ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್‌ಫೈರ್‌ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
ಟೊಯೊಟಾ ಕಾರುಗಳನ್ನು ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಇಷ್ಟಪಟ್ಟು ಖರೀದಿಸುತ್ತಾರೆ. ಇದೀಗ, ಮುಂಬೈನಲ್ಲಿ ಸೋಮವಾರ ಬಾಲಿವುಡ್ ನಟ ಆಯುಷ್ಮಾನ್ ಖುರಾನಾ (Actor Ayushmann Khurrana) ತಮ್ಮ ನೂತನ ಟೊಯೊಟಾ ವೆಲ್‌ಫೈರ್ ಎಂಪಿವಿಯಲ್ಲಿ ಕಾಣಿಸಿಕೊಂಡಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ವೈರಲ್ ಭಯಾನಿ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ನಟ ಆಯುಷ್ಮಾನ್ ಖುರಾನಾ, ಬಹುಶಃ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಬರುತ್ತಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು. ಕಾರನ್ನು ಇಳಿದು ಬರುವ ಅವರು, ಪಾಪರಾಜಿಗಳ ಫೋಟೋಗಳಿಗೂ ಪೋಸ್ ನೀಡಿದ್ದಾರೆ. ಟೊಯೊಟಾ ವೆಲ್‌ಫೈರ್ ನೋಡಲು ಹೊಸ ಕಾರಿನಂತೆ ಕಾಣುತ್ತಿದ್ದು, ನಟ ಆಯುಷ್ಮಾನ್ ಖುರಾನಾ ಕೆಲವೇ ತಿಂಗಳ ಹಿಂದೆ ಕೊಂಡುಕೊಂಡಿರಬಹುದು ಎನ್ನಲಾಗಿದೆ.

ದೇಶೀಯ ಮಾರುಕಟ್ಟೆಯಲ್ಲಿ ಟೊಯೊಟಾ ವೆಲ್‌ಫೈರ್ (Toyota Vellfire) ಎಂವಿಪಿ, ರೂ.1.20 ರಿಂದ ರೂ.1.30 ಕೋಟಿ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ ಆನ್-ರೋಡ್ ದರ ರೂ.1.50 ಕೋಟಿ ವರೆಗೂ ಆಗಲಿದೆ. ಈ ಕಾರು ಬ್ಲ್ಯಾಕ್, ಪ್ಲಾಟಿನಂ ವೈಟ್ ಪರ್ಲ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯನ್ನು ಹೊಂದಿದೆ.
ಟೊಯೊಟಾ ವೆಲ್‌ಫೈರ್ ಎಂಪಿವಿ, 2.5 - ಲೀಟರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 193 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 240 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ ಇ-ಸಿವಿಟಿ ಗೇರ್ ಬಾಕ್ಸ್ ಅನ್ನು ಪಡೆದಿದ್ದು, 19 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದ್ದು, ಗಂಟೆಗೆ 170 ಕಿ.ಮೀ ಗರಿಷ್ಠ ವೇಗವನ್ನು ಪಡೆಯಲಿದೆ.

ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, 7 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 14 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 15 - ಸ್ಪೀಕರ್ ಜಿಬಿಎಲ್ ಸೌಂಡ್ ಸಿಸ್ಟಮ್, ಹೆಡ್ಸ್-ಅಪ್ ಡಿಸ್ಪ್ಲೇ, ಡುಯಲ್ ಪ್ಯಾನಲ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಟೊಯೊಟಾ ವೆಲ್‌ಫೈರ್ ಎಂಪಿವಿ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಆಲ್ ವೀಲ್ ಡಿಸ್ಕ್ ಬ್ರೇಕ್ಸ್, ಲೇನ್ ಕೀಪ್ ಅಸಿಸ್ಟ್ & ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ. ಈ ಕಾರಿಗೆ ಮರ್ಸಿಡಿಸ್ ಬೆಂಜ್ ವಿ-ಕ್ಲಾಸ್ (Mercedes Benz V-Class) ಪ್ರಬಲ ಪ್ರತಿಸ್ಪರ್ಧಿಯಾಗಿದೆ.
ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಅವರು, ಟೊಯೊಟಾ ವೆಲ್‌ಫೈರ್ ಮಾತ್ರವಲ್ಲದೆ ಹಲವು ಐಷಾರಾಮಿ ಕಾರುಗಳ ಮಾಲೀಕರೂ ಆಗಿದ್ದಾರೆ. ಅವರ ಗ್ಯಾರೇಜ್‌ನಲ್ಲಿ ಆಡಿ ಎ4, ಮರ್ಸಿಡಿಸ್ ಬೆಂಜ್ ಎಸ್-ಕ್ಲಾಸ್ ಹಾಗೂ ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್600 ಎಸ್‌ಯುವಿಗಳಿವೆ. ಇವು ರೂ.45.34 ಲಕ್ಷದಿಂದ ಸುಮಾರು ರೂ.2.92 ಕೋಟಿ ದರವನ್ನು ಹೊಂದಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








