BMW ಕಾರಿನಲ್ಲಿ ಬಂದ್ರು.. ಹೊಸ ಟೊಯೊಟಾ ಇನ್ನೋವಾ ಖರೀದಿಸಿದ 40ರ ಹರೆಯದ ಗೂಳಿ ಸಿನಿಮಾ ಹೀರೋಯಿನ್!
ಮಮತಾ ಮೋಹನ್‌ದಾಸ್ (Mamta Mohandas) ಜನಪ್ರಿಯ ನಟಿ ಹಾಗೂ ಹಿನ್ನೆಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಮಲಯಾಳಂ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ತಮಿಳು ಹಾಗೂ ತೆಲುಗು ಚಿತ್ರಗಳಲ್ಲೂ ಬಣ್ಣ ಹಚ್ಚಿದ್ದಾರೆ. ಕನ್ನಡದಲ್ಲಿ ಕಿಚ್ಚ ಸುದೀಪ್ ನಟನೆಯ ಗೊಳಿ ಸಿನಿಮಾದಲ್ಲಿ ಹೀರೋಯಿನ್ ಆಗಿ ಕಾಣಿಸಿಕೊಂಡಿದ್ದರು. ಮಮತಾ ಅವರ ಅಭಿನಯಕ್ಕಾಗಿ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಹಾಗೂ 2 ಫಿಲ್ಮ್‌ಫೇರ್ ಪ್ರಶಸ್ತಿಗಳು ಕೂಡ ಒಲಿದಿವೆ.
ಸದ್ಯ ನಟಿ ಮಮತಾ ಮೋಹನ್‌ದಾಸ್ ಹೊಚ್ಚ ಹೊಸ ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿಯನ್ನು ಖರೀದಿ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಕೊಚ್ಚಿಯ ಟೊಯೊಟಾ ಡೀಲರ್‌ಶಿಪ್ ವಿಡಿಯೋವೊಂದನ್ನು ಇನ್ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿದೆ. ಬಿಎಂಡಬ್ಲ್ಯೂ ಜಡ್4 ಕಾರಿನಲ್ಲಿ ಶೋರೂಂಗೆ ಆಗಮಿಸುವ ಮಮತಾ, ನೂತನ ಇನ್ನೋವಾವನ್ನು ಕುಟುಂಬದೊಂದಿಗೆ ವಿತರಣೆ ಪಡೆದಿದ್ದಾರೆ.

ಟೊಯೊಟಾ ಇನ್ನೋವಾ ಹೈಕ್ರಾಸ್ ವಿಶೇಷತೆಗಳೇನು:
ಇದೊಂದು ಎಂಪಿವಿಯಾಗಿದ್ದು, ಕನಿಷ್ಠ ರೂ.19.94 ಲಕ್ಷ ಹಾಗೂ ಗರಿಷ್ಠ ರೂ.32.58 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಜಿಎಕ್ಸ್, ವಿಎಕ್ಸ್, ಜಿಎಕ್ಸ್(ಒ), ವಿಎಕ್ಸ್(ಒ), ಝಡ್ಎಕ್ಸ್ ಮತ್ತು ಝಡ್ಎಕ್ಸ್ (ಒ) ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಕಾರು ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಸೂಪರ್ ವೈಟ್, ಅಟಿಟ್ಯೂಡ್ ಬ್ಲ್ಯಾಕ್ ಮೈಕಾ, ಪ್ಲಾಟಿನಂ ವೈಟ್ ಪರ್ಲ್ ಮತ್ತು ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಇದು 4755 ಎಂಎಂ ಉದ್ದ, 1845 ಎಂಎಂ ಅಗಲ ಹಾಗೂ 1795 ಎತ್ತರವು ಇದೆ.

ನೂತನ ಇನ್ನೋವಾ ಹೈಕ್ರಾಸ್ ಎಂಪಿವಿ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 2.0-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 2.0-ಲೀ. ಹೈಬ್ರಿಡ್ (ಎಲೆಕ್ಟ್ರಿಕ್ +ಪೆಟ್ರೋಲ್) ಎಂಜಿನ್ ಆಯ್ಕೆಯನ್ನು ಪಡೆದಿದೆ. 23 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 7/ 8 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.
ಈ ಎಂಪಿವಿ 10-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಸನ್‌ರೂಫ್, ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ, ಹಾಗೆಯೇ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು ಹಾಗೂ ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ನಟಿ ಮಮತಾ ಮೋಹನ್‌ದಾಸ್ ಹಲವು ದುಬಾರಿ ಬೆಲೆಯ ಐಷಾರಾಮಿ ಕಾರುಗಳ ಒಡತಿಯೂ ಆಗಿದ್ದಾರೆ. ಅವರ ಗ್ಯಾರೇಜ್‌ನಲ್ಲಿ ಪೋರ್ಷೆ ಟೇಕಾನ್ ಇವಿ (Porsche Taycan EV), ಬಿಎಂಡಬ್ಲ್ಯೂ ಜಡ್4 (BMW Z4) ಹಾಗೂ ಪೋರ್ಷೆ 911 (porsche 911) ಕಾರುಗಳು ಸಹ ಇವೆ.
ಪೋರ್ಷೆ ಟೇಕಾನ್ ಇವಿಯು ರೂ.1.70 ಕೋಟಿಯಿಂದ ರೂ.2.69 ಕೋಟಿ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 93.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 705 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 10.9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಬಿಎಂಡಬ್ಲ್ಯೂ ಜಡ್4 ಕಾರು ರೂ.92.90 ಲಕ್ಷದಿಂದ ರೂ.97.90 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2998 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. ಪೋರ್ಷೆ 911 ಕಾರು ರೂ.2.11 ಕೋಟಿಯಿಂದ ರೂ.4.06 ಕೋಟಿ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2981 ರಿಂದ 3996 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ.


Click it and Unblock the Notifications








