಮ್ ಮತ್ತು 'ಮೇಬ್ಯಾಕ್' ಬ್ರಾಂಡ್ ಬ್ಯಾಡ್ಜ್ ಹೊಂದಿದೆ. ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್600 ಎಸ್‍ಯುವಿಯಲ್ಲಿ ದೊಡ್ಡ ವ್ಹೀಲ್ ಗಳು, ವಿಭಿನ್ನ ಮುಂಭಾಗದ ಗ್ರಿಲ್ ಅನ್ನು ಪಡೆಯುತ್ತದೆ ಮತ್ತು ಒಳಾಂಗಣಕ್ಕೆ ಬಂದಾಗ ಐಷಾರಾಮಿಯಾಗಿದೆ,

ಈ ಐಷಾರಾಮಿ ಎಸ್‍ಯುವಿಯಲ್ಲಿ 4 ಸೀಟುಗಳ ಎಸ್‍ಯುವಿ, ನಪ್ಪಾ ಲೆದರ್, ಮಸಾಜರ್ ಫಂಕ್ಷನ್, ಹಿಂಬದಿ ಸೀಟ್ ಮನರಂಜನಾ ಡಿಸ್ ಪಪ್ಲೇ, ಕ್ಲೈಮೆಂಟ್ ಕಂಟ್ರೋಲ್, ಪನರೋಮಿಕ್ ಸನ್‌ರೂಫ್, 360 ಡಿಗ್ರಿ ಕ್ಯಾಮೆರಾ, ಪ್ರೀಮಿಯಂ ಸ್ಪೀಕರ್ ಸಿಸ್ಟಮ್, ಆಕ್ಟಿವ್ ಸ್ಟೀರಿಂಗ್ ಅಸಿಸ್ಟ್ ಮತ್ತು 360 ಡಿಗ್ರಿಗಳೊಂದಿಗೆ ಬರುತ್ತದೆ. ಇದರೊಂದಿಗೆ ಕ್ಯಾಮೆರಾ, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮತ್ತು ಇನ್ನೂ ಹಲವು ವೈಶಿಷ್ಟ್ಯಗಳನ್ನು ಹೊಂದಿವೆ.

ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್600 ಎಸ್‍ಯುವಿ ಮಾದರಿಯು ಸಾಮಾನ್ಯ ಮರ್ಸಿಡಿಸ್ ಜಿಎಲ್ಎಸ್ ಎಸ್‍ಯುವಿಗಿಂತ ಹೆಚ್ಚು ಐಷಾರಾಮಿಯಾಗಿದೆ. ಈ ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್600 ಎಸ್‍ಯುವಿಯಲ್ಲಿ 4.0 ಲೀಟರ್ ಟ್ವಿನ್ ಟರ್ಬೊ V8 ಪೆಟ್ರೋಲ್ ಎಂಜಿನ್ ನಿಂದ ನಿಯಂತ್ರಿಸಲ್ಪಡುತ್ತದೆ, ಈ ಎಂಜಿನ್ 550 ಬಿಹೆಚ್‍ಪಿ ಮತ್ತು 730 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ, ಈ ಜಿಎಲ್ಎಸ್600 ಜೊತೆಗೆ 48V EQ ಬೂಸ್ಟ್ ಸಿಸ್ಟಮ್ ಅನ್ನು ನೀಡಲಾಗಿದೆ.

ಇದರೊಂದಿಗೆ 48V ಮೈಲ್ಡ್-ಹೈಬ್ರಿಡ್ ವ್ಯವಸ್ಥೆಯು ಎಲೆಕ್ಟ್ರಿಕ್ ಮೋಟರ್‌ಗೆ ಪವರ್ ನೀಡುತ್ತದೆ ಮತ್ತು ಅದು ಕೇವಲ 22 ಬಿಹೆಚ್‍ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು 9-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್‌ಗೆ ಜೋಡಿಸಲ್ಪಟ್ಟಿದೆ ಮತ್ತು ಎಲ್ಲಾ ಚಕ್ರಗಳಿಗೆ ಪವರ್ ಅನ್ನು ಕಳುಹಿಸಲಾಗುತ್ತದೆ. ಇನ್ನು ನಟ ಅಜಯ್ ದೇವಗನ್ Rolls Royce Cullinan ಮತ್ತು ಹೊಸ ತಲೆಮಾರಿನ BMW 7-ಸೀರಿಸ್ ಕಾರುಗಳನ್ನು ಸಹ ಹೊಂದಿದ್ದಾರೆ.

More from DriveSpark

Article Published On: Wednesday, February 1, 2023, 13:50 [IST]
English summary
Actor ajay devgn spotted in his new mercedes luxury suv details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+