ದೀಪಾವಳಿ ಪ್ರಯುಕ್ತ ಐಷಾರಾಮಿ ಕಾರುಗಳಿಗೆ ಪೂಜೆ ಸಲ್ಲಿಸಿದ ನಟ ದರ್ಶನ್.. ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ (Darshan) ಅವರಿಗೆ ಅನಾರೋಗ್ಯದ ಹಿನ್ನೆಲೆ, ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಕ್ಟೋಬರ್ 30ರಂದು ಬಳ್ಳಾರಿ ಕೇಂದ್ರ ಕಾರಗೃಹದಿಂದ ಹೊರಬಂದ ಅವರು, ನೇರವಾಗಿ ಬೆಂಗಳೂರಿನ ಹೊಸಕೆರೆ ಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮಿ ನಿವಾಸಕ್ಕೆ ತೆರಳಿದ್ದಾರೆ. ಅಲ್ಲಿ ನಿನ್ನೆ ಪುತ್ರ ವಿನೀಶ್ ಹುಟ್ಟುಹಬ್ಬ ಆಚರಿಸಿದ್ದಾರೆ. ಜೊತೆಗೆ ಆರ್.ಆರ್.ನಗರದ ಮನೆಯಿಂದ ದುಬಾರಿ ಬೆಲೆಯ ಐಷಾರಾಮಿ ಕಾರುಗಳನ್ನು ತರಿಸಿಕೊಂಡು ದೀಪಾವಳಿ ಪ್ರಯುಕ್ತ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ನಟ ದರ್ಶನ್ ಅವರು ಪೂಜೆ ಸಲ್ಲಿಸಿದ ಬಳಿಕ, ಪತ್ನಿ ವಿಜಯಲಕ್ಷ್ಮಿ ನಿವಾಸದಿಂದ ಒಂದೊಂದೇ ಕಾರುಗಳು ಹೊರಬರುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಜಾಗ್ವಾರ್ ಎಕ್ಸ್‌ಕೆ, ಫೋರ್ಡ್ ಮುಸ್ತಾಂಗ್ ಹಾಗೂ ಟೊಯೊಟಾ ವೆಲ್‌ಫೈರ್‌ನಂತಹ ಐಷಾರಾಮಿ ಕಾರುಗಳನ್ನು ದೃಶ್ಯದಲ್ಲಿ ಕಾಣಬಹುದು.

ದರ್ಶನ್ ಅವರ ಬಳಿಯಿರುವ ಲಂಬೋರ್ಗಿನಿ ಅವೆಂಟಡಾರ್ (Lamborghini Aventador) ಕಾರಿನ ಬಗ್ಗೆ ಹೇಳುವುದಾದರೆ, ಇದು ಅತ್ಯಂತ ದುಬಾರಿ ಬೆಲೆಯನ್ನು ಹೊಂದಿದೆ. ಆದರೆ, ಈ ಕಾರು ಸದ್ಯ ಖರೀದಿಗೆ ಲಭ್ಯವಿಲ್ಲ. ಕಡೆಯದಾಗಿ ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.5 ರಿಂದ ರೂ.9 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿತ್ತು.
ನಟ ದರ್ಶನ್ ಟೊಯೊಟಾ ವೆಲ್‌ಫೈರ್ (Toyota Vellfire) ಕಾರಿನ ಮಾಲೀಕರೂ ಆಗಿದ್ದಾರೆ. ಹಲವು ಬಾರಿ ಈ ಕಾರಿನಲ್ಲಿ ಓಡಾಟ ನಡೆಸುವಾಗ ಕಾಣಿಸಿಕೊಂಡಿದ್ದಾರೆ. ಇದು ಐಷಾರಾಮಿ ಎಂಪಿವಿಯಾಗಿದ್ದು, ರೂ.1.22 ರಿಂದ ರೂ.1.32 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಇದರಲ್ಲಿ 7 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ಈ ಟೊಯೊಟಾ ವೆಲ್‌ಫೈರ್ 2.5-ಲೀಟರ್ ಹೈಬ್ರಿಡ್ (ಪೆಟ್ರೋಲ್ & ಎಲೆಕ್ಟ್ರಿಕ್) ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 193 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 240 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (14-ಇಂಚು), ಫುಲ್ ಡಿಜಿಟಲ್ ಡ್ರೈವರ್ಸ್ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ದಚ್ಚು ಬಳಿ ಫೋರ್ಡ್ ಮುಸ್ತಾಂಗ್ (Ford Mustang) ಕಾರು ಇದ್ದು, ರೂ.80 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ವಿ8 ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 6- ಸ್ಪೀಡ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (13.2-ಇಂಚು) ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ನಟ ದರ್ಶನ್ ಟೊಯೋಟಾ ಫಾರ್ಚುನರ್ (Toyota Fortuner) ಕಾರಿನ ಒಡೆಯರು ಆಗಿದ್ದಾರೆ. ಇದು ರೂ.33.43 ರಿಂದ ರೂ.51.44 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 2.7-ಲೀಟರ್ ಪೆಟ್ರೋಲ್ ಮತ್ತು 2.8-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), 11-ಸ್ಪೀಕರ್ ಸೌಂಡ್ ಸಿಸ್ಟಮ್ ವೈರ್‌ಲೆಸ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಇವುಗಳು ಮಾತ್ರವಲ್ಲದೆ ದರ್ಶನ್ ಅವರು, ಜೀಪ್ ರಾಂಗ್ಲರ್ (Jeep Wrangler), ಮಿನಿ ಕೂಪರ್ ಕಂಟ್ರಿಮ್ಯಾನ್ (Mini cooper countryman), ರೇಂಜ್ ರೋವರ್ ವೋಗ್ (Range Rover Vogue), ಪೋರ್ಷೆ ಕೇಯೆನ್ನೆ (Porsche Cayenne), ಜಾಗ್ವಾರ್ ಎಕ್ಸ್‌ಕೆ (Jaguar XK) ಕಾರುಗಳ ಮಾಲೀಕರು ಆಗಿದ್ದಾರೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications