ಅಲ್ಲು ಅರ್ಜುನ್ ಆಯ್ತು ಈಗ ಫಹಾದ್ ಫಾಸಿಲ್: ಪುಷ್ಪ ಹಿಟ್ ಬಳಿಕ ಬಹುಕೋಟಿಯ ಕಾರು ಖರೀದಿ

ಫಹಾದ್ ಫಾಸಿಲ್ ಸದ್ಯ ಸೌತ್ ಇಂಡಿಯಾ ಸಿನಿಮಾಗಳಲ್ಲಿ ಮಿಂಚುತ್ತಿರುವ ಜನಪ್ರಿಯ ನಟ. ಸಾಧಾರಣ ಪ್ರಾದೇಶಿಕ ಸಿನಿಮಾ ನಾಯಕನಾಗಿ ಅಭಿಯನ ರಂಗಕ್ಕೆ ಕಾಲಿಟ್ಟ ನಟನಿಗೆ ಈಗ ಕಾಲಿವುಡ್, ಟಾಲಿವುಡ್ ಸೇರಿದಂತೆ ಎಲ್ಲೆಡೆಯಿಂದ ಉತ್ತಮ ಆಫರ್​ಗಳು ಬರುತ್ತಿವೆ.

ಬಹುಕೋಟಿ ಬೆಲೆಯ ಲ್ಯಾಂಬೊರ್ಗಿನಿ ಉರುಸ್ ಕಾರು ಖರೀದಿಸಿದ ನಟ ಫಹಾದ್

ಈ ಜನಪ್ರಿಯ ನಟ ಫಹಾದ್ ಫಾಸಿಲ್ ಅವರು ಇತ್ತೀಚೆಗೆ ಹೊಚ್ಚಹೊಸ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಖರೀದಿಸಿದ್ದಾರೆ. ಈ ಕಾರು ಇತ್ತೀಚೆಗೆ ರಸ್ತೆಗಳಲ್ಲಿ ಕಾಣಿಸಿಕೊಂಡಿದೆ.ನಟ ಫಹಾದ್ ಫಾಸಿಲ್ ಗ್ರಿಗಿಯೊ ಕೆರೆಸ್ ಶೇಡ್ ಮಾದರಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಲ್ಯಾಂಬೊರ್ಗಿನಿ ಉರುಸ್ ಎಸ್‍ಯುವಿ ಮಾದರಿಯು ಹಲವು ಸೆಲಬ್ರಿಟಿಗಳ ಮೆಚ್ಚಿನ ಆಯ್ಕೆಯಾಗಿದೆ. ನಟ ಫಹಾದ್ ಅವರು ಹೆಚ್ಚು ಕಾರು ಕ್ರೇಜ್ ಅನ್ನು ಹೊಂದಿದ್ದಾರೆ. ಇವರು ಪೈಥಾನ್ ಗ್ರೀನ್ ಪೋರ್ಷೆ 911 ಕ್ಯಾರೆರಾ ಎಸ್ ಮತ್ತು ಐಷಾರಾಮಿ ಟೊಯೊಟಾ ವೆಲ್‌ಫೈರ್ ಕಾರನ್ನು ಹೊಂದಿದ್ದಾರೆ.

ಬಹುಕೋಟಿ ಬೆಲೆಯ ಲ್ಯಾಂಬೊರ್ಗಿನಿ ಉರುಸ್ ಕಾರು ಖರೀದಿಸಿದ ನಟ ಫಹಾದ್

ನಟ ಫಹಾದ್ ಫಾಸಿಲ್ ಬಗ್ಗೆ ಹೇಳುವುದಾದರೆ, ಇವರು ಚಾಕ್ಲೆಟ್ ಹೀರೋ ಆಗಿ ಸಿನಿಮಾ ರಂಗಕ್ಕೆ ಕಾಲಿಟ್ಟ ಫಹಾದ್ ಸಿನಿಮಾಗಳು ತಕ್ಕಮಟ್ಟಿಗೆ ಹಿಟ್ ಆದರೂ ನಟನ ಈಗಿನ ಸಿನಿಮಾ ಪ್ರಸಿದ್ಧಿಗೆ ಹೋಲಿಸಿದರೆ ಹಿಂದಿನ ಸಿನಿಮಾಗಳು ಏನೇನು ಆಗಿರಲಿಲ್ಲ. ಆದರೆ ಇತ್ತೀಚಿನ ವರ್ಷಗಳಲ್ಲಿ ಫಹಾದ್​ಗೆ ಅತ್ಯುತ್ತಮ ಸಿನಿಮಾ ಆಫರ್​ಗಳು ಬರುತ್ತಿವೆ.

