ಅಧೀರನ ಕೋಟೆಗೆ 'ಕರಿ ಚಿರತೆ' ಎಂಟ್ರಿ.. ಬೆಲೆ & ಫೀಚರ್‌ಗಳ ಬಗ್ಗೆ ಕೇಳಿದ್ರೆ ತಲೆ ತಿರುಗಿತ್ತೆ!
ಸಂಜಯ್ ದತ್ (Sanjay Dutt) ಜನಪ್ರಿಯ ನಟರಾಗಿದ್ದು, ಅಪಾರ ಸಂಖ್ಯೆಯ ಅಭಿಮಾನಿ ಬಳಗವಿದೆ. ಕನ್ನಡ, ತೆಲುಗು, ತಮಿಳು, ಹಿಂದಿ, ಹಾಗೂ ಪಂಜಾಬಿ ಸಿನಿ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬರೋಬ್ಬರಿ 160ಕ್ಕೂ ಹೆಚ್ಚು ಚಿತ್ರದಲ್ಲಿ ಅಭಿನಯಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಸೂಪರ್ ಹಿಟ್ ಸಿನಿಮಾ 'ಕೆಜಿಎಎಫ್-2'ನ ಅಧೀರನ ಪಾತ್ರ ಅವರಿಗೆ ದೊಡ್ಡ ಮಟ್ಟದಲ್ಲಿ ಖ್ಯಾತಿ ತಂದುಕೊಟ್ಟಿತ್ತು. ಇತ್ತೀಚೆಗೆ ತಮ್ಮ ಮುಂಬರುವ ಚಿತ್ರ 'ಬಾಘಿ 4' ರ ಕಾರಣದಿಂದಾಗಿಯೂ ಸುದ್ದಿಯಲ್ಲಿದ್ದಾರೆ.
ಸದ್ಯ, ನಟ ಸಂಜಯ್ ದತ್ ದುಬಾರಿ ಬೆಲೆಯ ಹೊಚ್ಚ ಹೊಸ ಅಬ್ಸಿಡಿಯನ್ ಬ್ಲ್ಯಾಕ್ ಬಣ್ಣದ ಹೊಚ್ಚ ಹೊಸ ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್ 600 ಕಾರನ್ನು ಖರೀದಿ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದ ಹಲವು ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲೂ ಭಾರೀ ವೈರಲ್ ಆಗಿವೆ.

ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್ 600 (Mercedes Maybach GLS 600) ವಿಶೇಷತೆಗಳೇನು:
ಇದೊಂದು ಐಷಾರಾಮಿ ಎಸ್‌ಯುವಿಯಾಗಿದೆ. ರೂ.3.35 ಕೋಟಿಯಿಂದ ರೂ.3.71 ಕೋಟಿ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಜಿಎಲ್ಎಸ್ 600 4ಮ್ಯಾಟಿಕ್ ಹಾಗೂ ಜಿಎಲ್ಎಸ್ 600 ನೈಟ್ ಎಂಬ ಎರಡು ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ.
ಈ ಕಾರು ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಅದು ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು, ಅಲಾಯ್ ವೀಲ್‌ಗಳು, ಪನೋರಮಿಕ್ ಸನ್‌ರೂಫ್ ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ. ನಾಟಿಕ್ ಬ್ಲೂ ಹೈಟೆಕ್ ಸಿಲ್ವರ್, ಸೋಡಾಲೈಟ್ ಬ್ಲೂ ಮೆಟಾಲಿಕ್, ಸೆಲೆನೈಟ್ ಗ್ರೇ, ಹೈಟೆಕ್ ಸಿಲ್ವರ್, ಆಲ್ಪೈನ್ ಗ್ರೇ ಸಾಲಿಡ್ ಹಾಗೂ ಪೋಲಾರ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ನೂತನ ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್ 600 ಎಸ್‌ಯುವಿಯು 2157 ಎಂಎಂ ಅಗಲ ಮತ್ತು 1838 ಎಂಎಂ ಎತ್ತರವು ಇದೆ. ಜೊತೆಗೆ 200 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 3135 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 2825 ಕೆಜಿ ತೂಕವಿದೆ.
ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 520 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 4.0-ಲೀಟರ್ ಟ್ವಿನ್-ಟರ್ಬೊ ವಿ8 ಪೆಟ್ರೋಲ್ ಎಂಜಿನ್ ಹೊಂದಿದ್ದು, 550 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 770 ಎನ್ಎಂ (ನ್ಯೂಟನ್ ಮೀಟರ್ ಪೀಕ್ ಟಾರ್ಕ್ ಹೊರಹಾಕುತ್ತದೆ. 9-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ. 10 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ಇದು 250 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಡಿದೆ. ಕೇವಲ 4.9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡ್ಯುಯಲ್ ಹೈ-ರೆಸಲ್ಯೂಷನ್ ಡಿಜಿಟಲ್ ಡಿಸ್‌ಪ್ಲೇಗಳು, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4-ಝೋನ್ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಅಡ್ವಾನ್ಸ್ಡ್ ಏರ್ ಪ್ಯೂರಿಫಿಕೇಷನ್ ಸಿಸ್ಟಮ್, ಕೀಲೆಸ್ ಎಂಟ್ರಿ, ಸ್ಟಾರ್ಟ್/ಸ್ಟಾಪ್ ಬಟನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮರ್ಸಿಡಿಸ್ ಮೇಬ್ಯಾಕ್ ಜಿಎಲ್ಎಸ್ 600 ಎಸ್‌ಯುವಿಯು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 8 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








