ಭೂಲೋಕದ ಅರಮನೆಯಂತಿರುವ ಕಾರನ್ನು ಖರೀದಿಸಿದ ನಟಿ ಹೇಮಾ ಮಾಲಿನಿ.. ಸಂಪ್ರದಾಯಬದ್ಧವಾಗಿ ಪೂಜೆ! ಬೆಲೆ ಎಷ್ಟು?
ಹಿರಿಯ ನಟಿ, ಬಿಜೆಪಿ ಸಂಸದೆ, ಬಾಲಿವುಡ್ 'ಕನಸಿನ ಕನ್ಯೆ' ಹೇಮಾ ಮಾಲಿನಿ (Hema Malini), 76ನೇ ವಯಸ್ಸಿನಲ್ಲೂ ಅಪಾರ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಭರತನಾಟ್ಯ ಕಲಾವಿದೆಯೂ ಆಗಿದ್ದು, ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ಕೂಡ ಅಭಿನಯಿಸಿದ್ದಾರೆ. ಅತ್ಯುನ್ನತ ನಾಗರಿಕ ಗೌರವವಾದ 'ಪದ್ಮಶ್ರೀ' ಪ್ರಶಸ್ತಿಗೂ ಭಾಜನರಾಗಿದ್ದಾರೆ. ಉತ್ತರ ಪ್ರದೇಶದ ಮಥುರಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ನಟಿ ಹೇಮಾ ಮಾಲಿನಿ ಅವರು, ಹೊಚ್ಚ ಹೊಸ ಎಂಜಿ ಎಂ9 ಎಲೆಕ್ಟ್ರಿಕ್ ಎಂಪಿವಿ (MG M9 Electric Mpv) ಖರೀದಿ ಮಾಡಿದ್ದಾರೆ. ನೂತನ ಕಾರನ್ನು ಪೂಜಿಸುತ್ತಿರುವ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲೂ ಸಖತ್ ವೈರಲ್ ಆಗಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಎಂಜಿ ಎಂ9 ಎಲೆಕ್ಟ್ರಿಕ್ ಎಂಪಿವಿ ವಿಶೇಷತೆಗಳೇನು:
ಇದು ದುಬಾರಿ ಬೆಲೆಯ ಐಷಾರಾಮಿ ಕಾರಾಗಿದ್ದು, ರೂ.69.90 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ಉತ್ತಮವಾಗಿರುವ ಗ್ರಿಲ್ & ಬಂಪರ್‌ನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಕನೆಕ್ಟ್ಡ್ ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಸ್ಲೈಡಿಂಗ್ ಡೋರ್‌ಗಳನ್ನು ತನ್ನದಾಗಿಸಿಕೊಂಡಿದೆ. ಬ್ಲ್ಯಾಕ್ ರೂಫ್ ವಿತ್ ಪರ್ಲ್ ಲಸ್ಟರ್ ವೈಟ್, ಮೆಟಲ್ ಬ್ಲ್ಯಾಕ್ ಹಾಗೂ ಬ್ಲ್ಯಾಕ್ ರೂಫ್ ವಿತ್ ಕಾಂಕ್ರೀಟ್ ಗ್ರೇ ಎಂಬ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಕಾರು ದೊಡ್ಡ ಗಾತ್ರದಲಿದೆ. 5,270 ಎಂಎಂ ಉದ್ದ, 2,000 ಎಂಎಂ ಅಗಲ ಹಾಗೂ 1,840 ಎಂಎಂ ಎತ್ತರವು ಇದೆ. 3,200 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 2,700 ಕೆಜಿ ತೂಕವಿದೆ. 19-ಇಂಚಿರುವ ಡುಯಲ್-ಟೋನ್ ಅಲಾಯ್ ವೀಲ್‌ಗಳು ಹಾಗೂ 235/55 ಆರ್19 ಅಳತೆಯ ಟೈರ್‌ಗಳನ್ನು ಒಳಗೊಂಡಿದೆ.

ನೂತನ ಎಂಜಿ ಎಂ9 ಎಲೆಕ್ಟ್ರಿಕ್ ಎಂಪಿವಿಯು ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 90 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 548 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 242 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಇಕೋ, ನಾರ್ಮಲ್ ಮತ್ತು ಸ್ಪೋರ್ಟ್ ಎಂಬ ಡ್ರೈವಿಂಗ್ ಮೋಡ್‌ಗಳನ್ನು ಪಡೆದಿದೆ.
ಹೊಸ ಎಂಜಿ ಎಂ9 ಕಾರು 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 10 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 7 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 465 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಫೋನ್ ಚಾರ್ಜರ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಕೀಲೆಸ್ - ಎಂಟ್ರಿ, ಕಪ್ ಹೋಲ್ಡರ್‌ಗಳು, ಸನ್‌ರೂಫ್, ಪ್ರೀಮಿಯಂ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ 64 - ಕಲರ್ ಆಂಬಿಯೆಂಟ್ ಲೈಟಿಂಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಟ ಮಟ್ಟದ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








