ಸೆಕೆಂಡ್ ಹ್ಯಾಂಡ್ ಆಡಿ ಕ್ಯೂ7 ಕಾರು ಖರೀದಿಸಿದ ಜನಪ್ರಿಯ ನಟ
ಕಾರು ಕ್ರೇಜ್ ಅನ್ನೋದು ಯಾರಿಗೆ ಇರಲ್ಲ ಹೇಳಿ, ಅದರಲ್ಲಿಯು ಸಿನಿಮಾ ರಂಗದ ಸೆಲಬ್ರಿಟಿಗಳಿಗೆ ಈ ಕ್ರೇಜ್ ಸ್ವಲ್ಪ ಹೆಚ್ಚೆ ಇರುತ್ತೆ. ಸಿನಿಮಾ ನಟಿಯರು ತಾವು ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಓಡಾಡಲು ಇಷ್ಟ ಪಡುತ್ತಾರೆ. ಇದರಿಂದ ಮಾರುಕಟ್ಟೆಗೆ ಲಗ್ಗೆ ಇಟ್ಟ ಐಷಾರಾಮಿ ಕಾರುಗಳನ್ನು ಖರೀದಿಸುವುದು ಸಿನಿಮಾ ಸೆಲಬ್ರಿಟಿಗಳಿಗೆ ಒಂದು ಟ್ರೆಂಡ್ ಆಗಿದೆ.

ಇದರ ನಡುವೆ ನಟ ರಾಕೇಶ್ ಬಾಪಟ್ ಅವರು ಸೆಕೆಂಡ್ ಹ್ಯಾಂಡ್ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ನಟ ರಾಕೇಶ್ ಬಾಪಟ್ ಅವರು ಹಲವಾರು ಹಿಂದಿ ಧಾರಾವಾಹಿಗಳು ಮತ್ತು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಈ ನಟ ಆಡಿ ಕ್ಯೂ7 ಎಸ್‍ಯುವಿ ವಿತರಣೆಯನ್ನು ಪಡೆದುಕೊಳ್ಳುವ ಚಿತ್ರಗಳನ್ನು ಡೆಕ್ಕನ್‌ವೀಲ್ಸ್ ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ಹಂಚಿಕೊಂಡಿದ್ದಾರೆ. ನಟ ಖರೀದಿಸಿದ ಆಡಿ ಕ್ಯೂ7 ಹಿಂದಿನ ತಲೆಮಾರಿನ ಮಾದರಿಯಾಗಿದೆ, ಇದು ಒಂದು ದೊಡ್ಡ ಎಸ್‍ಯುವಿ ಮತ್ತು ಹಲವಾರು ಐಷಾರಾಮಿ ವೈಶಿಷ್ಟ್ಯಗಳೊಂದಿಗೆ ಬರುತ್ತದೆ.

ನಟ ರಾಕೇಶ್ ಬಾಪಟ್ ಅವರು ಬಿಗ್ ಬಾಸ್ ಶೋನಲ್ಲಿ ಕೂಡ ಭಾಗವಹಿಸಿದ್ದರು. ಬಿಗ್ ಬಾಸ್ ಮನೆಯಲ್ಲಿ ಹಲವು ಪ್ರೇಮ ಕಹಾನಿಗಳು ಹುಟ್ಟಿಕೊಂಡಿವೆ. ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರದಲ್ಲಿ ಇವರಲ್ಲಿ ಕೆಲವರು ಮದುವೆ ಆಗಿದ್ದಾರೆ. ಅದೇ ರೀತಿ ಬಿಗ್ ಬಾಸ್ ಮನೆಯಲ್ಲಿ ಶಮಿತಾ ಹಾಗೂ ರಾಕೇಶ್ ಬಾಪಟ್ ಪ್ರೀತಿ ವಿಚಾರಕ್ಕೆ ಹೆಚ್ಚು ಸುದ್ದಿಯಾಗಿದ್ದರು. ಇಬ್ಬರೂ ಶೀಘ್ರವೇ ಮದುವೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ,

ಆಡಿ ಕ್ಯೂ7 ಎಸ್‍ಯುವಿಯನ್ನು ಅನೇಕ ಬಾಲಿವುಡ್ ನಟರು ಮತ್ತು ನಟಿಯರು ಹೊಂದಿದ್ದಾರೆ. ಆಡಿ ಭಾರತೀಯ ಮಾರುಕಟ್ಟೆಯಿಂದ ಕ್ಯೂ7 ಅನ್ನು ಸ್ಥಗಿತಗೊಳಿಸಿದೆ ಮತ್ತು ಎರಡು ವರ್ಷಗಳ ಅಂತರದ ನಂತರ, ಅವರು ಇತ್ತೀಚೆಗೆ ಪ್ರಸ್ತುತ ತಲೆಮಾರಿನ 2022ರ ಆವೃತ್ತಿಯನ್ನು ಈಗಾಗಲೇ ಬಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿದೆ

ಖ್ಯಾತ ಬಾಲಿವುಡ್ ಸುನೀಲ್ ಶೆಟ್ಟಿ ಅವರ ಪುತ್ರಿ ನಟಿ ಅಥಿಯಾ ಶೆಟ್ಟಿ ಅವರು ಇತ್ತೀಚೆಗೆ 2022ರ ಹೊಸ ಆಡಿ ಕ್ಯೂ7 ಅನ್ನು ಖರೀದಿಸಿದ್ದಾರೆ. ರಾಕೇಶ್ ಖರೀದಿಸಿದ ಆಡಿ ಕ್ಯೂ7 ಎಸ್‍ಯುವಿಯು ಹಿಂದಿನ ತಲೆಮಾರಿನ ಮಾದರಿಯಾಗಿದೆ. 2022ರ ಮಾದರಿಯು ಹಲವಾರು ಹೊಸ ನವೀಕರಣಗಳನ್ನು ಪಡೆದುಕೊಂಡಿದೆ.

ಇತ್ತೀಚೆಗೆ ಬಿಡುಗಡೆಗೊಂಡ 2022ರ ಆಡಿ ಕ್ಯೂ7 ಎಸ್‍ಯುವಿ ಬಗ್ಗೆ ಹೇಳುವುದಾದರೆ, ಈ ಮಾದರಿಯು ಪ್ರೀಮಿಯಂ ಪ್ಲಸ್ ಮತ್ತು ಟೆಕ್ನಾಲಜಿ ಸೇರಿದಂತೆ ಎರಡು ರೂಪಾಂತರಗಳಲ್ಲಿ ನೀಡಲಾಗುತ್ತದೆ. ಇದು ಸಂಪೂರ್ಣವಾಗಿ ನಾಕ್ಡ್ ಡೌನ್ (CKD) ಯುನಿಟ್ ಆಗಿ ಭಾರತಕ್ಕೆ ಬರುತ್ತಿದೆ ಮತ್ತು ಇದನ್ನು ಔರಂಗಾಬಾದ್‌ನಲ್ಲಿರುವ ಸ್ಕೋಡಾ ಆಟೋ ಫೋಕ್ಸ್‌ವ್ಯಾಗನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ (SAVWIPL) ಸ್ಥಾವರದಲ್ಲಿ ತಯಾರಿಸಲಾಗುತ್ತಿದೆ.

ಈ ಎಸ್‍ಯುವಿಯ ಎರಡು ರೂಪಾಂತರಗಳಲ್ಲಿ ಅತ್ಯಾಧುನಿಕ ಫೀಚರ್ಸ್ ಮತ್ತು ತಂತ್ರಜ್ಙಾನಗಳನ್ನು ಒಳಗೊಂಡಿರುತ್ತದೆ. ನವೀಕರಿಸಿದ ಈ ಹೊಸ ಆಡಿ ಎಸ್‍ಯುವಿಯಲ್ಲಿ 3.0-ಲೀಟರ್, ಟ್ವಿನ್-ಟರ್ಬೋಚಾರ್ಜ್ಡ್, ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 335 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ನೊಂದಿಗೆ 8-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಹೊಸ ಕ್ಯೂ5 ನಂತೆ ಕ್ಯೂ7 ಕೂಡ ಮೈಲ್ಡ್ -ಹೈಬ್ರಿಡ್ ಸಿಸ್ಟಂ ಅನ್ನು ಪಡೆಯುತ್ತದೆ, ಇದು 48-ವೋಲ್ಟ್ ಎಲೆಕ್ಟ್ರಿಕ್ ಮೋಟಾರು, ಲಿಥಿಯಂ-ಐಯಾನ್ ಬ್ಯಾಟರಿ ಮತ್ತು ಬೆಲ್ಟ್ ಆಲ್ಟರ್ನೇಟರ್ ಸ್ಟಾರ್ಟರ್ (BAS) ಅನ್ನು ಒಳಗೊಂಡಿರುತ್ತದೆ. ಇನ್ನು ಈ ಹೊಸ ಆಡಿ ಕ್ಯೂ7 ಫೇಸ್‌ಲಿಫ್ಟ್ ಎಸ್‍ಯುವಿಯು 250 ಕಿಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ,

ಬ್ರ್ಯಾಂಡ್‌ನ ಕ್ವಾಟ್ರೊ ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಸಹ ಈ ಎಸ್‍ಯುವಿಯಲ್ಲಿ ನೀಡಲಾಗಿದೆ. ಇನ್ನು ಈ ಹೊಸ ಆಡಿ ಕ್ಯೂ7 ಫೇಸ್‌ಲಿಫ್ಟ್‌ನ ಎಂಟ್ರಿ ಲೆವೆಲ್ ಪ್ರೀಮಿಯಂ ಪ್ಲಸ್ ರೂಪಾಂತರವು 19-ಇಂಚಿನ ಅಲಾಯ್ ವ್ಹೀಲ್ ಗಳು, ಎಂಟು ಏರ್‌ಬ್ಯಾಗ್‌ಗಳು, ಪನರೋಮಿಕ್ ಸನ್‌ರೂಫ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಅಡಾಪ್ಟಿವ್ ಏರ್ ಸಸ್ಪೆಂಕ್ಷನ್, ಆಂಬಿಯೆಂಟ್ ಲೈಟಿಂಗ್ ಮತ್ತು ಎಲೆಕ್ಟ್ರಿಕಲಿ-ಹೊಂದಾಣಿಕೆ ಸ್ಟೀರಿಂಗ್ ವ್ಹೀಲ್ ಹೊಂದಿದೆ,

ಇದರೊಂದಿಗೆ ನಾಲ್ಕು- ಮುಂಭಾಗದ ಸೀಟುಗಳಿಗೆ ಲಂಬೂರ್ ಸಂಪೂರ್ಟ್, ಪಾರ್ಕಿಂಗ್ ಅಸಿಸ್ಟ್ ಜೊತೆಗೆ ಕ್ರೂಸ್ ಕಂಟ್ರೋಲ್, ಫ್ಹೋರ್ ಜೋನ್ ಕಂಟ್ರೋಲ್, ಪವರ್-ಹೊಂದಾಣಿಕೆ ಮುಂಭಾಗದ ಸೀಟುಗಳು ಮತ್ತು ಡ್ರೈವರ್ ಸೀಟ್‌ಗಾಗಿ ಮೆಮೊರಿ ಫಂಕ್ಷನ್, ವರ್ಚುವಲ್ ಕಾಕ್‌ಪಿಟ್ ಮತ್ತು ಲೇನ್ ಡಿಪರ್ಚರ್ ಎಕ್ಸಿಟ್ ಅನ್ನು ಹೊಂದಿದೆ. ಇನ್ನು ಡ್ಯುಯಲ್-ಸ್ಕ್ರೀನ್ ಎಂಎಂಐ ಪ್ಲಸ್, ಆಡಿ ಡ್ರೈವ್ ಆಯ್ಕೆ, ಆಡಿ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜಿಂಗ್‌ನೊಂದಿಗೆ ಆಡಿ ಫೋನ್ ಬಾಕ್ಸ್ ಮತ್ತು ಆಡಿ ಸ್ಮಾರ್ಟ್‌ಫೋನ್ ಇಂಟರ್ಫೇಸ್ ಅನ್ನು ಕೂಡ ಹೊಂದಿದೆ.

ಇದರ ಜೊತೆಗೆ, ಆಡಿ ಕ್ಯೂ7 ಫೇಸ್‌ಲಿಫ್ಟ್ ಟೆಕ್ನಾಲಜಿ ರೂಪಾಂತರವು ಅಡಾಪ್ಟಿವ್ ವಿಂಡ್‌ಶೀಲ್ಡ್ ವೈಪರ್‌ಗಳನ್ನು ಪಡೆಯುತ್ತದೆ, ಸೆನ್ಸರ್-ಕಂಟ್ರೋಲ್ಡ್ ಲಗೇಜ್ ಕಂಪಾರ್ಟ್‌ಮೆಂಟ್ ರೀಲಿಸ್ ಕಂಫರ್ಟ್ ಕೀ, ಹಿಂಭಾಗದಲ್ಲಿ ಚಾರ್ಜಿಂಗ್ ಫಂಕ್ಷನ್ ನೊಂದಿಗೆ USB ಪೋರ್ಟ್‌ಗಳು, ಆಡಿ ಪಾರ್ಕ್ ಅಸಿಸ್ಟ್ ಜೊತೆಗೆ 3D ಸರೌಂಡ್ ಕ್ಯಾಮೆರಾಗಳು, 730W ಬ್ಯಾಂಗ್ ಮತ್ತು ಒಲುಫ್‌ಸೆನ್ ಮೂಲದ ಸರೌಂಡ್ ಸೌಂಡ್ ಸಿಸ್ಟಮ್, ಮತ್ತು ಮ್ಯಾಟ್ರಿಕ್ಸ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಅನ್ನು ಒಳಗೊಂಡಿದೆ.

ಇನ್ನು ಈ ಎಸ್‍ಯುವಿಯ ಹಿಂದಿನ ಮಾದರಿಗೆ ಹೋಲಿಸಿದರೆ ಹೊಸ ಮಾದರಿಯು 11 ಎಂಎಂ ಹೆಚ್ಚುವರಿ ಸ್ಥಳಾವಕಾಶದೊಂದಿಗೆ 5063 ಎಂಎಂ ಉದ್ದ ಹೊಂದಿದೆ. ಇದು 1970 ಎಂಎಂ ಅಗಲ ಮತ್ತು 1741 ಎಂಎಂ ಎತ್ತರವನ್ನು ಹೊಂದಿದೆ. ಕ್ಯಾಬಿನ್ ಒಳಗೂ ಆಡಿ ಕಂಪನಿಯು ಸಮಗ್ರವಾಗಿ ನವೀಕರಣಗಳನ್ನು ಪರಿಚಯಿಸಿದೆ. ಇದು ಪಿಯಾನೋ ಬ್ಲಾಕ್, ಕ್ರೋಮ್ ಮತ್ತು ಬ್ರಷ್ಡ್ ಅಲ್ಯೂಮಿನಿಯಂ ಹೈಲೈಟ್‌ಗಳ ಜೊತೆಗೆ ಸಾಕಷ್ಟು ಸುಧಾರಿತವಾಗಿದೆ.

ಈ ಹೊಸ ಕ್ಯೂ7 ಎಸ್‍ಯುವಿಯನ್ನು ಕೇವಲ 5.9 ಸೆಕೆಂಡ್‌ಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆಯುತ್ತದೆ, ಈ ಹೊಸ ಆಡಿ ಕ್ಯೂ7 ಫೇಸ್‌ಲಿಫ್ಟ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಎಂಡಬ್ಕ್ಯು ಎಕ್ಸ್5, ಮರ್ಸಿಡಿಸ್ ಬೆಂಝ್ ಜಿಎಲ್ಇ, ವೊಲ್ವೊ ಎಕ್ಸ್‌ಸಿ90 ಮತ್ತು ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications