ದುಬಾರಿ ಬೆಲೆಯ ಟೊಯೊಟಾ ಕಾರು ಖರೀದಿಸಿದ ಮಾದಕ ನಟಿ.. ಸಾಂಪ್ರದಾಯಿಕ ಉಡುಗೆಯಲ್ಲಿ ವಿತರಣೆ ಪಡೆದ್ರು!
ಕೇರಳ ಮೂಲದ ರಶ್ಮಿ ಆರ್ ನಾಯರ್ (Resmi R Nair), ನಟಿ ಹಾಗೂ ರೂಪದರ್ಶಿಯಾಗಿ ಗುರುತಿಸಿಕೊಂಡಿದ್ದಾರೆ. ಮಾದಕ ರೂಪದರ್ಶಿಯಾಗಿರುವ ರಶ್ಮಿ ನಾಯರ್ ಇನ್ಸ್ಟಾಗ್ರಾಮ್ & ಫೇಸ್‌ಬುಕ್‌ನಲ್ಲಿ ಫುಲ್ ಆಕ್ಟಿವ್ ಇರುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ಈಕೆಯ ಬೋಲ್ಡ್ ಫೋಟೋ ಹಾಗೂ ವಿಡಿಯೋಗಳು ಒಮ್ಮೆಯಾದರೂ ಪಡ್ಡೆಗಳ ಕಣ್ಣಿಗೆ ಬಿದ್ದಿರದೆ ಇರುವುದಿಲ್ಲ.. ನಟಿಯೂ ಆಗಿರುವ ರಶ್ಮಿ ನಾಯರ್ ಕಿರುಚಿತ್ರದಲ್ಲಿ ಕೂಡ ಅಭಿನಯಿಸಿದ್ದಾರೆ. ಕಳೆದ ವರ್ಷ ದುಬಾರಿಯ ಬೆಲೆ ಐಷಾರಾಮಿ ಬಿಎಂಡಬ್ಲ್ಯೂ 3-ಸೀರೀಸ್ ಕಾರನ್ನು ಕೊಂಡುಕೊಳ್ಳುವ ಮೂಲಕ ದೊಡ್ಡಮಟ್ಟದಲ್ಲಿ ಸುದ್ದಿಯಾಗಿದ್ದರು.
ಸದ್ಯ, ರಶ್ಮಿ ನಾಯರ್ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದು, ಹೊಚ್ಚ ಹೊಸ ಟೊಯೊಟಾ ಹಿಲಕ್ಸ್ (Toyota Hilux) ಪಿಕ್ಅಪ್ ಟ್ರಕ್‌ನ್ನು ಖರೀದಿ ಮಾಡಿದ್ದಾರೆ. ನೂತನ ಕಾರನ್ನು ಪತಿಯೊಂದಿಗೆ ವಿತರಣೆ ಪಡೆಯುತ್ತಿರುವ ಫೋಟೋಗಳನ್ನು ರಶ್ಮಿ ನಾಯರ್, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ವಿಶೇಷವೆಂದರೆ ರಶ್ಮಿ ನಾಯರ್ ಸಾಂಪ್ರದಾಯಿಕ ಶೈಲಿಯಲ್ಲಿ ಸೀರೆಯುಟ್ಟು, ಹೊಸ ಟೊಯೊಟಾ ಹಿಲಕ್ಸ್ ಪಿಕ್ಅಪ್ ಟ್ರಕ್‌ನ್ನು ಡೆಲಿವರಿ ತೆಗೆದುಕೊಂಡಿರುವುದನ್ನು ಫೋಟೋಗಳಲ್ಲಿ ನೋಡಬಹುದು. ಈ ಹಿಲಕ್ಸ್ ಕಾರು ದುಬಾರಿ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ರೂ.30.40 ಲಕ್ಷದಿಂದ ರೂ.37.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಈ ಟೊಯೊಟಾ ಹಿಲಕ್ಸ್ ಪಿಕ್ಅಪ್ ಟ್ರಕ್ ಸ್ಟ್ಯಾಂಡರ್ಡ್ (Standard) ಮತ್ತು ಹೈ (High) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಸೂಪರ್ ವೈಟ್, ಸಿಲ್ವರ್ ಮೆಟಾಲಿಕ್ ಮತ್ತು ಗ್ರೇ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೆ ದೊರೆಯುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು.

ನೂತನ ಟೊಯೊಟಾ ಹಿಲಕ್ಸ್ ಶಕ್ತಿಯುತವಾದ 2.8 - ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ. ಬರೋಬ್ಬರಿ 10 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 4ಡಬ್ಲ್ಯೂಡಿ (ಫೋರ್ ವೀಲ್ ಡ್ರೈವ್) ಟೆಕ್ನಾಲಜಿಯನ್ನು ಒಳಗೊಂಡಿದೆ.
ಹೊಸ ಕಾರು ಆಕರ್ಷಕವಾಗಿರುವ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ದೊಡ್ಡದಾದ ಗ್ರಿಲ್, ಎಲ್ಇಡಿ ಫಾಗ್ ಲ್ಯಾಂಪ್‌ಗಳು ಮತ್ತು 18-ಇಂಚಿನ ಮಲ್ಟಿ-ಸ್ಪೋಕ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (8-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್, ಡುಯಲ್ ಝೋನ್ ಆಟೋ ಕ್ಲೇಮೇಟ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಟೊಯೊಟಾ ಹಿಲಕ್ಸ್ ಪಿಕ್ಅಪ್ ಟ್ರಕ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಬ್ರೇಕ್ ಅಸಿಸ್ಟ್, ಫ್ರಂಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ರಿವರ್ಸಿಂಗ್ ಕ್ಯಾಮೆರಾಗಳನ್ನು ಒಳಗೊಂಡಿದೆ. ಹಿಲಕ್ಸ್ ಪಿಕ್ಅಪ್ ಟ್ರಕ್‌ಗೆ ಇಸುಜು ವಿ-ಕ್ರಾಸ್ ಪ್ರಬಲವಾದ ಎದುರಾಳಿಯಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications