ಬರ್ತ್ಡೇ: ನೂತನ 'ಹ್ಯುಂಡೈ' ಕ್ರೆಟಾ ಮನೆಗೆ ತಂದ ಕನ್ನಡದ ಖ್ಯಾತ ನಟಿ.. ಜನಸಾಮಾನ್ಯರ ನೆಚ್ಚಿನ ಕಾರಿದು!
ಕಲರ್ಸ್ ಕನ್ನಡ (Colors Kannada) ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮೀ'ಯಲ್ಲಿ ಅಭಿನಯಿಸುತ್ತಿರುವ ನಟಿ ಸುಷ್ಮಾ ರಾವ್ (Sushma Rao) ವೀಕ್ಷಕರ ಮನ ಗೆದ್ದಿದ್ದಾರೆ. ಖ್ಯಾತ ನಿರ್ದೇಶಕ ಎಸ್.ನಾರಾಯಣ್ (S.Narayan) ಆಕ್ಷನ್ ಕಟ್ ಹೇಳಿದ್ದ ಭಾಗೀರಥಿ ಸೀರಿಯಲ್ನ 'ವೀಣಾ' ಪಾತ್ರದ ಮೂಲಕ ಸುಷ್ಮಾ ರಾವ್ ಕನ್ನಡ ಕಿರುತೆರೆಯನ್ನು ಪ್ರವೇಶಿಸಿದ್ದರು. ಆ ಬಳಿಕ ಹಲವು ಧಾರವಾಹಿಗಳಲ್ಲಿ ನಟಿಸಿದ್ದು, ಭರತನಾಟ್ಯ ಕಲಾವಿದೆ ಹಾಗೂ ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ.
ಈಚೆಗೆ (ಜುಲೈ 1) ಭಾಗ್ಯಲಕ್ಷ್ಮೀ (Bhagyalaxmi) ಶೂಟಿಂಗ್ ಸೆಟ್‌ನಲ್ಲಿ ನಟಿ ಸುಷ್ಮಾ ರಾವ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ. ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿತ್ತು. ಬರ್ತ್ಡೇ ಪ್ರಯುಕ್ತ ನಟಿ ಸುಷ್ಮಾ ರಾವ್ ಹೊಚ್ಚ ಹೊಸ ಹ್ಯುಂಡೈ ಕ್ರೆಟಾ (Hyundai Creta) ಎಸ್‌ಯುವಿಯನ್ನು ತೆಗೆದುಕೊಂಡಿದ್ದಾರೆ. ಆ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿವೆ.

ನಟಿ ಸುಷ್ಮಾ ರಾವ್ ಖರೀದಿಸಿರುವ ನೂತನ ಹ್ಯುಂಡೈ ಕ್ರೆಟಾ ಕಾರಿನ ನಿಖರವಾದ ರೂಪಾಂತರದ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಿಲ್ಲ. ದೇಶೀಯ ಮಾರುಕಟ್ಟೆಯಲ್ಲಿ ಈ ಎಸ್‌ಯುವಿಯು ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇ, ಇಎಕ್ಸ್, ಎಸ್, ಎಸ್(ಒ) ಮತ್ತು ಎಸ್ಎಕ್ಸ್ ಟೆಕ್ ಸೇರಿದಂತೆ ಒಟ್ಟು ಏಳು ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಸಿಗುತ್ತದೆ.
ನೂತನ ಹ್ಯುಂಡೈ ಕ್ರೆಟಾ ಎಸ್‌ಯುವಿಯು 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ತಕ್ಕಂತೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಕಾರು ಅತ್ಯಾಧುನಿಕವಾಗಿರುವ ವಿನ್ಯಾಸ (ಡಿಸೈನ್)ವನ್ನು ಒಳಗೊಂಡಿದ್ದು, ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ, ರೇಂಜರ್ ಖಾಕಿ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. ಇದರಲ್ಲಿ 5 ಸುಲಭವಾಗಿ ಓಡಾಟವನ್ನು ನಡೆಯಬಹುದು. ವಾರಾಂತ್ಯ, ಹಬ್ಬದ ರಜಾದಿನಗಳಲ್ಲಿ ಊರುಗಳಿಗೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.
ಹೊಸ ಹ್ಯುಂಡೈ ಕ್ರೆಟಾ ಎಸ್‌ಯುವಿ ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳನ್ನು ಸೆಳೆಯುವಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.25-ಇಂಚಿನ ಡುಯಲ್ ಡಿಸ್ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್‌ಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications