Just In
- 1 hr ago
ಎಸ್ಬಿಐ ಜೊತೆಗೂಡಿ ಇವಿ ಕಾರುಗಳಿಗಾಗಿ ವಿಶೇಷ ಸಾಲ ಸೌಲಭ್ಯ ಘೋಷಣೆ ಮಾಡಿದ ಟಾಟಾ ಮೋಟಾರ್ಸ್
- 15 hrs ago
ವ್ಯಾಗನ್ಆರ್ ಕಾರಿಗೆ ಸೆಡ್ಡು ಹೊಡೆಯಲಿದೆ 2022ರ ಕಿಯಾ ರೇ ಫೇಸ್ಲಿಫ್ಟ್
- 15 hrs ago
ಜುಲೈ ಎಲೆಕ್ಟ್ರಿಕ್ ಕಾರುಗಳ ನೋಂದಣಿಯಲ್ಲಿ ಶೇ 3.5 ರಷ್ಟು ಏರಿಕೆ: ಶೇ 90 ರಷ್ಟು ಪಾಲು ಟಾಟಾಗೆ
- 16 hrs ago
30.9 ಕಿ.ಮೀ ಮೈಲೇಜ್ನೊಂದಿಗೆ ಮಾರುತಿ ಸ್ವಿಫ್ಟ್ ಸಿಎನ್ಜಿ ಕಾರು ಬಿಡುಗಡೆ
Don't Miss!
- Movies
ಫೇಸ್ಬುಕ್ ಲೈವ್ ಬಂದು ಪ್ರಪಂಚದ ದೊಡ್ಡ ಪ್ರಾಬ್ಲಂ ಬಗ್ಗೆ ಹೇಳಿದ ಉಪೇಂದ್ರ!
- News
ವೆಂಟಿಲೇಟರ್ನಲ್ಲಿರುವ ಸಲ್ಮಾನ್ ರಶ್ದಿ, ದೃಷ್ಟಿ ಕಳೆದುಕೊಳ್ಳುವ ಅಪಾಯ!
- Lifestyle
ಕಿಡ್ನಿಗೆ ಅಪಾಯವಿದೆ ಎಂದು ಸೂಚಿಸುವ ಲಕ್ಷಣಗಳಿವು!
- Sports
Asia Cup 2022: ಭಾರತ vs ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯದಲ್ಲಿ ಈ ತಂಡ ಗೆಲ್ಲಲಿದೆ; ರಿಕಿ ಪಾಂಟಿಂಗ್
- Finance
ಕ್ರಿಪ್ಟೋ ವಹಿವಾಟು: 370 ಕೋಟಿ ರೂಪಾಯಿ ಜಪ್ತಿ ಮಾಡಿದ ಇಡಿ
- Technology
ರೆಡ್ಮಿ K50 ಅಲ್ಟ್ರಾ ಮತ್ತು ಶಿಯೋಮಿ ಪ್ಯಾಡ್ 5 ಪ್ರೊ 12.4 ಬಿಡುಗಡೆ! ವಿಶೇಷತೆ ಏನು?
- Travel
75ನೇ ಸ್ವಾತೊಂತ್ರೋತ್ಸವವನ್ನು ಸ್ಮರಿಸುತ್ತಾ ಸ್ವಾತಂತ್ರ್ಯ ಹೋರಾಟದೊಡನೆ ಸಂಬಂಧವಿರುವ ಭಾರತದ ಈ ಸ್ಮಾರಕಗಳು
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
ಕೋಟಿ ಬೆಲೆಯ ಮರ್ಸಿಡಿಸ್ ಜಿಎಲ್ಎಸ್ ಎಸ್‍ಯುವಿ ಖರೀದಿಸಿದ ನಟ ವರುಣ್ ಧವನ್
ಸಿನಿಮಾ ರಂಗ ಎಂಬ ಕಲರ್‍ಫುಲ್ ದುನಿಯಾದಲ್ಲಿರುವ ಸೆಲಬ್ರಿಟಿಗಳಿಗೆ ವಿಭಿನ್ನವಾದ ಕ್ರೇಜ್‍ಗಳಿವೆ. ಅದರಲ್ಲೂ ದುಬಾರಿ ಕಾರುಗಳನ್ನು ಕೊಂಡುಕೊಳ್ಳುವ ಕ್ರೇಜ್ ಸ್ವಲ್ಪ ಹೆಚ್ಚೆ ಇದೆ. ಸೆಲಬ್ರಿಟಿಗಳು ಪೈಪೋಟಿಗೆ ಬಿದ್ದ ಅಂತೆ ಮಾರುಕಟ್ಟೆಯಲ್ಲಿರುವ ಲಭ್ಯವಿರುವ ಅತಿ ದುಬಾರಿ ಕಾರುಗಳನ್ನು ಖರೀದಿಸುತ್ತಾರೆ.

ಇತ್ತೀಚೆಗೆ ಬಾಲಿವುಡ್ ಸಿಂಪಲ್ ಸ್ಟಾರ್ ವರುಣ್ ಧವನ್ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯನ್ನು ಖರೀದಿಸಿದ್ದಾರೆ. ಅವರು ಸ್ಟೂಡೆಂಟ್ ಆಫ್ ದಿ ಇಯರ್, ಬದ್ಲಾಪುರ್, ಕಲಂಕ್, ದಿಲ್ವಾಲೆ ಮುಂತಾದ ಚಿತ್ರಗಳ ಮೂಲಕ ಹೆಚು ಜನಪ್ರಿಯರಾಗಿದ್ದಾರೆ. ಅವರ ಇತ್ತೀಚಿನ ಚಿತ್ರ ಜಗ್ ಜಗ್ ಜೀಯೋ. ನಟ ವರುಣ್ ಧವನ್ ಅವರು ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ ಯಾವ ರೂಪಾಂತರವನ್ನು ಆಯ್ಕೆ ಮಾಡಿದ್ದಾರೆ ಎಂದು ನಮಗೆ ಖಚಿತವಾಗಿಲ್ಲ. ಆದರೆ ಅವರು ಸ್ಟೀಲ್ತ್ ಕಪ್ಪು ಬಣ್ಣವನ್ನು ಆರಿಸಿಕೊಂಡರು.

ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯು 400ಡಿ, 450 ಮತ್ತು ಮೇಬ್ಯಾಕ್ 600 ಎಂಬ ಮೂರು ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಕಾರಿನ ಆರಂಭಿಕ ಬೆಲೆಯು ಎಕ್ಸ್ ಶೋರೂಂ. ಪ್ರಕಾರ ರೂ.1.14 ಕೋಟಿಯಾಗಿದೆ. ಇದರ ಟಾಪ್-ಸ್ಪೆಕ್ ಮೇಬ್ಯಾಕ್ 600 ರೂಪಾಂತರದ ಬೆಲೆಯು ಎಕ್ಸ್ ಶೋರೂಂ. ಪ್ರಕಾರ ರೂ.2.47 ಕೋಟಿ ಆಗಿದೆ.

ವರುಣ್ ಧವನ್ ಇತರ ಐಷಾರಾಮಿ ಎಸ್‌ಯುವಿಗಳನ್ನು ಸಹ ಹೊಂದಿದ್ದಾರೆ. ಅವರ ಗ್ಯಾರೇಜ್‌ನಲ್ಲಿ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ 350ಡಿ 4ಮ್ಯಾಟಿಕ್, ಲ್ಯಾಂಡ್ ರೋವರ್ LR3 ಮತ್ತು ಆಡಿ ಕ್ಯೂ7 ಸೇರಿವೆ. ಇದರ ಜೊತೆ ಮಹೀಂದ್ರಾ ಕೆಯುವಿ100 ಅನ್ನು ಸಹ ಹೊಂದಿದ್ದಾರೆ. ಅವರು ಮಹೀಂದ್ರಾದ ಬ್ರಾಂಡ್ ಅಂಬಾಸಿಡರ್ ಆಗಿದ್ದ ಕಾರಣ ಅದನ್ನು ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ.

ಬಾಲಿವುಡ್ ನಟ ವರುಣ್ ಧವನ್ ಖರೀದಿಸಿದ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಈ ಜಿಎಲ್ಎಸ್ ಎಂಬುದು ಮರ್ಸಿಡಿಸ್ ಬೆಂಝ್ ಪ್ರಮುಖ ಎಸ್‍ಯುವಿಯಾಗಿದೆ. ಈ ಎಸ್‍ಯುವಿಯಲ್ಲಿ ಆಕರ್ಷಕ ವಿನ್ಯಾಸ ಮತ್ತು ಅತ್ಯಾಧುನಿಕ ಫೀಚರ್ಸ್ ಗಳನ್ನು ಹೊಂದಿವೆ.

ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ 450 4 ಮ್ಯಾಟಿಕ್ ರೂಪಾಂತರ ಪೆಟ್ರೋಲ್ ಎಂಜಿನ್ ಹೊಂದಿದ್ದರೆ, ಜಿಎಲ್ಎಸ್ 400 ಡಿ 4 ಮ್ಯಾಟಿಕ್ ರೂಪಾಂತರ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯ 450 4 ಮ್ಯಾಟಿಕ್ ರೂಪಾಂತರದಲ್ಲಿ 3.0-ಲೀಟರ್ ಇನ್-ಲೈನ್ ಸಿಕ್ಸ್-ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಬ್ರ್ಯಾಂಡ್ ನ ಇಕ್ಯೂ ಬೂಸ್ಟ್ ಸಿಸ್ಟಂ ಅನ್ನು ಒಳಗೊಂಡಿದೆ.

ಈ ಎಂಜಿನ್ 367 ಬಿಹೆಚ್‍ಪಿ ಮತ್ತು 500 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಜಿಎಲ್ಎಸ್ 400 ಡಿ 4 ಮ್ಯಾಟಿಕ್ ರೂಪಾಂತರವು 3.0 ಲೀಟರ್ ಇನ್-ಲೈನ್ ಆರು ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 330 ಬಿಹೆಚ್‍ಪಿ ಪವರ್ ಮತ್ತು 700 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯುಯಲ್ಲಿ ಎಲ್‌ಇಡಿ ಡಿಆರ್‌ಎಲ್, ಎಲ್‌ಇಡಿ ಟೈಲ್ ಲೈಟ್, ಕ್ರೋಮ್ ಅಡ್ಡಲಾಗಿರುವ ಸ್ಲ್ಯಾಟ್‌ಗಳೊಂದಿಗೆ ಫ್ರಂಟ್ ಗ್ರಿಲ್ ಮತ್ತು ಮಧ್ಯದಲ್ಲಿ ಮರ್ಸಿಡಿಸ್ ಬೆಂಝ್ ಲೋಗೊವನ್ನು ಹೊಂದಿದೆ.

ಇನ್ನು ಈ ದುಬಾರಿ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯುಯಲ್ಲಿ ಎಲ್ಇಡಿ ಹೆಡ್‌ಲ್ಯಾಂಪ್, 21 ಇಂಚಿನ ಡ್ಯುಯಲ್-ಟೋನ್ ಅಲಾಯ್ ವ್ಹೀಲ್, ಕ್ರೋಮ್ ಬೆಜೆಲ್‌ಗಳೊಂದಿಗೆ ಡ್ಯುಯಲ್ ಎಕ್ಸಾಸ್ಟ್ ಮಫ್ಲರ್‌ಗಳು ಮತ್ತು ಹಲವಾರು ಸೂಕ್ಷ್ಮ ನವೀಕರಣಗಳನ್ನು ಈ ಹಿಂದೆ ನಡೆಸಲಾಗಿತ್ತು.

ಈ ಜಿಎಲ್ಎಸ್ ಎಸ್‍ಯುವಿಯ ಇಂಟಿರಿಯರ್ ಐಷಾರಮಿಯಾಗಿದೆ. ಈ ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ ಗಳನ್ನು ಹೊಂದಿವೆ. ಇದರಲ್ಲಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ಬ್ರ್ಯಾಂಡ್‌ನ ಎಂಬಿಎಕ್ಸ್ ತಂತ್ರಜ್ಞಾನ, ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಪನೋರಮಿಕ್ ಸನ್‌ರೂಫ್, 64-ಬಣ್ಣದ ಆಂಬಿಯೆಂಟ್ ಲೈಟಿಂಗ್ ಮತ್ತು 5 ಹಂತದ ಕ್ಲೈಮೆಂಟ್ ಕಂಟ್ರೋಲ್ ಅನ್ನು ಹೊಂದಿದೆ. ಈ ಮರ್ಸಿಡಿಸ್ ಜಿಎಲ್ಎಸ್ ತನ್ನ ಹಿಂದಿನ ಕಾರಿಗಿಂತ 77 ಎಂಎಂ ಮತ್ತು 22 ಎಂಎಂ ಅಗಲವನ್ನು ಹೊಂದಿದೆ.

ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿ 60 ಎಂಎಂನಷ್ಟು ವ್ಹೀಲ್ ಬೇಸ್ ಅನ್ನು ಹೊಂದಿದೆ. ಈ ಎಸ್‍ಯುವಿ ಐಷಾರಾಮಿ ಆರು ಸೀಟುಗಳ ಕ್ಯಾಬಿನ್ ಅನ್ನು ಹೊಂದಿದೆ. ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮೂರನೇ ತಲೆಮಾರಿನ ಮಾದರಿಯಾಗಿದೆ. ಈ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಭಾರತೀಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಎಕ್ಸ್7 ಎಸ್‍ಯುವಿಗೆ ಪೈಪೋಟಿಯನ್ನು ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ
ಸಿಂಪಲ್ ಸ್ಟಾರ್ ವರುಣ್ ಧವನ್ ಹೊಸ ಐಷಾರಾಮಿ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯನ್ನು ಇತ್ತೀಚೆಗೆ ಖರೀದಿಸಿದ್ದಾರೆ. ಇವರು ಅತ್ಯುತ್ತಮ ಐಷಾರಾಮಿ ಎಸ್‍ಯುವಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಜಿಎಲ್ಎಸ್ ಎಂಬುದು ಮರ್ಸಿಡಿಸ್ ಬೆಂಝ್ ಎಸ್‍ಯುವಿ ಸರಣಿಯಲ್ಲಿ ಪ್ರಮುಖ ಎಸ್‍ಯುವಿಯಾಗಿದೆ. ಹಲವಾರು ಸಿನಿಮಾ ಸೆಲಬ್ರಿಟಿಗಳು ಈ ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‍ಯುವಿಯನ್ನು ಹೊಂದಿದ್ದಾರೆ. ಸೆಲಬ್ರಿಟಿಗಳ ಮೆಚ್ಚಿನ ಎಸ್‍ಯುವಿ ಆಯ್ಕೆಗಳಲ್ಲಿ ಒಂದಾಗಿದೆ..