India
YouTube

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಸಿನಿಮಾ ರಂಗ ಎಂಬ ಕಲರ್‍‍‍ಫುಲ್ ದುನಿಯಾದಲ್ಲಿರುವ ಸೆಲಬ್ರಿಟಿಗಳಿಗೆ ವಿಭಿನ್ನ ಕ್ರೇಜ್‍‍ಗಳಿವೆ. ಅದರಲ್ಲೂ ದುಬಾರಿ ಕಾರುಗಳನ್ನು ಕೊಂಡುಕೊಳ್ಳುವ ಕ್ರೇಜ್ ಸ್ವಲ್ಪ ಹೆಚ್ಚೆ ಇದೆ. ಬಾಲಿವುಡ್ ಸೆಲಬ್ರಿಟಿಗಳು ಪೈಪೋಟಿಗೆ ಬಿದ್ದ ರೀತಿಯಲ್ಲಿ ಮಾರುಕಟ್ಟೆಯಲ್ಲಿರುವ ಲಭ್ಯವಿರುವ ಅತಿ ದುಬಾರಿ ಕಾರುಗಳನ್ನು ಖರೀದಿಸುತ್ತಾರೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಇತ್ತೀಚೆಗೆ ಚಂದನವನದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅವರು ದುಬಾರಿ ಬೆಲೆಯ ಐಷಾರಾಮಿ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯನ್ನು ಖರೀದಿಸಿದ್ದಾರೆ. ನಟ ದರ್ಶನ್ ಅವರಿಗೆ ಹೆಚ್ಚು ಕಾರ್ ಕ್ರೇಜ್ ಹೊಂದಿದ್ದಾರೆ. ಅವರ ಬಳಿ ಹಲವಾರು ಐಷಾರಾಮಿ ಕಾರುಗಳ ಸಂಗ್ರಹವಿದೆ. ಇದೀಗ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯು ಈ ಸಾಲಿಗೆ ಹೊಸ ಸೇರ್ಪಡೆಯಾಗಿದೆ. ದರ್ಶನ್ ಅವರ ಹೊಸ ಕಾರಿನ ಚಿತ್ರ ಸೋಷಿಯಲ್ ಮೀಡಿಯಾಗಳಲ್ಲಿ ಸಖತ್ ವೈರಲ್ ಆಗಿದೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ನಟ ದರ್ಶನ್ ಅವರು ಹೊಸದಾಗಿ ಖರೀದಿಸಿದ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಐಷಾರಾಮಿ ವಾಹನ ತಯಾರಕ ಕಂಪನಿಯಾದ ಜಾಗ್ವಾರ್ ಲ್ಯಾಂಡ್ ರೋವರ್ ತನ್ನ ಐಕಾನಿಕ್ ಡಿಫೆಂಡರ್ ಆಫ್-ರೋಡ್ ಎಸ್‍ಯುವಿಯನ್ನು 2020ರಲ್ಲಿ ಸಂಪೂರ್ಣವಾಗಿ ಪರಿಷ್ಕರಿಸಿ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಮೊದಲ ನೋಟದಲ್ಲಿಯೇ ಡಿಫೆಂಡರ್ ಎಸ್‌ಯುವಿಯು ತನ್ನ ಗಾತ್ರದಿಂದ ಗಮನ ಸೆಳೆಯುತ್ತದೆ. ಈ ಎಸ್‌ಯುವಿಯಲ್ಲಿರುವ ಕಪ್ಪು ಬಣ್ಣದ ಬ್ಯಾಡ್ಜ್‌ಗಳನ್ನು ಹೊಂದಿರುವ ಪ್ಯಾಂಗಿಯಾ ಗ್ರೀನ್ ಬಣ್ಣವು ಆಕರ್ಷಕವಾಗಿ ಕಾಣುತ್ತದೆ. ಈ ಎಸ್‌ಯುವಿಯ ಮುಂಭಾಗದಲ್ಲಿ ಡಿಆರ್‌ಎಲ್‌ ಹೊಂದಿರುವ ಎಲ್‌ಇಡಿ ಹೆಡ್‌ಲೈಟ್ ಯುನಿಟ್ ಅಳವಡಿಸಲಾಗಿದೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಟಾಪ್ ಎಂಡ್ ಮಾದರಿಯಲ್ಲಿ ಎಲ್ಇಡಿ ಮ್ಯಾಟ್ರಿಕ್ಸ್ ಹೆಡ್ ಲೈಟ್ ಯುನಿಟ್ ನೀಡಲಾಗುತ್ತದೆ. ಬಂಪರ್ ಕೆಳಭಾಗದಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಫಾಗ್ ಲ್ಯಾಂಪ್'ಗಳನ್ನು ನೀಡಲಾಗಿದೆ. ಡಿಫೆಂಡರ್ ಎಸ್‌ಯುವಿಯಲ್ಲಿ ದೊಡ್ಡ ಬಂಪರ್ ನೀಡಲಾಗಿದೆ.ಬಾನೆಟ್‌ನಲ್ಲಿರುವ ರೇಖೆಗಳು ಹಾಗೂ ಕ್ರೀಸ್‌ಗಳು ಈ ಎಸ್‌ಯುವಿಗೆ ಹೆಚ್ಚು ಸ್ಟಾನ್ಸ್ ನೀಡುತ್ತವೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಬಾನೆಟ್‌ನ ಮಧ್ಯಭಾಗದಲ್ಲಿ ಬ್ಲ್ಯಾಕ್ ಬಣ್ಣದ ದಪ್ಪವಾಗಿರುವ ಡಿಫೆಂಡರ್ ಬ್ಯಾಡ್ಜ್ ಅಳವಡಿಸಲಾಗಿದೆ. ಈ ಎಸ್‌ಯುವಿಯಲ್ಲಿ 20 ಇಂಚಿನ ಅಲಾಯ್ ವ್ಹೀಲ್ ನೀಡಲಾಗಿದೆ. ಲೋ ಎಂಡ್ ಮಾದರಿಯಲ್ಲಿ 19 ಇಂಚಿನ ವ್ಹೀಲ್'ಗಳನ್ನು ನೀಡಲಾಗುತ್ತದೆ. ಡಿಫೆಂಡರ್‌ ಎಸ್‌ಯುವಿಯ ಹೊರಭಾಗದಲ್ಲಿ ಒಟ್ಟು ಆರು ಕ್ಯಾಮೆರಾ ಹಾಗೂ ಸುತ್ತಲೂ ಸೆನ್ಸಾರ್'ಗಳಿವೆ. ಈ ಕ್ಯಾಮರಾ 360 ಡಿಗ್ರಿ ನೋಟವನ್ನು ಹೊಂದಿದ್ದು, ಆಫ್ ರೋಡಿಂಗ್'ನಲ್ಲಿ ನೆರವಿಗೆ ಬರುತ್ತದೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಐಆರ್‌ವಿ‌ಎಂ ಹಿಂದೆ ಇರುವ ಕ್ಯಾಮೆರಾ ಆಕ್ಟಿವ್ ಲೇನ್ ಅಸಿಸ್ಟ್ ಹಾಗೂ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಆಗಿ ಕಾರ್ಯನಿರ್ವಹಿಸುತ್ತದೆ. ಮತ್ತೊಂದೆಡೆ, ಐಆರ್‌ವಿ‌ಎಂನಲ್ಲಿ ವೀಡಿಯೊ ಪ್ರದರ್ಶಿಸುವ ಶಾರ್ಕ್-ಫಿನ್ ಆಂಟೆನಾದಲ್ಲಿ ಕ್ಯಾಮೆರಾ ಇನೀಡಲಾಗಿದೆ. ಈ ಎಸ್‍ಯುವಿಯ ಬೂಟ್‌ನಲ್ಲಿ ಹೆಚ್ಚುವರಿ ಲಗೇಜ್ ಇದ್ದರೆ ಮಿರರ್ ಮೂಲಕ ಹಿಂದೆ ನೋಡಲು ಸಾಧ್ಯವಾಗದಿದ್ದರೆ ಈ ಫೀಚರ್ ನೆರವಿಗೆ ಬರುತ್ತದೆ. ಈ ಎಸ್‌ಯುವಿಯು ಸುಮಾರು 218 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹೊಂದಿದೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯು ಏರ್ ಸಸ್ಪೆಂಷನ್ ಹೊಂದಿರುವುದರಿಂದ ಆಫ್-ರೋಡ್ ಮೋಡ್‌ನಲ್ಲಿ ಎತ್ತರವನ್ನು 291 ಎಂಎಂಗಳವರೆಗೆ ಹೆಚ್ಚಿಸಬಹುದು. ಈ ಎಸ್‌ಯುವಿಯ ಹಿಂಭಾಗದಲ್ಲಿ ಟೇಲ್‌ಲೈಟ್‌ಗಳಿಗಾಗಿ ಹೊಸ ವಿನ್ಯಾಸವನ್ನು ನೀಡಲಾಗಿದೆ. ಸ್ಪೇರ್ ವ್ಹೀಲ್ ಅನ್ನು ಬೂಟ್‌ನಲ್ಲಿ ನೀಡಿರುವುದರಿಂದ ಬೂಟ್ ತುಸು ಭಾರವೆನಿಸುತ್ತದೆ. ಬೂಟ್'ಗಳ ಮೇಲೆ ಬ್ಯಾಡ್ಜ್‌ ಹಾಗೂ ಮಾದರಿಗಳ ಹೆಸರುಗಳನ್ನು ಕಾಣಬಹುದು. ಯಾವುದೇ ಮಾದರಿಗಳಲ್ಲಿ ಕ್ರೋಮ್ ಅಂಶವನ್ನು ನೀಡಲಾಗಿಲ್ಲ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಕ್ರೋಮ್'ನಂತೆ ಕಾಣುವ ಭಾಗವು ವಾಸ್ತವವಾಗಿ ಅಲ್ಯೂಮಿನಿಯಂ ಅಸೆಂಟ್ ಆಗಿದ್ದು, ಆಕರ್ಷಕವಾಗಿ ಕಾಣುತ್ತದೆ. ಈ ಎಸ್‌ಯುವಿಯ ಕ್ಯಾಬಿನ್ ವಿಶಾಲವಾಗಿದೆ. ಈ ಎಸ್‌ಯುವಿಯಲ್ಲಿರುವ ದೊಡ್ಡ ಪನೋರಾಮಿಕ್ ಸನ್‌ರೂಫ್ ಮತ್ತು ಸೈಡ್ ಆಲ್ಪೈನ್ ಲೈಟ್ ವಿಂಡೋಗಳು ಕ್ಯಾಬಿನ್‌ನೊಳಗೆ ಹೆಚ್ಚು ಬೆಳಕನ್ನು ನೀಡುತ್ತವೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಇದರಿಂದ ಸಫಾರಿ ಸಮಯದಲ್ಲಿ ಹೆಚ್ಚು ನೋಟವನ್ನು ಪಡೆಯಲು ಸಾಧ್ಯವಾಗುತ್ತದೆ. ಡಿಫೆಂಡರ್ ಎಸ್‌ಯುವಿಯೊಂದಿಗೆ ಮೂರು ಇಂಟಿರಿಯರ್ ಬಣ್ಣಗಳನ್ನು ನೀಡಲಾಗುತ್ತದೆ. ಪ್ಯಾಂಗಿಯಾ ಗ್ರೀನ್ ಬಣ್ಣದಲ್ಲಿ ಕಪ್ಪು ಬಣ್ಣದ ಇಂಟಿರಿಯರ್ ನೀಡಲಾದರೆ, ಮತ್ತೊಂದು ಲೈಟ್ ಕ್ರೀಮ್ ಬಣ್ಣದ ಇಂಟಿರಿಯರ್ ಅನ್ನು ಹೊಂದಿದೆ. ಡಿಫೆಂಡರ್ ಎಸ್‌ಯುವಿಯಲ್ಲಿ ಒಟ್ಟು 14 ಯುಎಸ್‌ಬಿ ಹಾಗೂ ಚಾರ್ಜಿಂಗ್ ಸಾಕೆಟ್‌ಗಳನ್ನು ನೀಡಿದೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಈ ಚಾರ್ಜರ್ ಮೂಲಕ ಲ್ಯಾಪ್‌ಟಾಪ್, ಸ್ಪೀಕರ್ ಸೇರಿದಂತೆ ಹಲವು ಗೃಹೋಪಯೋಗಿ ಉಪಕರಣಗಳನ್ನು ಚಾರ್ಜ್ ಮಾಡಬಹುದು. ಟಾಪ್ ಎಂಡ್ ಮಾದರಿಯು ವೆಂಟಿಲೇಟೆಡ್ ಆಗಿದ್ದು, ಡ್ರೈವರ್ ಹಾಗೂ ಪ್ರಯಾಣಿಕರ ಸೀಟುಗಳಲ್ಲಿ ಮೆಮೊರಿ ಫಂಕ್ಷನ್ ನೀಡಲಾಗಿದೆ. ಸ್ಟೀಯರಿಂಗ್ ವ್ಹೀಲ್ ಎಲೆಕ್ಟ್ರಿಕ್ ಅಡ್ಜಸ್ಟಬಲ್ ಆಗಿದ್ದು, ಆಟೋ ಫೀಚರ್ ಹೊಂದಿದೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಈ ಆಟೋ ಫೀಚರ್ ಸ್ಟೀಯರಿಂಗ್ ವ್ಹೀಲ್ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಚಾಲಕನ ಸೀಟ್ ಅನ್ನು ಎತ್ತರಕ್ಕೆ ಅನುಗುಣವಾಗಿ ಹೊಂದಿಸಲು ನೆರವಾಗುತ್ತದೆ. ಈ ಎಸ್‌ಯುವಿಯಲ್ಲಿ ಆಪಲ್ ಕಾರ್ ಪ್ಲೇ ಹಾಗೂ ಆಂಡ್ರಾಯ್ಡ್ ಆಟೋ ಹೊಂದಿರುವ 10 ಇಂಚಿನ ಇನ್ಫೋಟೇನ್ಮೆಂಟ್ ಸಿಸ್ಟಂ ನೀಡಲಾಗಿದೆ. ಸ್ಟೀಯರಿಂಗ್ ವ್ಹೀಲ್ ಅನ್ನುಲೆದರ್'ನಿಂದ ವ್ರಾಪ್ ಮಾಡಲಾಗಿದೆ. ಸ್ಟೀಯರಿಂಗ್ ಮೌಂಟೆಡ್ ಕಂಟ್ರೋಲ್'ಗಳು ಚಾಲಕನ ಗಮನವನ್ನು ರಸ್ತೆಯ ಮೇಲಿರುವಂತೆ ಮಾಡುತ್ತವೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಈ ಡಿಫೆಂಡರ್ ಎಸ್‌ಯುವಿಯಲ್ಲಿ ಕ್ರೂಸ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, 3 ಡಿ ಮೆರಿಡಿಯನ್ ಸರೌಂಡ್ ಸೌಂಡ್ ಸಿಸ್ಟಂ, ಆ ಸ್ಟ್ರೀಮ್ ಕ್ರಾಸಿಂಗ್‌ಗಳಿಗಾಗಿ ವೇಡ್ ಸೆನ್ಸಿಂಗ್, ಡ್ರೈವರ್ ಕಂಡಿಷನ್ ಮಾನಿಟರಿಂಗ್, ಏರ್‌ಬ್ಯಾಗ್, ಎಬಿಎಸ್, ಟ್ರಾಕ್ಷನ್ ಕಂಟ್ರೋಲ್ ಸೇರಿದಂತೆ ಹಲವಾರು ಫೀಚರ್'ಗಳನ್ನು ನೀಡಲಾಗಿದೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯಲ್ಲಿ 2.0 ಲೀಟರ್, ನಾಲ್ಕು ಸಿಲಿಂಡರ್, ಟರ್ಬೊ-ಪೆಟ್ರೋಲ್ ಪಿ 300 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ ಸುಮಾರು 300 ಬಿ‌ಹೆಚ್‌ಪಿ ಪವರ್ ಹಾಗೂ 400 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್'ಗೆ ಎಂಟು ಸ್ಪೀಡಿನ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಜೋಡಿಸಲಾಗಿದೆ. ಇದು ಎಲ್ಲಾ ನಾಲ್ಕು ವ್ಹೀಲ್'ಗಳಿಗೆ ಪವರ್ ಕಳುಹಿಸುತ್ತದೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಇದರೊಂದಿಗೆ 3.0 ಲೀಟರ್ ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ 4000 ಆರ್‌ಪಿಎಂನಲ್ಲಿ 298 ಬಿಹೆಚ್‌ಪಿ ಪವರ್ ಹಾಗೂ 1500 - 2500 ಆರ್‌ಪಿಎಂ ನಡುವೆ 650 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್'ನೊಂದಿಗೆ ಎಂಟು ಸ್ಪೀಡಿನ ಆಟೋಮ್ಯಾಟಿಕ್ ಟ್ರಾನ್ಸ್'ಮಿಷನ್ ಯುನಿಟ್ ಜೋಡಿಸಲಾಗಿದೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯು ಕಂಪನಿಯ ಇತ್ತೀಚಿನ ಟೆರೈನ್ ರೆಸ್ಪಾನ್ಸ್ 2 ಫೀಚರ್ ಹೊಂದಿದೆ. ಈ ಫೀಚರ್ ಗ್ರಾಹಕರಿಗೆ ಜನರಲ್ ಡ್ರೈವಿಂಗ್, ಗ್ರಾಸ್, ಗ್ರಾವೆಲ್, ಗ್ರಾಸ್, ಸ್ನೋ, ಮಡ್ ಅಂಡ್ ರಟ್ಸ್, ಸ್ಯಾಂಡ್, ರಾಕ್ ಕ್ರಾಲ್ ಹಾಗೂ ವೇಡ್ ಎಂಬ ವಿವಿಧ ಡ್ರೈವಿಂಗ್ ಮೋಡ್'ಗಳನ್ನು ನೀಡುತ್ತದೆ. ಡಿಫೆಂಡರ್ ಎಸ್‌ಯುವಿಯು 900 ಎಂಎಂವರೆಗಿನ ನೀರಿನಲ್ಲಿ ಸಾಗುತ್ತದೆ. ಆಫ್-ರೋಡ್ ಮೋಡ್‌ನಲ್ಲಿ ಚಾಲನೆ ಮಾಡುವಾಗ ಏರ್ ಸಸ್ಪೆಂಷನ್'ನಿಂದಾಗಿ ಎಸ್‌ಯುವಿ ಎತ್ತರದಲ್ಲಿರುವ ಕಾರಣಕ್ಕೆ ಸ್ವಲ್ಪ ಪ್ರಮಾಣದ ಬಾಡಿ ರೋಲ್ ಇರುತ್ತದೆ. ಚಾಲನೆ ಮಾಡಲು ಅತ್ಯುತ್ತಮ ಸಸ್ಪೆಂಷನ್ ಮೋಡ್ ಜನರಲ್ ಮೋಡ್ ಆಗಿದೆ. ಈ ಮೋಡ್'ನಲ್ಲಿ ಸಸ್ಪೆಂಷನ್ ಸೆಟ್ಟಿಂಗ್‌ಗಳು ಉತ್ತಮವಾಗಿದ್ದು, ಎಸ್‌ಯುವಿಯು ಪ್ರತಿಯೊಂದು ಹಂಪ್ ಹಾಗೂ ರಸ್ತೆ ಗುಂಡಿಯಲ್ಲಿ ಸರಾಗವಾಗಿ ಚಲಿಸುತ್ತದೆ.

ಮತ್ತೊಂದು ಐಷಾರಾಮಿ ಕಾರಿನ ಒಡೆಯನಾದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಅವರು ಕಾರುಗಳ ಸಂಗ್ರಹದಲ್ಲಿ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯನ್ನು ಹೊಸ ಸೇರ್ಪಡೆಯಾಗಿದೆ. ಈ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯು ಅದ್ಭುತವಾಗಿದ್ದು, ಸಮರ್ಥವಾದ ಐಷಾರಾಮಿ ಆಫ್ ರೋಡ್ ಎಸ್‌ಯುವಿಗಳಲ್ಲಿ ಒಂದಾಗಿದೆ.

Most Read Articles

Kannada
English summary
Actor darshan buys new land rover defender suv details
Story first published: Saturday, June 18, 2022, 13:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X