ನಟ ಸೀರುಂಡೆ ರಘು ಮನೆಗೆ ಹೊಸ ಅತಿಥಿಯ ಆಗಮನ.. ಸಂಭ್ರಮದಿಂದ ಸ್ವಾಗತ, ಬೆಲೆ ಎಷ್ಟು.. ವಿಶೇಷತೆಗಳೇನು?
ಕನ್ನಡದ ಪ್ರಮುಖ ಹಾಸ್ಯ ನಟನಾಗಿ ಸೀರುಂಡೆ ರಘು (Seerunde Raghu) ಜನಪ್ರಿಯರಾಗುತ್ತಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಹಾಗೂ ಸತ್ಯ ಧಾರಾವಾಹಿ ರಘು ಅವರಿಗೆ ದೊಡ್ಡ ಮಟ್ಟದಲ್ಲಿ ಖ್ಯಾತಿಯನ್ನು ತಂದುಕೊಂಡಿತ್ತು. ಈವರೆಗೂ 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ಕೆ.ರಾಘವ ಆಕ್ಷನ್ ಕಟ್ ಹೇಳಿದ್ದ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ 'ರಣಾಕ್ಷ'ದಲ್ಲೂ ನಾಯಕ ನಟನಾಗಿ ಕಾಣಿಸಿಕೊಂಡಿದ್ದಾರೆ.
ಸದ್ಯ, ಸೀರುಂಡೆ ರಘು ಅವರು ಹೊಚ್ಚ ಹೊಸ ಹ್ಯುಂಡೈ ವೆನ್ಯೂ (Hyundai Venue) ಎಸ್‌ಯುವಿಯನ್ನು ಖರೀದಿ ಮಾಡಿದ್ದಾರೆ. ತಮ್ಮ ಕುಟುಂಬ ಸದಸ್ಯರೊಂದಿಗೆ ನೂತನ ಕಾರನ್ನು ಖುಷಿ ಖುಷಿಯಾಗಿ ವಿತರಣೆ ಪಡೆದಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿಯೂ ಪೋಸ್ಟ್ ಮಾಡಿದ್ದಾರೆ. ಅದಕ್ಕೆ 'ಮನೆಗೆ ಬಂದ ಹೊಸ ಅತಿಥಿ' ಎಂಬ ಶೀರ್ಷಿಕೆಯನ್ನು ಬರೆದಿದ್ದಾರೆ.

ಹ್ಯುಂಡೈ ವೆನ್ಯೂ ವಿಶೇಷತೆಗಳೇನು:
ಈ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.7.94 ಲಕ್ಷ ಹಾಗೂ ಗರಿಷ್ಠ ರೂ.13.62 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇ, ಎಸ್, ಎಸ್ ಪ್ಲಸ್ ಹಾಗೂ ಎಸ್(ಒ) ಒಳಗೊಂಡಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಕನೆಕ್ಟ್ಡ್ ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಸಿಗ್ನೇಚರ್ ಡಾರ್ಕ್ ಕ್ರೋಮ್ ಗ್ರಿಲ್, ಸ್ಟೈಲಿಶ್ ರೂಫ್ ರೈಲ್‌ಗಳು, ಶಾರ್ಕ್ ಫಿನ್ ಆಂಟೆನಾ ಹಾಗೂ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಪರ್ಲ್, ಟೈಟಾನ್ ಗ್ರೇ ಮತ್ತು ಲೈಟ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ ಹ್ಯುಂಡೈ ವೆನ್ಯೂ ಎಸ್‌ಯುವಿಯು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 350 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 45 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.
ಈ ಕಾರು ವಿಶಾಲ ಗಾತ್ರದಲ್ಲಿದೆ. 4040 ಎಂಎಂ ಉದ್ದ, 1770 ಎಂಎಂ ಅಗಲ ಹಾಗೂ 1617 ಎಂಎಂ ಎತ್ತರವು ಇದೆ. ಜೊತೆಗೆ 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2520 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಬರೋಬ್ಬರಿ 1,700 ಕೆಜಿ ತೂಕವಿದೆ.
ಹೊಸ ಹ್ಯುಂಡೈ ವೆನ್ಯೂ ಎಸ್‌ಯುವಿ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡಿಸೇಲ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಆಟೋಮೆಟಿಕ್) ಗೇರ್‌ಬಾಕ್ಸ್‌ನ್ನು ಪಡೆದಿದೆ. 17.5 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ಇದು 165 ಕೆಎಂಪಿಎಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 12.87 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ , ಏರ್ ಪ್ಯೂರಿಫೈಯರ್, ಆಟೋಮೆಟಿಕ್ ಎಸಿ, ಕೋಲ್ಡ್ ಗ್ಲೋವ್‌ಬಾಕ್ಸ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಸಿಂಗಲ್ ಪೇನ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ನೂತನ ಹ್ಯುಂಡೈ ವೆನ್ಯೂ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ಹಿಲ್ ಹೋಲ್ಡ್ ಅಸಿಸ್ಟ್,) ಹಾಗೂ ರೇರ್ ವ್ಯೂ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








