Tata Safari: ಹೊಸ ಟಾಟಾ ಸಫಾರಿಗೆ ಮನಸೋಲದವರೇ ಇಲ್ಲ.. ಜೂನಿಯರ್ ಅಮಿತಾಬ್ ಬಚ್ಚನ್‌ರಿಂದಲೂ ಖರೀದಿ

ಭಾರತದಲ್ಲಿ ಟಾಟಾ (Tata) ಕಾರುಗಳು ಸುರಕ್ಷತೆಗೆ ಹೆಸರುವಾಸಿಯಾಗಿರುವುದರಿಂದ ಪ್ರತಿಯೊಬ್ಬರು ಇಷ್ಟಪಟ್ಟು ಖರೀದಿಸುತ್ತಾರೆ. ಅದಕ್ಕೆ ಖ್ಯಾತನಾಮರು ಹೊರತಲ್ಲ. ಇತ್ತೀಚೆಗೆ ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್‌ರ (Amitabh Bachchan) ಜೂನಿಯರ್ ಎಂದೇ ಖ್ಯಾತಿ ಗಳಿಸಿರುವ ಶಶಿಕಾಂತ್ ಪೆಡ್ವಾಲ್ (Shashikant Pedwal) ಹೊಚ್ಚ ಹೊಸ ಸಫಾರಿ ಎಸ್‌ಯುವಿಯನ್ನು ಖರೀದಿಸಿದ್ದಾರೆ.

ಶಶಿಕಾಂತ್ ಪೆಡ್ವಾಲ್ ನೋಡಲು ಅಮಿತಾಬ್ ಬಚ್ಚನ್‌ ಅವರಂತೆ ಇದ್ದು, ಹಲವು ಟಿವಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವ ಅವರು ಸಾಮಾಜಿಕ ಜಾಲತಾಣದಲ್ಲಿ ಭಾರೀ ಜನಪ್ರಿಯತೆಯನ್ನು ಗಳಿಸಿದ್ದಾರೆ. ಅವರಿಗೆ ಇನ್ಸ್ಟಾಗ್ರಾಮ್ (Instagram)ವೊಂದರಲ್ಲಿಯೇ 1.8 ಮಿಲಿಯನ್ ಫಾಲೋವರ್ಸ್ ಇದ್ದಾರೆ. ನೂತನ ಸಫಾರಿ ಎಸ್‌ಯುವಿ ವಿತರಣೆ ಪಡೆಯುತ್ತಿರುವ ವಿಡಿಯೋವನ್ನು ಶಶಿಕಾಂತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Tata Safari: ಹೊಸ ಟಾಟಾ ಸಫಾರಿಗೆ ಮನಸೋಲದವರೇ ಇಲ್ಲ.. ಜೂನಿಯರ್ ಅಮಿತಾಬ್ ಬಚ್ಚನ್‌ರಿಂದಲೂ ಖರೀದಿ

ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ನವೀಕರಿಸಿದ ಟಾಟಾ ಸಫಾರಿ ಎಸ್‌ಯುವಿ, ರೂ.16.19 ಲಕ್ಷದಿಂದ ರೂ.27.34 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಸ್ಮಾರ್ಟ್ (ಒ), ಪ್ಯೂರ್ (ಒ), ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಡ್ವೆಂಚರ್ ಪ್ಲಸ್ ಡಾರ್ಕ್, ಅಕಾಂಪ್ಲಿಶ್ಡ್ ಸೇರಿದಂತೆ 10 ರೂಪಾಂತರ ಮತ್ತು 7 ಬಣ್ಣದ ಆಯ್ಕೆಯಲ್ಲಿ ಸಿಗುತ್ತದೆ.

ನವೀಕರಿಸಿದ ಟಾಟಾ ಸಫಾರಿ (Tata Safari facelift) 2 - ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 170 PS ಗರಿಷ್ಠ ಪವರ್ ಹಾಗೂ 350 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 6 - ಸ್ವೀಡ್ ಮ್ಯಾನುವಲ್/ 6 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಗ್ರಾಹಕರಿಗೆ ಸಿಗಲಿದ್ದು, 16.30 ಕಿ.ಮೀ ಮೈಲೇಜ್ ಕೊಡಲಿದೆ.

Tata Safari: ಹೊಸ ಟಾಟಾ ಸಫಾರಿಗೆ ಮನಸೋಲದವರೇ ಇಲ್ಲ.. ಜೂನಿಯರ್ ಅಮಿತಾಬ್ ಬಚ್ಚನ್‌ರಿಂದಲೂ ಖರೀದಿ

ಟಾಟಾ ಸಫಾರಿ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಮುಖ್ಯವಾಗಿ 12.3 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25 - ಇಂಚಿನ ಡಿಜಿಟಲ್ ಡ್ರೈವರ್‌ಸ್ ಡಿಸ್ಪ್ಲೇ, ವೈರ್‌ಲೆಸ್ ಆಂಡ್ರಾಯ್ಡ್, ಆಪಲ್ ಕಾರ್‌ ಪ್ಲೇ, ಆಂಬಿಯೆಂಟ್ ಲೈಟಿಂಗ್, ಟಚ್ - ಬೇಸ್ಡ್ ಎಸಿ ಪ್ಯಾನೆಲ್‌, ಕ್ಲೈಮೇಟ್ ಕಂಟ್ರೋಲ್, 10 - ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ಫೀಚರ್ಸ್ ಒಳಗೊಂಡಿದೆ.

ಟಾಟಾ ಸಫಾರಿ ಫೇಸ್‌ಲಿಫ್ಟ್ ಸೇಫ್ಟಿ ದೃಷ್ಟಿಯಿಂದ ಅತ್ಯಾಧುನಿಕವಾಗಿದೆ. 7 ಏರ್‌ಬ್ಯಾಗ್‌, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 - ಡಿಗ್ರಿ ಕ್ಯಾಮರಾ, ಲೇನ್ ಡಿಪಾರ್ಚರ್ ವಾರ್ನಿಂಗ್ ಒಳಗೊಂಡಂತೆ ವಿವಿಧ ಸೇಫ್ಟಿ ಫೀಚರ್ಸ್ ಇವೆ.

ಟಾಟಾ ಸಫಾರಿಯೊಂದಿಗೆ ಬಿಡುಗಡೆಯಾದ ಹ್ಯಾರಿಯರ್ ಎಸ್‌ಯುವಿ ಬಗ್ಗೆ ಹೇಳುವುದಾದರೆ, ಇದು ರೂ.15.49 ಲಕ್ಷದಿಂದ ರೂ.26.44 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. 2.0 - ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 10.25 - ಇಂಚು ಅಥವಾ 12.3-ಇಂಚಿನ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಸಿಸ್ಟಮ್, ಎಲ್ಇಡಿ ಆಂಬಿಯೆಂಟ್ ಲೈಟಿಂಗ್, 10.25 - ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, December 6, 2023, 17:39 [IST]
English summary
Actor amitabh bachchan duplicate shashikant pedwal buy new tata safari car
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+