ರಣಬೇಟೆಗಾರ ಜಿಮ್ನಿ ಖರೀದಿಸಿದ ಜನಪ್ರಿಯ ನಟ: ಈ ಮಾರುತಿ ಎಸ್‍ಯುವಿಗೆ ಸೆಲೆಬ್ರಿಟಿಗಳು ಕೂಡ ಫಿದಾ
ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಜಿಮ್ನಿ ಎಸ್‍ಯುವಿಯು ದಾಖಲೆಯ ಮಟ್ಟದಲ್ಲಿ ಮಾರಾಟವಾಗಿ ಹೊಸ ಕ್ರಾಂತಿಯನ್ನು ಸೃಷ್ಟಿಸಿತು. ಇದೀಗ ಜನಪ್ರಿಯ ಜಿಮ್ನಿ ಎಸ್‍ಯುವಿಗೆ ಭಾರತೀಯ ಮಾರುಕಟ್ಟೆಯಲ್ಲೂ ಕೂಡ ಬಾರೀ ಬೇಡಿಕೆಯೊಂದಿಗೆ ಹೊಸ ಕ್ರಾಂತಿ ಮಾಡುತ್ತಿದೆ. ಒಂದು ಕಾಲದ ಆಫ್-ರೋಡ್ ಕಿಂಗ್ ಆಗಿದ್ದ ಜಿಪ್ಸಿಯ ಉತ್ತರಾಧಿಕಾರಿಯಾಗಿ ಬಂದ ಜಿಮ್ನಿ ಕೂಡ ಗ್ರಾಹಕರ ಮನ ಗೆದ್ದಿದೆ.
ಹೊಸ ಮಾರುತಿ ಜಿಮ್ನಿಗೆ ಸಿನಿಮಾ ಸೆಲೆಬ್ರೆಟಿಗಳು ಕೂಡ ಫಿದಾ ಆಗಿದ್ದಾರೆ. ಇತ್ತೀಚೆಗೆ ಮಲಯಾಳಂ ಚಿತ್ರರಂಗದ ಖ್ಯಾತ ನಟ ಚೆಂಬನ್ ವಿನೋದ್ ಜೋಸ್ ಅವರು ಹೊಸ ಮಾರುತಿ ಸುಜುಕಿ ಜಿಮ್ನಿ (Maruti Suzuki Jimny) ಲೈಫ್ ಸ್ಟೈಲ್ ಎಸ್‍ಯುವಿಯನ್ನು ಖರೀದಿಸಿದ್ದಾರೆ. ಜಿಮ್ನಿ ಪ್ರಸ್ತುತ ಭಾರತದಲ್ಲಿ ಬಿಡುಗಡೆಯಾದ ಅತ್ಯಂತ ಬೇಡಿಕೆಯಲ್ಲಿರುವ ಆಫ್-ರೋಡ್ ಎಸ್‍ಯುವಿಗಳಲ್ಲಿ ಒಂದಾಗಿದೆ.

ನಟ ಚೆಂಬನ್ ವಿನೋದ್ ಜೋಸ್ ಅವರು ಕೇರಳದ ಇಂಡಸ್ ಮೋಟಾರ್ಸ್‌ನ ನೆಕ್ಸಾ ಡೀಲರ್‌ಶಿಪ್‌ನಿಂದ ಈ ಹೊಸ ಎಸ್‍ಯುವಿಯನ್ನು ಖರೀದಿಸಿದ್ದಾರೆ. ಖ್ಯಾತ ನಟ ಚೆಂಬನ್ ವಿನೋದ್ ಜೋಸ್ ಅವರು ಹಲವು ಮಲಯಾಳಂ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇನ್ನೂ ತಮಿಳು ಸೂಪರ್ ಹಿಟ್ ಚಿತ್ರಗಳಲ್ಲಿಯೂ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ.
ನಟ ಚೆಂಬನ್ ವಿನೋದ್ ಜೋಸ್ ಅವರು ಮಾರುತಿ ಸುಜುಕಿ ಜಿಮ್ನಿಯ ಬಗ್ಗೆ ಹೇಳುವುದಾದರೆ, ಇದು ಪ್ರತಿಸ್ಪರ್ಧಿಗಳಾದ ಥಾರ್ ಮತ್ತು ಗೂರ್ಖಾಗೆ ಹೋಲಿಸಿದರೆ ಡ್ರೈವ್ ಮಾಡಲು ಹೆಚ್ಚು ಸುಲಭವಾಗಿದೆ. ಜಿಮ್ನಿ ಕಾಂಪ್ಯಾಕ್ಟ್ ಆಯಾಮಗಳನ್ನು ಹೊಂದಿದೆ, ಇದು ಗರಿಷ್ಠ ಟ್ರಾಫಿಕ್ ಸಮಯದಲ್ಲಿ ಚಾಲನೆ ಮಾಡಲು ಸುಲಭ. ರಸ್ತೆಯಲ್ಲಿ ಕಡಿಮೆ ಜಾಗ ಸಾಕಾಗುತ್ತದೆ.
ಅದರ ಹೊರತಾಗಿ, ಜಿಮ್ನಿಯು ಕುಶಲತೆಯಿಂದ ಕಂಟ್ರೋಲ್ ಮಾಡಲು ತುಂಬಾ ಸುಲಭವಾಗಿದೆ. ಏಕೆಂದರೆ ಇದು ತೂಕದಲ್ಲಿ ಹೆಚ್ಚು ಹಗುರವಾಗಿರುತ್ತದೆ. ಅದಕ್ಕಾಗಿಯೇ ಥಾರ್‌ಗೆ ಹೋಲಿಸಿದರೆ ಜಿಮ್ನಿ ದೈನಂದಿನ ಬಳಕೆ ಮತ್ತು ಪ್ರಯಾಣಕ್ಕೆ ಹೆಚ್ಚು ಪ್ರಾಯೋಗಿಕವಾಗಿದೆ.ಹೊಸ ಮಾರುತಿ ಸುಜುಕಿ ಜಿಮ್ನಿ 5 ಡೋರ್ ಆಫ್-ರೋಡ್ ಎಸ್‌ಯುವಿಯಾಗಿರುವುದರಿಂದ ಅದಕ್ಕೆ ತಕ್ಕಂತೆಯೇ ವಿನ್ಯಾಸವನ್ನು ಹೊಂದಿದೆ .
ಈ ಮಾರುತಿ ಜಿಮ್ನಿ ಎಸ್‍ಯುವಿಯಲ್ಲಿ ಫ್ಲಾಟ್ ಕ್ಲಾಮ್‌ಶೆಲ್ ಬಾನೆಟ್, ವಾಷರ್‌ಗಳೊಂದಿಗೆ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಅಲಾಯ್ ವೀಲ್ಸ್, 195/80 ಅಳತೆಯ ಟೈಯರ್ಸ್ ಪಡೆದಿದೆ. ಜೊತೆಗೆ ಇದರ ಫ್ರಂಟ್ ಲುಕ್ ನೋಡುಗರನ್ನು ಸೆಳೆಯುತ್ತದೆ. ರೇರ್ ಆಕರ್ಷವಾಗಿದ್ದು, ಕ್ಯಾಬಿನ್ ಒಳಭಾಗವು ಅತ್ಯುತ್ತಮವಾಗಿದೆ. 4WD (ಫೋರ್ ವೀಲ್ಸ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಜಿಮ್ನಿ 5 ಡೋರ್ ಎಸ್‍ಯುವಿಯ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಮಾತನಾಡುವುದಾದರೆ, ಇದು ಐಡಲ್ ಸ್ಟಾರ್ಟ್/ಸ್ಟಾಪ್ ಬಟನ್ ವೈಶಿಷ್ಟ್ಯದೊಂದಿಗೆ 1.5 ಲೀಟರ್ ಕೆ-ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 6000 rpm ನಲ್ಲಿ 104.8 ಪಿಎಸ್ ಗರಿಷ್ಠ ಪವರ್ ಹಾಗೂ 4000 rpm ನಲ್ಲಿ 134.2 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಈ ಎಂಜಿನ್ ನೊಂದಿಗೆ 5 ಸ್ವೀಡ್ ಮ್ಯಾನುವಲ್ ಹಾಗೂ 4 ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಈ ಮಾರುತಿ ಜಿಮ್ನಿ 5 ಡೋರ್ ಫೀಚರ್ಸ್ ಬಗ್ಗೆ ಹೇಳುವುದಾದರೆ, ಇದರಲ್ಲಿ 9 ಇಂಚಿನ ಸ್ಮಾರ್ಟ್‌ಪ್ಲೇ ಪ್ರೊ+ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಕೀಲೆಸ್ ಎಂಟ್ರಿ ಹಾಗೂ ಕಿವಿಗೆ ಕೇಳಲು ಹಿತವಾಗಿರುವ ಸೌಂಡ್ ಸಿಸ್ಟಮ್ ಹೊಂದಿದೆ.


Click it and Unblock the Notifications








