ವಯಸ್ಸು 61 ಆದ್ರೆ ಏನಂತೆ.. ಹೊಚ್ಚ ಹೊಸ ದುಬಾರಿ ಬೆಲೆಯ BMW ಕಾರು ಖರೀದಿಸಿದ ನಟ ಗೋವಿಂದ!

ಬಾಲಿವುಡ್ ಹಿರಿಯ ನಟ ಗೋವಿಂದ (Govinda) ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವಿದೆ. 61 ಹರೆಯದಲ್ಲೂ ಅವರು ಚಿರಯುವಕರನ್ನು ನಾಚಿಸುವಂತೆ ಇದ್ದಾರೆ. 90ರ ದಶಕದಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿದ್ದ ನಟ ಗೋವಿಂದ, 165 ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕೊನೆಯ ಬಾರಿಗೆ 2019ರಲ್ಲಿ ತೆರೆಕಂಡ 'ರಂಗೀಲಾ ರಾಜಾ' ಚಿತ್ರದಲ್ಲಿಯೂ ಅವರು ಕಾಣಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೆ ರಾಜಕಾರಣದಲ್ಲೂ ನಟ ಗೋವಿಂದ ಫುಲ್ ಆಕ್ಟಿವ್ ಆಗಿದ್ದಾರೆ.

ನಟ ಗೋವಿಂದ ಅವರಿಗೆ ಕಾರುಗಳ ಮೇಲೆಯೂ ವಿಶೇಷವಾದ ಪ್ರೀತಿಯಿದ್ದು, ಹಲವು ಎಸ್‌ಯುವಿಗಳ ಮಾಲೀಕರೂ ಆಗಿದ್ದಾರೆ. ಇತ್ತೀಚೆಗೆ ಅವರು ದುಬಾರಿ ಬೆಲೆಯ ಐಷಾರಾಮಿ ಬಿಎಂಡಬ್ಲ್ಯೂ 5 ಸೀರೀಸ್ 530ಎಲ್ಐ (BMW 5 Series 530Li) ಸೆಡಾನ್‌ನ್ನು ಖರೀದಿ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋ ಹಾಗೂ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿವೆ.

Actor Govinda Buys BMW 5 Series 530Li Car Details

ಬಿಎಂಡಬ್ಲ್ಯೂ 5 ಸೀರೀಸ್ 530ಎಲ್ಐ ವಿಶೇಷತೆಗಳೇನು: ಈ ಕಾರು ರೂ.72.90 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಹಾಗೆಯೇ ವಾರಾಂತ್ಯ & ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 500 ಲೀ. ಸಾಮರ್ಥ್ಯದ ಸ್ಪೇಸ್‌ನ್ನು ಒಳಗೊಂಡಿದೆ.

ನೂತನ ಬಿಎಂಡಬ್ಲ್ಯೂ 5 ಸೀರೀಸ್ 530ಎಲ್ಐ ಸೆಡಾನ್ 1998 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 4500 ಆರ್‌ಪಿಎಂನಲ್ಲಿ 255 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 1600 ಆರ್‌ಪಿಎಂನಲ್ಲಿ 400 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 10.9 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Actor Govinda Buys BMW 5 Series 530Li Car Details

ಈ ಬಿಎಂಡಬ್ಲ್ಯೂ 5 ಸೀರೀಸ್ 530ಎಲ್ಐ ಸೆಡಾನ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಬಹುಮುಖ್ಯವಾಗಿ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಪವರ್ ಅಡ್ಜಸ್ಟಬಲ್ ಎಕ್ಸ್‌ಟೀರಿಯರ್ ರೇರ್ ವ್ಯೂ ಮಿರರ್, ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಪವರ್ ಸ್ಟೀರಿಂಗ್, ಏರ್ ಕಂಡಿಷನರ್ ಹಾಗೂ 8 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ನಟ ಗೋವಿಂದ ಹಲವು ದುಬಾರಿ ಬೆಲೆಯ ಐಷಾರಾಮಿ ಕಾರುಗಳ ಒಡೆಯರು ಆಗಿದ್ದಾರೆ. ಅವರ ಗ್ಯಾರೇಜ್‌ನಲ್ಲಿರುವ ಹ್ಯುಂಡೈ ಕ್ರೆಟಾ ಎಸ್‌ಯುವಿ ಕನಿಷ್ಠ ರೂ.11 ಲಕ್ಷ ಹಾಗೂ ಗರಿಷ್ಠ ರೂ.20.42 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇ ಮತ್ತು ಡುಯಲ್-ಝೋನ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಹ್ಯುಂಡೈ ಕ್ರೆಟಾ ಮಾತ್ರವಲ್ಲದೆ, ನಟ ಗೋವಿಂದ ಟೊಯೋಟಾ ಫಾರ್ಚೂನರ್ ಫುಲ್-ಸೈಜ್ ಎಸ್‌ಯುವಿಯ ಮಾಲೀಕರು ಆಗಿದ್ದಾರೆ. ಈ ಕಾರು ರೂ.33.78 ಲಕ್ಷದಿಂದ ರೂ.51.94 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದ್ದು, 7 ಆಸನಗಳನ್ನು ಹೊಂದಿದೆ. ಜೊತೆಗೆ ಗೋವಿಂದ ಅವರು ಫೋರ್ಡ್ ಎಂಡೀವರ್ (ರೂ.36 ಲಕ್ಷ), ಮರ್ಸಿಡಿಸ್ ಸಿ220ಡಿ (ರೂ.43 ಲಕ್ಷ) ಹಾಗೂ ಮರ್ಸಿಡಿಸ್ ಬೆಂಜ್ (ರೂ.64 ಲಕ್ಷ) ಕಾರುಗಳನ್ನು ಹೊಂದಿದ್ದಾರೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, March 17, 2025, 11:01 [IST]
English summary
Actor govinda busy bmw 5 series 530li car details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+