ಎಂ ಎಸ್‌ ಧೋನಿ ಜೊತೆ ಸೂಪರ್‌ಸ್ಟಾರ್: ಲ್ಯಾಂಡ್ ರೋವರ್‌ನಲ್ಲಿ ಮಿಂಚಿದ ಮೆಗಾ ಪವರ್‌ಸ್ಟಾರ್

ಟೀಂ ಇಂಡಿಯಾ ಮಾಜಿ ನಾಯಕ, ಕ್ಯಾಪ್ಟನ್‌ ಕೂಲ್‌ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ಹಾಗೂ ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಪುತ್ರ, ಸೂಪರ್‌ಸ್ಟಾರ್ ರಾಮ್ ಚರಣ್ (Ram Charan) ಭೇಟಿಯಾಗಿದ್ದಾರೆ. ಇವರಿಬ್ಬರು ಒಟ್ಟಿಗೆ ಇರುವ ಫೋಟೋಗಳು ಈಗ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಲ್ಯಾಂಡ್ ರೋವರ್ ಡಿಫೆಂಡರ್ ಭಾರತದಲ್ಲಿ ಹೆಚ್ಚು ಜನಪ್ರಿಯ ಎಸ್‍ಯುವಿಯಾಗಿದೆ.

ಸದ್ಯ, ಎಂ ಎಸ್ ಧೋನಿ ಮತ್ತು ರಾಮ್ ಚರಣ್ ಒಟ್ಟಿಗೆ ಕಾಣಿಸಿಕೊಂಡಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ. ರಾಮ್ ಚರಣ್ ಕೂಡ ಜಾಹೀರಾತು ಶೂಟಿಂಗ್‌ಗಾಗಿಯೇ ಮುಂಬೈಗೆ ಹೋಗಿದ್ದಾರೆ ಎನ್ನಲಾಗುತ್ತಿದೆ. 3 ವರ್ಷಗಳ ಹಿಂದೆ ಇಬ್ಬರು ಒಂದು ಕೂಲ್‌ಡ್ರಿಂಕ್ಸ್ ಜಾಹೀರಾತಿನಲ್ಲಿ ನಟಿಸಿದ್ದರು. ಈ ವೇಳೆ ರಾಮ್ ಚರಣ್ ಅವರ ಮಹಾರಾಷ್ಟ್ರ-ನೋಂದಾಯಿತ ಲ್ಯಾಂಡ್ ರೋವರ್ ಡಿಫೆಂಡರ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

Actor Ram Charan

ಅನೇಕ ಭಾರತೀಯ ಮತ್ತು ವಿದೇಶಿ ಮಾಲೀಕರು ಈ ಎಸ್‍ಯುವಿಯನ್ನು ಆಫ್-ರೋಡ್ ಹೋಗಲು ಬಳಸುತ್ತಾರೆ. ಆರಂಭಿಕ ಮಾರಾಟದ ನಂತರ, ಬ್ರಿಟಿಷ್ ಐಷಾರಾಮಿ ಕಾರು ತಯಾರಕರು ಈ ವರ್ಷದ ಆರಂಭದಲ್ಲಿ ಮಾದರಿಗೆ ಹೊಸ ಎಂಜಿನ್ ಆಯ್ಕೆಗಳನ್ನು ಸೇರಿಸಿದ್ದಾರೆ. ಲ್ಯಾಂಡ್ ರೋವರ್ ಡಿಫೆಂಡರ್ 110 ಐದು ಡೋರುಗಳು ಮತ್ತು 5+2 ಸೀಟ್ ಆಯ್ಕೆ ಅನ್ನು ನೀಡುತ್ತದೆ. ಮೊದಲ ನೋಟದಲ್ಲಿಯೇ ಡಿಫೆಂಡರ್ 110 ಎಸ್‌ಯುವಿಯು ತನ್ನ ಗಾತ್ರದಿಂದ ಗಮನ ಸೆಳೆಯುತ್ತದೆ.

ಈ ಎಸ್‌ಯುವಿಯಲ್ಲಿರುವ ಕಪ್ಪು ಬಣ್ಣದ ಬ್ಯಾಡ್ಜ್‌ಗಳನ್ನು ಹೊಂದಿರುವ ಪ್ಯಾಂಗಿಯಾ ಗ್ರೀನ್ ಬಣ್ಣವು ಆಕರ್ಷಕವಾಗಿ ಕಾಣುತ್ತದೆ. ಈ ಎಸ್‌ಯುವಿಯ ಮುಂಭಾಗದಲ್ಲಿ ಡಿಆರ್‌ಎಲ್‌ ಹೊಂದಿರುವ ಎಲ್‌ಇಡಿ ಹೆಡ್‌ಲೈಟ್ ಯುನಿಟ್ ಅಳವಡಿಸಲಾಗಿದೆ. ಟಾಪ್ ಎಂಡ್ ಮಾದರಿಯಲ್ಲಿ ಎಲ್ಇಡಿ ಮ್ಯಾಟ್ರಿಕ್ಸ್ ಹೆಡ್ ಲೈಟ್ ಯುನಿಟ್ ನೀಡಲಾಗುತ್ತದೆ. ಬಂಪರ್ ಕೆಳಭಾಗದಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಫಾಗ್ ಲ್ಯಾಂಪ್'ಗಳನ್ನು ನೀಡಲಾಗಿದೆ.

Actor Ram Charan

ಡಿಫೆಂಡರ್ ಎಸ್‌ಯುವಿಯಲ್ಲಿ ದೊಡ್ಡ ಬಂಪರ್ ನೀಡಲಾಗಿದೆ.ಬಾನೆಟ್‌ನಲ್ಲಿರುವ ರೇಖೆಗಳು ಹಾಗೂ ಕ್ರೀಸ್‌ಗಳು ಈ ಎಸ್‌ಯುವಿಗೆ ಹೆಚ್ಚು ಸ್ಟಾನ್ಸ್ ನೀಡುತ್ತವೆ. ಬಾನೆಟ್‌ನ ಮಧ್ಯಭಾಗದಲ್ಲಿ ಕಪ್ಪು ಬಣ್ಣದ ದಪ್ಪವಾಗಿರುವ ಡಿಫೆಂಡರ್ ಬ್ಯಾಡ್ಜ್ ಅಳವಡಿಸಲಾಗಿದೆ. ಈ ಎಸ್‌ಯುವಿಯಲ್ಲಿ 20 ಇಂಚಿನ ಅಲಾಯ್ ವ್ಹೀಲ್ ನೀಡಲಾಗಿದೆ. ಲೋ ಎಂಡ್ ಮಾದರಿಯಲ್ಲಿ 19 ಇಂಚಿನ ವ್ಹೀಲ್'ಗಳನ್ನು ನೀಡಲಾಗುತ್ತದೆ. ಡಿಫೆಂಡರ್‌ ಎಸ್‌ಯುವಿಯ ಹೊರಭಾಗದಲ್ಲಿ ಒಟ್ಟು ಆರು ಕ್ಯಾಮೆರಾ ಹಾಗೂ ಸುತ್ತಲೂ ಸೆನ್ಸಾರ್'ಗಳಿವೆ.

ಈ ಕ್ಯಾಮರಾ 360 ಡಿಗ್ರಿ ನೋಟವನ್ನು ಹೊಂದಿದ್ದು, ಆಫ್ ರೋಡಿಂಗ್'ನಲ್ಲಿ ನೆರವಿಗೆ ಬರುತ್ತದೆ. ಐಆರ್‌ವಿ‌ಎಂ ಹಿಂದೆ ಇರುವ ಕ್ಯಾಮೆರಾ ಆಕ್ಟಿವ್ ಲೇನ್ ಅಸಿಸ್ಟ್ ಹಾಗೂ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಆಗಿ ಕಾರ್ಯನಿರ್ವಹಿಸುತ್ತದೆ. ಮತ್ತೊಂದೆಡೆ, ಐಆರ್‌ವಿ‌ಎಂನಲ್ಲಿ ವೀಡಿಯೊ ಪ್ರದರ್ಶಿಸುವ ಶಾರ್ಕ್-ಫಿನ್ ಆಂಟೆನಾದಲ್ಲಿ ಕ್ಯಾಮೆರಾ ನೀಡಲಾಗಿದೆ. ಡಿಫೆಂಡರ್ ಎಸ್‌ಯುವಿಯು ಏರ್ ಸಸ್ಪೆಂಷನ್ ಹೊಂದಿರುವುದರಿಂದ ಆಫ್-ರೋಡ್ ಮೋಡ್‌ನಲ್ಲಿ ಎತ್ತರವನ್ನು 291 ಎಂಎಂಗಳವರೆಗೆ ಹೆಚ್ಚಿಸಬಹುದು.

ಈ ಎಸ್‌ಯುವಿಯ ಹಿಂಭಾಗದಲ್ಲಿ ಟೇಲ್‌ಲೈಟ್‌ಗಳಿಗಾಗಿ ಹೊಸ ವಿನ್ಯಾಸವನ್ನು ನೀಡಲಾಗಿದೆ. ಈ ಎಸ್‌ಯುವಿಯಲ್ಲಿ ಕ್ರೂಸ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, 3 ಡಿ ಮೆರಿಡಿಯನ್ ಸರೌಂಡ್ ಸೌಂಡ್ ಸಿಸ್ಟಂ, ಆ ಸ್ಟ್ರೀಮ್ ಕ್ರಾಸಿಂಗ್‌ಗಳಿಗಾಗಿ ವೇಡ್ ಸೆನ್ಸಿಂಗ್, ಡ್ರೈವರ್ ಕಂಡಿಷನ್ ಮಾನಿಟರಿಂಗ್, ಏರ್‌ಬ್ಯಾಗ್, ಎಬಿಎಸ್, ಟ್ರಾಕ್ಷನ್ ಕಂಟ್ರೋಲ್ ಸೇರಿದಂತೆ ಹಲವಾರು ಫೀಚರ್'ಗಳನ್ನು ನೀಡಲಾಗಿದೆ. ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿಯಲ್ಲಿ 2.0 ಲೀಟರ್, ನಾಲ್ಕು ಸಿಲಿಂಡರ್, ಟರ್ಬೊ-ಪೆಟ್ರೋಲ್ ಪಿ 300 ಎಂಜಿನ್ ಅಳವಡಿಸಲಾಗಿದೆ.

ಈ ಎಂಜಿನ್ ಸುಮಾರು 300 ಬಿ‌ಹೆಚ್‌ಪಿ ಪವರ್ ಹಾಗೂ 400 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು 3.0 ಲೀಟರ್ ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ 4000 ಆರ್‌ಪಿಎಂನಲ್ಲಿ 298 ಬಿಹೆಚ್‌ಪಿ ಪವರ್ ಹಾಗೂ 1500 - 2500 ಆರ್‌ಪಿಎಂ ನಡುವೆ 650 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್'ನೊಂದಿಗೆ ಎಂಟು ಸ್ಪೀಡಿನ ಆಟೋಮ್ಯಾಟಿಕ್ ಟ್ರಾನ್ಸ್'ಮಿಷನ್ ಯುನಿಟ್ ಜೋಡಿಸಲಾಗಿದೆ

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, October 9, 2023, 18:24 [IST]
English summary
Actor ram charan spotted in his land rover defender at mumbai details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+