ಖ್ಯಾತ ನಟನಿಗೆ 51ನೇ ಹುಟ್ಟುಹಬ್ಬದ ಸಂಭ್ರಮ: ಪ್ರೀತಿಯ ಮಗನಿಗೆ ತಂದೆಯಿಂದ ರೂ.1.30 ಕೋಟಿಯ BMW ಕಾರು ಗಿಫ್ಟ್
ತಮಿಳಿನ ಖ್ಯಾತ ನಟ ಪ್ರಶಾಂತ್ (Prasanth) ಏಪ್ರಿಲ್ 6 ರಂದು 51ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಟ ಹಾಗೂ ನಿರ್ದೇಶಕರಾಗಿರುವ ಅವರ ತಂದೆ ತ್ಯಾಗರಾಜನ್, ಪುತ್ರನಿಗೆ ಹುಟ್ಟುಹಬ್ಬದ ಹಿನ್ನೆಲೆ ದುಬಾರಿ ಬೆಲೆಯ ಹೊಚ್ಚ ಹೊಸ ಬಿಎಂಡಬ್ಲ್ಯೂ (BMW) ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.
ನಟ ಪ್ರಶಾಂತ್ ತಮಿಳು ಮಾತ್ರವಲ್ಲದೆ ತೆಲುಗು, ಹಿಂದಿ ಹಾಗೂ ಮಲಯಾಳಂ ಚಿತ್ರಗಳಲ್ಲಿಯೂ ನಟಿಸುವ ಮೂಲಕ ದೊಡ್ಡಮಟ್ಟದ ಅಭಿಮಾನಿ ಬಳಗವನ್ನು ಹೊಂದಿದ್ದು, ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಪ್ರಶಾಂತ್ ತಂದೆ ತ್ಯಾಗರಾಜನ್ ನಟ ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದು, ಸ್ಯಾಂಡಲ್‌ವುಡ್‌ಗೂ ಹೆಚ್ಚು ಚಿರಪರಿಚಿತರು. ಅವರು ಕನ್ನಡದ ಅಶೋಕ ಚಕ್ರ, ಸಿಬಿಐ ಶಿವ, ಮರಣ ಮೃದಂಗ, ಪೊಲೀಸ್ ಲಾಕಪ್, ನ್ಯೂ ಡೆಲ್ಲಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಸದ್ಯ ಪುತ್ರ ಪ್ರಶಾಂತ್ ಜನ್ಮದಿನಕ್ಕೆ ತಂದೆ ತ್ಯಾಗರಾಜನ್ ಅವರು, ಹೊಸ ಬಿಎಂಡಬ್ಲ್ಯೂ ಕಾರನ್ನು ಗಿಫ್ಟ್ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ತಂದೆ - ಮಗನ ಬಾಂಧವ್ಯಕ್ಕೆ ನೆಟ್ಟಿಗರು ಕೂಡ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ತ್ಯಾಗರಾಜನ್ ಅವರು ಪ್ರಶಾಂತ್‌ಗೆ ಉಡುಗೊರೆಯಾಗಿ ನೀಡಿರುವ ನೂತನ ಬಿಎಂಡಬ್ಲ್ಯೂ ಎಕ್ಸ್7 ಎಕ್ಸ್‌ಡ್ರೈವ್40ಐ ಎಂಸ್ಪೋರ್ಟ್ (BMW X7 xDrive40i M Sport), ರೂ.1.30 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಈ ಹೊಸ ಬಿಎಂಡಬ್ಲ್ಯೂ ಎಕ್ಸ್7 ಎಕ್ಸ್‌ಡ್ರೈವ್40ಐ ಎಂಸ್ಪೋರ್ಟ್ ಕಾರು, ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, ನೋಡಿದ ತಕ್ಷಣವೇ ಪ್ರತಿಯೊಬ್ಬರನ್ನು ಆಕರ್ಷಿಸುತ್ತದೆ. ಕಾರ್ಬನ್ ಬ್ಲ್ಯಾಕ್ ಮೆಟಾಲಿಕ್, ಮಿನರಲ್ ವೈಟ್ ಮೆಟಾಲಿಕ್, ಟಾಂಜಾನೈಟ್ ಬ್ಲೂ ಮೆಟಾಲಿಕ್ ಸೇರಿದಂತೆ 4 ಬಣ್ಣಗಳ ಆಯ್ಕೆಯೊಂದಿಗೆ ಲಭ್ಯವಿದೆ. ಈ ಕಾರಿನಲ್ಲಿ 6 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ನೂತನ ಕಾರು 2998 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 375.48 ಬಿಹೆಚ್‌ಪಿ ಗರಿಷ್ಠ ಪವರ್ (ಶಕ್ತಿ) ಹಾಗೂ 520 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ಆಟೋಮೆಟಿಕ್ ಗೇರ್ ಬಾಕ್ಸ್ ಹಾಗೂ 4WD (ಫೋರ್ ವೀಲ್ಸ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದ್ದು, 11.29 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.
ಬಿಎಂಡಬ್ಲ್ಯೂ ಎಕ್ಸ್7 ಎಕ್ಸ್‌ಡ್ರೈವ್40ಐ ಎಂಸ್ಪೋರ್ಟ್ ಬೆಲೆಗೆ ತಕ್ಕಂತೆ ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಪವರ್ ಅಡ್ಜಸ್ಟಬಲ್ ಎಕ್ಸ್‌ಟೀರಿಯರ್ ರೇರ್ ವ್ಯೂ ಮಿರರ್, ಟಚ್ ಸ್ಕ್ರೀನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್, ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್, ಅಲಾಯ್ ವೀಲ್ಸ್, ಫ್ರಂಟ್ & ರೇರ್ ಫಾಗ್ ಲೈಟ್ಸ್, ರೇರ್ ಪವರ್ ವಿಂಡೋಸ್ ಅನ್ನು ಹೊಂದಿದೆ.
ಇನ್ನು, ಸಿನಿರಂಗದಲ್ಲಿ ಸಾಕಷ್ಟು ಏಳುಬೀಳುಗಳನ್ನು ಕಂಡಿರುವ ನಟ ಪ್ರಶಾಂತ್ ಅವರು, ಮತ್ತೊಮ್ಮೆ ಬೆಳ್ಳಿತೆರೆಯ ಮೇಲೆ ತಮ್ಮದೇಯಾದ ಛಾಪನ್ನು ದೊಡ್ಡ ಪ್ರಮಾಣದಲ್ಲಿ ಮೂಡಿಸಲಿ ಎಂಬುದು ಅಭಿಮಾನಿಗಳ ಬಯಕೆಯಾಗಿದೆ. ತ್ಯಾಗರಾಜನ್, ತಮ್ಮ ಪುತ್ರ 51ನೇ ವಸಂತಕ್ಕೆ ಕಾಲಿಟ್ಟಿದ್ದರೂ ಅವರ ಮೇಲಿಟ್ಟಿರುವ ಪ್ರೀತಿಯನ್ನು ಮೆಚ್ಚಲೇಬೇಕು. ತಂದೆ - ಮಗನ ನಡುವಿನ ಬಾಂಧವ್ಯ ಹೀಗೆ ಮುಂದುವರಿಯಲಿ ಎಂದು ಆಶಿಸೋಣ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications