ದುಬಾರಿ ಬೆಲೆಯ ಸೆಕೆಂಡ್ ಹ್ಯಾಂಡ್ ಕಾರಿನ ಒಡತಿ ಖ್ಯಾತ ನಟಿ ಶ್ರೀಲೀಲಾ.. ಯಾವುದು?
ಶ್ರೀಲೀಲಾ (Sreeleela) ಜನಪ್ರಿಯ ನಟಿಯಾಗಿದ್ದು, ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕನ್ನಡ ಹಾಗೂ ತೆಲುಗು ಸಿನಿರಂಗದಲ್ಲಿ ಫುಲ್ ಆಕ್ಟಿವ್ ಆಗಿದ್ದಾರೆ. ಶ್ರೀಲೀಲಾ ಸ್ಯಾಂಡಲ್‌ವುಡ್‌ನ ಕಿಸ್ ಹಾಗೂ ಜೇಮ್ಸ್ ಚಿತ್ರಗಳಲ್ಲಿಯೂ ನಟಿಸಿದ್ದು, ಟಾಲಿವುಡ್‌ನ ಚಿತ್ರಾಂಗದ ಸಿನಿಮಾದಲ್ಲಿ ಬಾಲನಟಿಯಾಗಿ ಅಭಿನಯಿಸಿರುವ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿದ್ದರು. ಇತ್ತೀಚೆಗೆ ತೆರೆಕಂಡ ಪುಷ್ಪ-2 ಚಿತ್ರ ಶ್ರೀಲೀಲಾ ಅವರಿಗೆ ದೊಡ್ಡ ಮಟ್ಟದಲ್ಲಿ ಜನಮನ್ನಣೆ ತಂದುಕೊಟ್ಟಿತ್ತು.
ಬಾಲಿವುಡ್‌ನಿಂದಲೂ ನಟಿ ಶ್ರೀಲೀಲಾಗೆ ಆಫರ್‌ಗಳ ಸುರಿಮಳೆಯಾಗುತ್ತಿದ್ದು, ಆಗ್ಗಾಗ್ಗೆ ಮುಂಬೈಗೆ ಭೇಟಿ ನೀಡುತ್ತಿರುತ್ತಾರೆ. ಸಿನಿ ನಗರವನ್ನು ಸುತ್ತಲು ಶ್ರೀಲೀಲಾ ಸೆಕೆಂಡ್ ಹ್ಯಾಂಡ್ 2017ರ ಬಿಎಂಡಬ್ಲ್ಯೂ ಎಕ್ಸ್3 (BMW X3) ಕಾರನ್ನು ಖರೀದಿ ಮಾಡಿದ್ದಾರೆ ಎಂದು ವರದಿಯಾಗಿದೆ. ಈಚೆಗೂ ಕೂಡ ಶ್ರೀಲೀಲಾ ಇದೇ ಕಾರಿನಲ್ಲಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲದೆ, 5 ತಿಂಗಳ ಹಿಂದೆಯೂ ಈ ಕಾರಿನಲ್ಲೇ ಸಂಚಾರಿಸಿದ್ದರು.

ಹೊಸ ಬಿಎಂಡಬ್ಲ್ಯೂ ಎಕ್ಸ್3 ವಿಶೇಷತೆಗಳೇನು: ಇದೊಂದು ಎಸ್‌ಯುವಿಯಾಗಿದೆ. ರೂ.75.80 ಲಕ್ಷದಿಂದ ರೂ.77.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 550 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಬಿಎಂಡಬ್ಲ್ಯೂ ಎಕ್ಸ್3 ಕಾರು ಎರಡು ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 2-ಲೀಟರ್ 4-ಸಿಲಿಂಡರ್ ಪೆಟ್ರೋಲ್ ಎಂಜಿನ್, 193 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 310 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ.

ಮತ್ತೊಂದು 48ವಿ ಮೈಲ್ಡ್-ಹೈಬ್ರಿಡ್ 2-ಲೀಟರ್ 4-ಸಿಲಿಂಡರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. ಇದು 200 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 400 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 8-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಈ ಕಾರು 13 ರಿಂದ 18 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.
ನೂತನ ಬಿಎಂಡಬ್ಲ್ಯೂ ಎಕ್ಸ್3 ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 14.9-ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 3-ಜೋನ್ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್‌ಪ್ಲೇ, 15-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್ ಆಯ್ಕೆಯನ್ನು ಹೊಂದಿದೆ. ಹೊಸ ಬಿಎಂಡಬ್ಲ್ಯೂ ಎಕ್ಸ್3 ಎಸ್‌ಯುವಿಗೆ ಮರ್ಸಿಡಿಸ್ ಜೇಂಜ್ ಜಿಎಲ್‌ಸಿ ಹಾಗೂ ಆಡಿ ಕ್ಯೂ5 ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








