ಸದ್ದಿಲ್ಲದೇ ರೋಲ್ಸ್ ರಾಯ್ಸ್ ಎಲೆಕ್ಟ್ರಿಕ್ ಕಾರು ಖರೀದಿಸಿದ್ದಾರೆ ನಟ ರಾಮ್ ಚರಣ್.. ಗುರು ಬೆಲೆ ಎಷ್ಟು ಗೊತ್ತಾ?
ಟಾಲಿವುಡ್ ಖ್ಯಾತ ನಟ ರಾಮ್ ಚರಣ್ (Ram Charan), ಈಚೆಗೆ ಹೊಚ್ಚ ಹೊಸ ರೋಲ್ಸ್ ರಾಯ್ಸ್ ಸ್ಪೆಕ್ಟರ್ (Rolls-Royce Spectre) ಎಲೆಕ್ಟ್ರಿಕ್ ಕಾರನ್ನು ಖರೀದಿಸಿದ್ದಾರೆ. ಇಲ್ಲಿಯವರೆಗೆ ಅವರು ಈ ಕಾರಿನಲ್ಲಿ ಕಾಣಿಸಿಕೊಂಡಿರಲಿಲ್ಲ. ಇಂದು ರಾಮ್ ಚರಣ್, ಪತ್ನಿ ಉಪಾಸನಾ (Upasana) ಹಾಗೂ ಮಗಳು ಕ್ಲಿನ್ ಕಾರಾ (Klin Kaara) ಜೊತೆಯಲ್ಲಿ ನೂತನ ಕಾರಿನಲ್ಲೇ ಹೈದರಾಬಾದ್ನ ಬೇಗಂಪೇಟೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಮುಂಬೈನಲ್ಲಿ ನಾಳೆ (ಜುಲೈ 12) ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಅವರ ವಿವಾಹ ಸಮಾರಂಭ ಅದ್ದೂರಿಯಾಗಿ ನಡೆಯಲಿದೆ. ನಟ ರಾಮ್ ಚರಣ್ ಹಾಗೂ ಉಪಾಸನಾ ದಂಪತಿ ಕೂಡ ಭಾಗವಹಿಸಲಿದ್ದು, ಹೈದರಾಬಾದ್ನಿಂದ ಖಾಸಗಿ ಜೆಟ್‌ನಲ್ಲಿ ತೆರಳಿದ್ದಾರೆ. ಸದ್ಯ ನಿರ್ದೇಶಕ ಶಂಕರ್ ಆಕ್ಷನ್ ಕಟ್ ಹೇಳುತ್ತಿರುವ 'ಗೇಮ್ ಚೇಂಜರ್' ಚಿತ್ರದಲ್ಲಿ ರಾಮ್ ಚರಣ್ ನಟಿಸಿದ್ದು, ಶೂಟಿಂಗ್ ಮುಗಿದಿದೆ.

ನಟ ರಾಮ್ ಚರಣ್ ಮಾಲೀಕರಾಗಿರುವ ಕಪ್ಪು (Black) ಬಣ್ಣದ 'ರೋಲ್ಸ್ ರಾಯ್ಸ್ ಸ್ಪೆಕ್ಟರ್' ಎಲೆಕ್ಟ್ರಿಕ್ ಕಾರು ರೂ.7.50 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 102 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 530 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.
ಈ ರೋಲ್ಸ್ ರಾಯ್ಸ್ ಸ್ಪೆಕ್ಟರ್ ಕಾರಿನಲ್ಲಿ ಡುಯಲ್ ಎಲೆಕ್ಟ್ರಿಕ್ ಮೋಟಾರ್ ಬಳಕೆ ಮಾಡಲಾಗಿದ್ದು, 585 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 900 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಕೇವಲ 4.5 ಸೆಕೆಂಡುಗಳಲ್ಲಿ 0-100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಇದರ ಬ್ಯಾಟರಿ ಪ್ಯಾಕ್ 195 ಕೆಡಬ್ಲ್ಯೂ ಡಿಸಿ ಚಾರ್ಜರ್ ಬಳಕೆಯಲ್ಲಿ 10-80% ಚಾರ್ಜ್ ಆಗಲು 34 ನಿಮಿಷ ತೆಗೆದುಕೊಳ್ಳುತ್ತದೆ.

ನೂತನ ಎಲೆಕ್ಟ್ರಿಕ್ ಕಾರು ಮಲ್ಟಿ ಡಿಜಿಟಲ್ ಸ್ಕ್ರೀನ್, ಒನ್-ಟ್ಯಾಪ್ ಡೋರ್ ಓಪನ್ ಫಂಕ್ಷನ್, ವೆಂಟಿಲೇಟೆಡ್ - ಹೀಟೆಡ್ & ಮಸಾಜ್ ಸೀಟ್‌ಗಳು, ಮಲ್ಟಿ ಜೋನ್ ಕ್ಲೇಮೇಟ್ ಕಂಟ್ರೋಲ್, ಕನೆಕ್ಟ್ದ್ ಕಾರ್ ಟೆಕ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 4 ಜನರು ಆರಾಮದಾಯಕವಾಗಿ ಪ್ರಯಾಣಿಸಬಹುದಾಗಿದ್ದು, ಹೆಚ್ಚಿನ ಲಗೇಜ್ ಸಾಗಿಲು 380 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಹಿಂದೆ ನಟ ರಾಮ್ ಚರಣ್ ತಮ್ಮ ತಂದೆ ಟಾಲಿವುಡ್ ಸೂಪರ್ ಸ್ಟಾರ್ ಚಿರಂಜೀವಿ ಅವರಿಗೆ ರೋಲ್ಸ್ ರಾಯ್ಸ್ ಫ್ಯಾಂಟಮ್ (Rolls-Royce Phantom) ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಪ್ರಸ್ತುತ ನೂತನ ಫ್ಯಾಂಟಮ್ ರೂ.8.99 ದಿಂದ ರೂ.10.48 ಕೋಟಿ ಎಕ್ಸ್ ಶೋರೂಂ ದರವನ್ನು ಪಡೆದಿದೆ. 6.75-ಲೀಟರ್ ಟ್ವಿನ್-ಟರ್ಬೊ ವಿ12 ಪೆಟ್ರೋಲ್ ಹೊಂದಿದ್ದು, 570 ಪಿಎಸ್ ಶಕ್ತಿ ಮತ್ತು 900 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಹೊಸ ರೋಲ್ಸ್ ರಾಯ್ಸ್ ಫ್ಯಾಂಟಮ್ ಕಾರಿನಲ್ಲಿ 5 ಮಂದಿ ಸುಲಭವಾಗಿ ಸುಲಭವಾಗಿ ಓಡಾಟವನ್ನು ನಡೆಸಬಹುದು. ದೊಡ್ಡದಾದ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಫ್ರಂಟ್ ವೆಂಟಿಲೇಟೆಡ್ ಸೀಟ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 494 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications