ದುಬಾರಿ ಐಷಾರಾಮಿ ಕಾರಿನಲ್ಲಿ ಕಾಣಿಸಿಕೊಂಡ ಮಿಲ್ಕಿ ಬ್ಯೂಟಿ.. ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!

ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ (Tamannaah Bhatia) ಜನಪ್ರಿಯ ನಟಿಯಾಗಿದ್ದು, ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಎಲ್ಲ ಭಾಷೆಗಳು ಸೇರಿ ಬರೋಬ್ಬರಿ 85 ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ನಟಿ ತಮನ್ನಾ ದುಬಾರಿ ಬೆಲೆಯ ಐಷಾರಾಮಿ ಆಡಿ ಎ4 (Audi A4) ಸೆಡಾನ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಬನ್ನಿ.. ಈ ಕಾರಿನ ವಿಶೇಷತೆಗಳೇನು ಎಂಬುದನ್ನು ತಿಳಿಯೋಣ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹೊಚ್ಚ ಹೊಸ 'ಆಡಿ ಎ4' ಸೆಡಾನ್ ರೂ.46.99 ಲಕ್ಷದಿಂದ ರೂ.55.84 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪ್ರೀಮಿಯಂ ಮತ್ತು ಪ್ರೀಮಿಯಂ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಜೊತೆಗೆ ಗ್ಲೇಸಿಯರ್ ವೈಟ್, ಫ್ಲೋರೆಟ್ ಸಿಲ್ವರ್, ಮೈಥೋಸ್ ಬ್ಲಾಕ್, ನವರ್ರಾ ಬ್ಲೂ ಹಾಗೂ ಟೆರ್ರಾ ಗ್ರೇ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

Actor Tamannaah Bhatia Spotted On Audi A4 Details

ಈ ಕಾರು 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 204 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 320 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ. 14.1 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಆಡಿ ಎ4 ಸೆಡಾನ್ 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 460 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.

Actor Tamannaah Bhatia Spotted On Audi A4 Details

ಹೊಸ ಆಡಿ ಎ4 ಕಾರು ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 10.2-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 19-ಸ್ಪೀಕರ್ & ಒಲುಫ್ಸೆನ್ ಸೌಂಡ್ ಸಿಸ್ಟಮ್‌, ಟ್ರಿಪಲ್-ಜೋನ್ ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಫಿಕ್ಸೆಡ್ ಗ್ಲಾಸ್ ರೂಫ್ ಅನ್ನು ಪಡೆದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 8 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) . ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ. ನೂತನ ಆಡಿ ಎ4 ಸೆಡಾನ್‌ಗೆ ಮರ್ಸಿಡಿಸ್ ಬೆಂಜ್ ಸಿ-ಕ್ಲಾಸ್, ಬಿಎಂಡಬ್ಲ್ಯು 3 ಸೀರೀಸ್ ಮತ್ತು ಜಾಗ್ವಾರ್ ಎಕ್ಸ್‌ಇ ಕಾರುಗಳು ಪ್ರಬಲವಾದ ಎದುರಾಳಿಯಾಗಿವೆ.

ಇನ್ನು, ನಟಿ ತಮನ್ನಾ ಭಾಟಿಯಾ ಹಲವು ದುಬಾರಿ ಬೆಲೆಯ ಐಷಾರಾಮಿ ಕಾರುಗಳ ಒಡತಿಯೂ ಆಗಿದ್ದಾರೆ. ಅವರ ಗ್ಯಾರೇಜ್‌ನಲ್ಲಿ ಬಿಎಂಡಬ್ಲ್ಯೂ 320ಐ (ರೂ.43.50 ಲಕ್ಷ), ಮರ್ಸಿಡಿಸ್-ಬೆಂಜ್ ಜಿಎಲ್ಇ (ರೂ.1.02 ಕೋಟಿ), ಮಿತ್ಸುಬಿಷಿ ಪಜೆರೊ ಸ್ಪೋರ್ಟ್ (ರೂ.29.96 ಲಕ್ಷ) ಹಾಗೂ ಲ್ಯಾಂಡ್ ರೋವರ್ ರೇಂಜ್ ರೋವರ್ ಡಿಸ್ಕವರಿ ಸ್ಪೋರ್ಟ್ (ರೂ.75.59 ಲಕ್ಷ) ಸೇರಿದಂತೆ ಹಲವು ಕಾರುಗಳಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, February 26, 2025, 19:46 [IST]
English summary
Actor tamannaah bhatia spotted on audi a4 details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+