ಬಹುಕೋಟಿ ಬೆಲೆಯ ಲ್ಯಾಂಬೊರ್ಗಿನಿ ಉರುಸ್ ಕಾರು ಖರೀದಿಸಿದ ನಟ ಫಹಾದ್

ಬಹಳ ಸ್ಪೆಷಲ್ ಎನ್ನುವ ಪಾತ್ರಗಳನ್ನು ಮಾಡಿ ನಟ ಈಗ ಸೌತ್ ಮತ್ತು ನಾರ್ತ್ ನಲ್ಲಿಯೂ ಪ್ರಸಿದ್ಧಿ ಗಳಿಸುತ್ತಿದ್ದಾರೆ. ತೆಲುಗಿನ ಪುಷ್ಪ ಸಿನಿಮಾ ಹಾಗೂ ಕಾಲಿವುಡ್​ನ ವಿಕ್ರಮ್ ಸಿನಿಮಾದಲ್ಲಂತೂ ಫಹಾದ್ ನಟನೆಗೆ ಸಾಟಿಯೇ ಇಲ್ಲ. ಮೊದಲು ಬೆಂಗಳೂರು ಡೇಸ್ ಸಿನಿಮಾ ಬರುವ ತನಕ ಬಹಳಷ್ಟು ಜನರಿಗೆ ಫಹಾದ್ ಪರಿಚಯವೇ ಇರಲಿಲ್ಲ. ಆದರೆ ಆ ಸಿನಿಮಾದಿಂದ ನಟನ ಎರಡನೇ ಇನ್ನಿಂಗ್ಸ್ ಶುರುವಾಯಿತು.

ಬಹುಕೋಟಿ ಬೆಲೆಯ ಲ್ಯಾಂಬೊರ್ಗಿನಿ ಉರುಸ್ ಕಾರು ಖರೀದಿಸಿದ ನಟ ಫಹಾದ್

ನಂತರದಲ್ಲಿ ಜೋಜಿ, ಕುಂಬಳಂಗಿ ನೈಟ್ಸ್, ಸಿ ಯೂ ಸೂನ್, ತೊಂಡಿಮುದಲುಂ ದೃಕ್ಷಾಕ್ಷಿಯುಂ ಸೇರಿ ಹಲವು ಸಿನಿಮಾಗಳ ಮೂಲಕ ಫಹಾದ್ ಹೆಚ್ಚಿನ ಜನಪ್ರಿಯತೆ ಗಳಿಸಿದರು. ನಂತರದಲ್ಲಿ ನಟನಿಗೆ ಪುಷ್ಪಾ, ವಿಕ್ರಮ್​ನಂತಹ ದೊಡ್ಡ ದೊಡ್ಡ ಪ್ರಾಜೆಕ್ಟ್​ಗಳು ಲಭಿಸಿದವು.

ಬಹುಕೋಟಿ ಬೆಲೆಯ ಲ್ಯಾಂಬೊರ್ಗಿನಿ ಉರುಸ್ ಕಾರು ಖರೀದಿಸಿದ ನಟ ಫಹಾದ್

ನಟ ಹೊಸದಾಗಿ ಖರಿದಿಸಿದ ಲ್ಯಾಂಬೊರ್ಗಿನಿ ಉರುಸ್ ಬಗ್ಗೆ ಹೇಳುವುದಾದರೆ, ಇದು ಲ್ಯಾಂಬೊರ್ಗಿನಿ ಸರಣಿಯ ಮೊದಲ ಎಸ್‍ಯುವಿಯಾಗಿದೆ. ಮಾಡೆಲ್ ಸೂಪರ್ ಎಸ್‌ಯುವಿ ಮಾರುಕಟ್ಟೆಗೆ ಬರುವ ಅತ್ಯಂತ ವೇಗದ ಸ್ಪೋರ್ಟ್ಸ್ ಯುಟಿಲಿಟಿ ವಾಹನಗಳಲ್ಲಿ ಒಂದಾಗಿದೆ. ಲಂಬೋರ್ಗಿನಿಯ ಮೊದಲ ಉರುಸ್ ಮಾದರಿ ಉರುಸ್ ಅನ್ನು 2018 ರ ಜನವರಿಯಲ್ಲಿ ಜಾಗತಿಕವಾಗಿ ಬಿಡುಗಡೆ ಮಾಡಲಾಗುವುದು.

