ರೂ.2.43 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿಸಿದ ನಟ ಅರ್ಜುನ್ ಕಪೂರ್
ಈ ಬಾಲಿವುಡ್ ಸಿನಿಮಾ ರಂಗ ಎಂಬ ಕಲರ್‍ಫುಲ್ ದುನಿಯಾದಲ್ಲಿರುವ ಸೆಲಬ್ರಿಟಿಗಳಿಗೆ ವಿಭಿನ್ನ ಕ್ರೇಜ್‍ಗಳಿವೆ. ಅದರಲ್ಲೂ ದುಬಾರಿ ಕಾರುಗಳನ್ನು ಕೊಂಡುಕೊಳ್ಳುವ ಕ್ರೇಜ್ ತುಸು ಹೆಚ್ಚೆ ಇದೆ. ಬಾಲಿವುಡ್ ಸೂಪರ್ ಸ್ಟಾರ್‌ಗಳು ಪೈಪೋಟಿಗೆ ಬಿದ್ದ ರೀತಿಯಲ್ಲಿ ಮಾರುಕಟ್ಟೆಯಲ್ಲಿರುವ ಲಭ್ಯವಿರುವ ಅತಿ ಐಷಾರಾಮಿ ಕಾರುಗಳನ್ನು ಖರೀದಿಸುತ್ತಾರೆ.

ಇತ್ತೀಚೆಗೆ ಬಾಲಿವುಡ್ ನಟ ಅರ್ಜುನ್ ಕಪೂರ್ ಹೊಸ Mercedes-Maybach GLS 600 ಐಷಾರಾಮಿ ಎಸ್‌ಯುವಿಯನ್ನು ಖರೀದಿಸಿದ್ದಾರೆ. ಈ ಕಾರನ್ನು ಇತ್ತೀಚೆಗೆ ಮುಂಬೈ ಮೂಲದ ಡೀಲರ್ ಮೂಲಕ ನಟ ಅರ್ಜುನ್ ಕಪೂರ್ ಅವರಿಗೆ ವಿತರಣೆಯನ್ನು ಪಡೆದಿದ್ದಾರೆ. ಪ್ರಮುಖ ಮೇಬ್ಯಾಕ್ ಮಾದರಿಯನ್ನು ಈ ವರ್ಷದ ಆರಂಭದಲ್ಲಿ ರೂ.2.43 ಕೋಟಿ ಬೆಲೆಗೆ ಬಿಡುಗಡೆ ಮಾಡಲಾಗಿತ್ತು. 2021ಕ್ಕೆ ಕೇವಲ 50 ಯೂನಿಟ್‌ಗಳನ್ನು ನಿಗದಿಪಡಿಸಲಾಗಿದೆ. 2022 ರಲ್ಲಿ ನಿಗದಿಯಾಗಿದ್ದ ಯುನಿಟ್ ಗಳಿಗಾಗಿ ಮರ್ಸಿಡಿಸ್ ಬೆಂಝ್ ಕಂಪನಿಯು ಎರಡನೇ ಹಂತದ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ.

ಇನ್ನು ನಟ ಅರ್ಜುನ್ ಕಪೂರ್ ಇತ್ತೀಚೆಗೆ ದುಬಾರಿ ಬೆಲೆಯ ಹೊಚ್ಚ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯನ್ನು ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಖರೀದಿಸಿದ್ದರು. ಲ್ಯಾಂಡ್ ರೋವರ್ ಡಿಫೆಂಡರ್ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮತ್ತು ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಸ್ಟಾರ್‌ಗಳಲ್ಲೇ ಮೊದಲ ಬಾರಿಗೆ ಬಹು ದುಬಾರಿ ಮಸೆರಾಟಿ ಲೆವಾಂಟೆ ಎಸ್‌ಯುವಿಯನ್ನು ಕೊಂಡುಕೊಂಡ ಮೊದಲ ಭಾರತೀಯ ನಟ ಎನ್ನುವ ಹೆಗ್ಗಳಿಕೆ ಅರ್ಜುನ್ ಕಪೂರ್ ಅವರಿಗೆ ಸಲ್ಲುತ್ತದೆ. ಇನ್ನು ಐಷಾರಾಮಿ ಆಡಿ ಕ್ಯೂ5 ಎಸ್‍ಯುವಿಯನ್ನು ಕೂಡ ಇವರು ಹೊಂದಿದ್ದಾರೆ.

ನಟ ಅರ್ಜುನ್ ಕಪೂರ್ ಹೆಚ್ಚಾಗಿ ಎಸ್‍ಯುವಿಗಳನ್ನು ಇಷ್ಟಪಡುತ್ತಾರೆ, ಅವರು ಇತ್ತೀಚೆಗೆ ಖರೀದಿಸಿದ ಲ್ಯಾಂಡ್ ರೋವರ್ ಡಿಫೆಂಡರ್ ಉತ್ತಮ ಆಫ್-ರೋಡಿಂಗ್ ಸಾಮರ್ಥ್ಯವನ್ನು ಹೊಂದಿರುವ ಎಸ್‍ಯುವಿಯಾಗಿದೆ. ಪಾಣಿಪತ್ ಮತ್ತು 2 ಸ್ಟೇಟ್ಸ್ ನಂತಹ ಹಿಟ್ ಚಲನಚಿತ್ರಗಳಲ್ಲಿ ಇವರು ನಟಿಸಿದ್ದಾರೆ.

ಇನ್ನು ಮಲಯಾಳಂನ ಸೂಪರ್ ಹಿಟ್ ಚಿತ್ರ ‘ಅಯ್ಯಪ್ಪನುಂ ಕೋಶಿಯುಂ' ಹಿಂದಿಗೆ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ಜಾನ್ ಅಬ್ರಹಾಂ ಹಾಗೂ ಅರ್ಜುನ್ ಕಪೂರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜಗನ್ ಶಕ್ತಿ ಚಿತ್ರದ ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ನಟ ಅರ್ಜುನ್ ಕಪೂರ್ ಅವರ ಖರೀದಿಸಿದ ಹೊಸ Mercedes-Maybach GLS 600 ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಈ ಐಷಾರಾಮಿ ಎಸ್‌ಯುವಿ ಮಾದರಿಯು 4 ಮ್ಯಾಟಿಕ್ ಎನ್ನುವ ಒಂದೇ ಒಂದು ವೆರಿಯೆಂಟ್ ಹೊಂದಿದೆ. ಗ್ರಾಹಕರ ಬೇಡಿಕೆಯೆಂತೆ 4 ಸೀಟರ್ ಅಥವಾ 5 ಸೀಟರ್ ಮಾದರಿಯೊಂದಿಗೆ ಖರೀದಿ ಮಾಡಬಹುದಾಗಿದೆ

Maybach GLS 600 ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಸರಣಿ ಕಾರುಗಳಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಸುಧಾರಿತ ತಂತ್ರಜ್ಞಾನ ಮತ್ತು ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ. ಇದರ ಒಳಗೆ ಮತ್ತು ಹೊರಗೆ ಬೆಸ್ಪೋಕ್ ವೈಶಿಷ್ಟ್ಯಗಳನ್ನು ಹೊಂದಿದೆ.

ಇದರ ಒಟ್ಟಾರೆ ವಿನ್ಯಾಸವು ಐಷಾರಾಮಿ ಮತ್ತು ಪ್ರೀಮಿಯಂ ಆಗಿದೆ. ಇದರಲ್ಲಿ ದೊಡ್ಡದಾದ ವರ್ಟಿಕಲ್ ಸ್ಲ್ಯಾಟ್ ಗ್ರಿಲ್, ವಿಂಡೋ ಲೈನ್, ಸೈಡ್-ಸ್ಟೆಪ್, ಮುಂಭಾಗ ಮತ್ತು ಹಿಂಭಾಗದ ಬಂಪರ್‌ಗಳಲ್ಲಿ ಡಿಸೈನ್ ಆಕ್ಸೆಂಟ್, ರೂಫ್ ರೈಲ್ಸ್ ಮತ್ತು ಸ್ಪೋರ್ಟಿ ಎಕ್ಸಾಸ್ ನೋಟ್ ಹೊಂದಿದೆ.ಪ್ರೀಮಿಯಂ ಐಷಾರಾಮಿ ಎಸ್‌ಯುವಿ ಕಾರಿನ ವಿನ್ಯಾಸಕ್ಕೆ ತಕ್ಕಂತೆ 23 ಇಂಚಿನ ಬ್ರಷ್ಡ್ ಮಲ್ಟಿ-ಸ್ಪೋಕ್ ವೀಲ್ಹ್ ಆಯ್ಕೆ ಜೊತೆಗೆ ವಿಂಡೋ ಪಿಲ್ಲರ್, ರೂಫ್ ಮೇಲೆ ಕಪ್ಪು ಬಣ್ಣದ ಡ್ಯುಯಲ್ ಟೋನ್ ಪೇಂಟ್ ಸ್ಕೀಮ್ ಮತ್ತು ‘ಮೇಬ್ಯಾಕ್' ಬ್ರಾಂಡ್ ಬ್ಯಾಡ್ಜ್ ಹೊಂದಿದೆ.

ಈ ಕಾರಿನ ಪ್ರತಿ ಸೀಟ್ ವೆಂಟಿಲೆಟರ್ ಮತ್ತು ಮಸಾಜ್ ಫಂಕ್ಷನ್ ವೈಶಿಷ್ಟ್ಯತೆ ಒಳಗೊಂಡಿದ್ದು, ಪ್ರತಿ ಸೀಟ್ ನಲ್ಲೂ ಆಡಿಯೋ, ಹವಾಮಾನ ನಿಯಂತ್ರಣ, ಆಂಬಿಯೆಂಟ್ ಲೈಟಿಂಗ್, ಸನ್ಶೇಡ್ಸ್ ಮತ್ತು ನ್ಯಾವಿಗೇಷನ್ ಅನ್ನು ಒಳಗೊಂಡಿದೆ. ಹಿಂಭಾಗದಲ್ಲಿ ಫೋರ್ಡರ್‌ಗಳಲ್ಲಿ ರೆಫ್ರಿಜರೇಟರ್ ಅನ್ನು ಸಹ ಒಳಗೊಂಡಿದೆ.

ಇನ್ನು ದೊಡ್ಡದಾದ ಪನೋರಮಿಕ್ ಮೂನ್‌ರೂಫ್, 12.3-ಇಂಚಿನ ಎಂಬಿಯುಎಕ್ಸ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಮತ್ತು 12.3-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬರ್ಮೆಸ್ಟರ್ ಸರೌಂಡ್ ಸೌಂಡ್ ಸಿಸ್ಟಮ್, 64 ಬಣ್ಣ ಮತ್ತು ಹೆಚ್ಚಿನ ಎಲ್ಇಡಿ ಆಪ್ಟಿಕಲ್ ಫೈಬರ್ ಆಂಬಿಯೆಂಟ್ ಲೈಟಿಂಗ್ ಸೇರಿವೆ.

ಈ ಎಸ್‍ಯುವಿಯಲ್ಲಿ ವಿಶೇಷ ತಂತ್ರಜ್ಞಾನ ಪ್ರೇರಿತ ಇ-ಆಕ್ಟಿವ್ ಬಾಡಿ ಕಂಟ್ರೋಲ್ ಸಸ್ಪೆಂಕ್ಷನ್ ಸಿಸ್ಟಂ ಹೊಂದಿದ್ದು, ಫ್ರಂಟ್ ಕ್ಯಾಮೆರಾ ಮೂಲಕ ಕಾರು ಚಾಲನೆಯಲ್ಲಿರುವಾಗ ರಸ್ತೆಯನ್ನು ಸ್ಕ್ಯಾನ್ ಮಾಡುವ ಮೂಲಕ ಮತ್ತು ಸಸ್ಪೆಂಕ್ಷನ್ ಹೊಂದಾಣಿಕೆಯೊಂದಿಗೆ ಅಂಡರ್ ಬಾಡಿ ಡ್ಯಾಮೆಜ್ ತಪ್ಪಿಸಲು ನೆರವಾಗುತ್ತದೆ.

ಈ ಎಸ್‍ಯುವಿಯಲ್ಲಿ 4.0 ಲೀಟರ್ ವಿ8 ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 9 ಜಿ-ಟ್ರಾನಿಕ್ ಸ್ವಯಂಚಾಲಿತ ಗೇರ್‌ಬಾಕ್ಸ್‌ನೊಂದಿಗೆ 550ಬಿಎಚ್‌ಪಿ ಮತ್ತು 730ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ ಹೊಸ ಎಂಜಿನ್‌ನಲ್ಲಿ 21ಬಿಎಚ್‌ಪಿ ಮತ್ತು 249ಎನ್ಎಂ ಟಾರ್ಕ್ ಕೊಡುಗೆ ನೀಡುವ ಸಂಯೋಜಿತ ಇಕ್ಯೂ ಬೂಸ್ಟ್ ಸ್ಟಾರ್ಟರ್-ಜನರೇಟರ್ ಅನ್ನು ಸಹ ಹೊಂದಿದೆ. Mercedes-Maybach GLS 600 ಎಸ್‍ಯುವಿಯು 250 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.


Click it and Unblock the Notifications