ಬಹುಕೋಟಿ ಬೆಲೆಯ ಲ್ಯಾಂಬೊರ್ಗಿನಿ ಉರುಸ್ ಕಾರು ಖರೀದಿಸಿದ ನಟ ಫಹಾದ್

ಉರುಸ್, ಲ್ಯಾಂಬೊರ್ಗಿನಿ ಕಂಪನಿಯ ಹೆಚ್ಚು ಮಾರಾಟವಾದ ಕಾರುಗಳಲ್ಲಿ ಒಂದಾಗಿದೆ. ಈ ಕಾರು ಅನೇಕ ಫೀಚರ್'ಗಳನ್ನು ಹೊಂದಿದೆ. ಉರುಸ್ ಎಸ್‌ಯುವಿಯಲ್ಲಿ 4.0 ಲೀಟರ್, 8-ಸಿಲಿಂಡರ್ ಟ್ವಿನ್-ಟರ್ಬೊ ವಿ 8 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 641 ಬಿಹೆಚ್‌ಪಿ ಪವರ್ ಹಾಗೂ 850 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಲ್ಯಾಂಬೊರ್ಗಿನಿ ಕಂಪನಿಯ ಅತ್ಯಂತ ಶಕ್ತಿಶಾಲಿಯಾದ ಎಂಜಿನ್ ಆಗಿದೆ.

ಬಹುಕೋಟಿ ಬೆಲೆಯ ಲ್ಯಾಂಬೊರ್ಗಿನಿ ಉರುಸ್ ಕಾರು ಖರೀದಿಸಿದ ನಟ ಫಹಾದ್

ಉರುಸ್ ಎಸ್‌ಯುವಿಯು ಕೇವಲ 3.6 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಆಕ್ಸಲರೇಟ್ ಮಾಡುತ್ತದೆ. ಈ ಕಾರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 305 ಕಿ.ಮೀಗಳಾಗಿದೆ. ಈ ಎಸ್‌ಯುವಿಯು ಆಫ್-ರೋಡ್'ಗಾಗಿ ವಿಭಿನ್ನ ಚಾಲನಾ ವಿಧಾನಗಳನ್ನು ಹೊಂದಿದೆ. ಲ್ಯಾಂಬೊರ್ಗಿನಿ ಉರುಸ್ ಫೋಕ್ಸ್‌ವ್ಯಾಗನ್ ಗ್ರೂಪ್‌ನ ಎಂಎಲ್‌ಬಿ ಇವೊ ಪ್ಲಾಟ್‌ಫಾರಂನ ಮೇಲೆ ನಿರ್ಮಾಣವಾಗಿದೆ. ಇದೇ ಪ್ಲಾಟ್‌ಫಾರಂನಲ್ಲಿಯೇ ಆಡಿ ಕ್ಯೂ 7 ಹಾಗೂ ಪೋರ್ಷೆ ಕೇನ್ ಕಾರುಗಳನ್ನು ನಿರ್ಮಿಸಲಾಗಿದೆ.

ಬಹುಕೋಟಿ ಬೆಲೆಯ ಲ್ಯಾಂಬೊರ್ಗಿನಿ ಉರುಸ್ ಕಾರು ಖರೀದಿಸಿದ ನಟ ಫಹಾದ್

ಜನಪ್ರಿಯ ಲ್ಯಾಂಬೊರ್ಗಿನಿ ಉರುಸ್ ಎಸ್‌ಯುವಿಯು ಸ್ಲಿಮ್ ಆದ ಎಲ್‌ಇಡಿ ಹೆಡ್‌ಲೈಟ್ ಹಾಗೂ ಟೇಲ್ ಲೈಟ್‌ಗಳನ್ನು ಹೊಂದಿದೆ. ಈ ಎಸ್‌ಯುವಿಯ ವಿನ್ಯಾಸವು ಲ್ಯಾಂಬೊರ್ಗಿನಿ ಹುರಾಕನ್ ಸೂಪರ್ ಕಾರಿನಿಂದ ಸ್ಫೂರ್ತಿ ಪಡೆದಿದೆ.

ಬಹುಕೋಟಿ ಬೆಲೆಯ ಲ್ಯಾಂಬೊರ್ಗಿನಿ ಉರುಸ್ ಕಾರು ಖರೀದಿಸಿದ ನಟ ಫಹಾದ್

ಈ ಲ್ಯಾಂಬೊರ್ಗಿನಿ ಉರುಸ್ ಎಸ್‍ಯುವಿಯು 21 ಇಂಚಿನ ಅಲಾಯ್ ವ್ಹೀಲ್'ಗಳನ್ನು ಹೊಂದಿದೆ. ಈ ಎಸ್‌ಯುವಿಯಲ್ಲಿ 22 ಹಾಗೂ 23 ಇಂಚಿನ ಅಲಾಯ್ ವ್ಹೀಲ್'ಗಳನ್ನು ಅಳವಡಿಸಬಹುದು. ಉರುಸ್, ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾದ ಲ್ಯಾಂಬೊರ್ಗಿನಿ ಕಂಪನಿಯ ಕಾರ್ ಆಗಿದೆ.

ಬಹುಕೋಟಿ ಬೆಲೆಯ ಲ್ಯಾಂಬೊರ್ಗಿನಿ ಉರುಸ್ ಕಾರು ಖರೀದಿಸಿದ ನಟ ಫಹಾದ್

ಫಹಾದ್ ಫಾಸಿಲ್ ಅವರು ಪೈಥಾನ್ ಗ್ರೀನ್ ಪೋರ್ಷೆ 911 ಕ್ಯಾರೆರಾ ಎಸ್ ಅನ್ನು ಹೊಂದಿದ್ದಾರೆ. ಈ ಸ್ಪೋರ್ಟ್ಸ್ ಕಾರ್ 3.0-ಲೀಟರ್ ಫ್ಲಾಟ್-ಸಿಕ್ಸ್ ಸಿಲಿಂಡರ್ ಬಾಕ್ಸರ್ ಪೆಟ್ರೋಲ್ ಎಂಜಿನ್ ನಿಂದ ನಿಯಂತ್ರಿಸಲ್ಪಡುತ್ತದೆ. ಇದು ಟ್ವಿನ್ ಟರ್ಬೋಚಾರ್ಜರ್‌ಗಳನ್ನು ಹೊಂದಿದ್ದು ಅದು 911 ಕ್ಯಾರೆರಾ ಎಸ್ 450 ಬಿಹೆಚ್‍ಪಿ ಪವರ್ ಮತ್ತು 530 ಎನ್ಎಂ ಪೀಕ್ ಟಾರ್ಕ್ ಅನ್ನು ಪಡೆಯುತ್ತದೆ ಎಂದು ಖಚಿತಪಡಿಸುತ್ತದೆ. ಇದು 8-ಸ್ಪೀಡ್ ಡ್ಯುಯಲ್-ಕ್ಲಚ್ ಟ್ರಾನ್ಸ್‌ಮಿಷನ್ ಅನ್ನು ಪಡೆಯುತ್ತದೆ,

ಬಹುಕೋಟಿ ಬೆಲೆಯ ಲ್ಯಾಂಬೊರ್ಗಿನಿ ಉರುಸ್ ಕಾರು ಖರೀದಿಸಿದ ನಟ ಫಹಾದ್

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಫಹಾದ್ ಫಾಸಿಲ್ ಕಾರು ಕಲೆಕ್ಷನ್ಗೆ ಮತ್ತೊಂದು ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರು ಹೊಸ ಸೇರ್ಪಡೆಯಾಗಿದೆ. ಭಾರತದಲ್ಲಿ ಉದ್ಯಮಿ ಮುಖೇಶ್ ಅಂಬಾನಿ, ನಟ ಕಾರ್ತಿಕ್ ಆರ್ಯನ್, ನಟ ಜೂನಿಯರ್ ಎನ್​ಟಿಆರ್ ಮತ್ತು ನಟ ರಣವೀರ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಹೊಂದಿದ್ದಾರೆ. ಈ ದುಬಾರಿ ಬೆಲೆಯ ಐಷಾರಾಮಿ ಲ್ಯಾಂಬೊರ್ಗಿನಿ ಉರುಸ್ ಕಾರು ಸೆಲಬ್ರಿಟಿಗಳ ಮೆಚ್ಚಿನ ಆಯ್ಕೆಯಾಗಿದೆ.

Image Courtesy: Eisk007

Most Read Articles

Kannada
English summary
Actor fahad fazil buys new lamborghini urus suv details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X