ಅಪ್ಪ ರಾಘಣ್ಣನ ಜನ್ಮದಿನ.. ದುಬಾರಿ ಟೊಯೊಟಾ ಇನ್ನೋವಾ ಕಾರನ್ನು ಗಿಫ್ಟ್ ನೀಡಿದ ಯುವ ರಾಜ್‌ಕುಮಾರ್, ಏನಿದರ ವಿಶೇಷತೆ?

ನಟ, ನಿರ್ಮಾಪಕ ರಾಘವೇಂದ್ರ ರಾಜ್‌ಕುಮಾರ್ (Raghavendra Rajkumar), ಇದೇ ಆಗಸ್ಟ್ 15ಕ್ಕೆ 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ತಂದೆ ಡಾ.ರಾಜ್‌ಕುಮಾರ್ ಹಾಗೂ ಅಣ್ಣ ಶಿವರಾಜ್ ರಾಜ್‌ಕುಮಾರ್‌ರಂತೆಯೇ 'ಚಿರಂಜೀವಿ ಸುಧಾಕರ' ಸಿನಿಮಾ ಮೂಲಕ ಬೆಳ್ಳಿ ತೆರೆಗೂ ಪಾದಾರ್ಪಣೆ ಮಾಡಿದರು. ಅವರು ನಟಿಸಿದ್ದ ಗಜಪತಿ ಗರ್ವಭಂಗ ಮತ್ತು ನಂಜುಂಡಿ ಕಲ್ಯಾಣ ಚಿತ್ರಗಳು ಕೂಡ ಪ್ರೇಕ್ಷಕರ ಮನ ಗೆದ್ದವು. ನಂತರದಲ್ಲಿ ತಮ್ಮದೇ ಸಿನಿಮಾ ನಿರ್ಮಾಣ ಸಂಸ್ಥೆಯಾದ 'ವಜ್ರೇಶ್ವರಿ ಕಂಬೈನ್ಸ್'ನ ಜವಾಬ್ದಾರಿಯನ್ನು ವಹಿಸಿಕೊಂಡರು.

ಸದ್ಯ, ಹುಟ್ಟುಹಬ್ಬದ ಸಂದರ್ಭದಲ್ಲಿ ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಪುತ್ರ ಯುವ ರಾಜ್‌ಕುಮಾರ್ (Yuva Rajkumar) ದುಬಾರಿ ಬೆಲೆಯ 'ಟೊಯೊಟಾ ಇನ್ನೋವಾ' ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ಒಂದಷ್ಟು ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲೂ ಹರಿದಾಡುತ್ತಿವೆ. ಈಚೆಗೆ ಯುವ ನಟನೆಯ 'ಎಕ್ಕ' ಸಿನಿಮಾ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು.

Actor Yuva Rajkumar Gifted new Toyota Innova Hycross For His Father Raghavendra Rajkumar Details

ಈ ಪೋಸ್ಟ್‌ಗಳನ್ನು ಗಮನಿಸಿದಾಗ ಹೊಚ್ಚ ಹೊಸ ಕಾರು ಟೊಯೊಟಾ ಇನ್ನೋವಾದ 'ಹೈಕ್ರಾಸ್' ಮಾಡೆಲ್ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಆದರೆ, ಅದು ಯಾವ ರೂಪಾಂತರ (ವೇರಿಯೆಂಟ್) ಹಾಗೂ ಆಸನಗಳು ಎಷ್ಟಿವೆ ಎಂಬುದರ ಕುರಿತಂತೆ ಯಾವುದೇ ವಿವರಗಳು ತಿಳಿದುಬಂದಿಲ್ಲ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ವಿಶೇಷತೆಗಳೇನು:

ಇದೊಂದು ಎಂಪಿವಿಯಾಗಿದೆ. ಕನಿಷ್ಠ ರೂ.19.20 ಲಕ್ಷ ಹಾಗೂ ಗರಿಷ್ಠ ರೂ.32.58 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಒಳಗೊಂಡಿದೆ. ಜಿಎಕ್ಸ್, ಜಿಎಕ್ಸ್ (ಒ), ವಿಎಕ್ಸ್, ವಿಎಕ್ಸ್ (ಒ), ಜಡ್ಎಕ್ಸ್ & ಜಡ್ಎಕ್ಸ್ (ಒ) ಎಂಬ ಆಕರ್ಷಕವಾದ ರೂಪಾಂತರಗಳೊಂದಿಗೂ ದೊರೆಯುತ್ತದೆ.

Actor Yuva Rajkumar Gifted new Toyota Innova Hycross For His Father Raghavendra Rajkumar Details

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಅದು ನೋಡುಗರ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಅಟಿಟ್ಯೂಡ್ ಬ್ಲ್ಯಾಕ್ ಮೈಕಾ, ಪ್ಲಾಟಿನಂ ವೈಟ್ ಪರ್ಲ್ ಹಾಗೂ ಸಿಲ್ವರ್ ಮೆಟಾಲಿಕ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ ಹೈಕ್ರಾಸ್ ಎಂಪಿವಿ 7/8 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 300 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 4755 ಎಂಎಂ ಉದ್ದ, 1845 ಎಂಎಂ ಅಗಲ ಮತ್ತು 1795 ಎಂಎಂ ಎತ್ತರವಿದೆ. 2850 ಎಂಎಂ ವೀಲ್‌ಬೇಸ್‌ನ್ನು ಹೊಂದಿದ್ದು, 1730 ಕೆಜಿ ತೂಕವನ್ನು ಒಳಗೊಂಡಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 2.0-ಲೀಟರ್ ಹೈಬ್ರಿಡ್ (ಎಲೆಕ್ಟ್ರಿಕ್+ಪೆಟ್ರೋಲ್) ಎಂಜಿನ್‌ನ್ನು ಪಡೆದಿದೆ. ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 16 ರಿಂದ 23 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 52 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಪವರ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಡುಯಲ್-ಜೋನ್ ಆಟೋ ಎಸಿ ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ ಹೈಕ್ರಾಸ್ ಎಂಪಿವಿಯು ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಸೀಟ್‌ಬೆಲ್ಟ್ ರಿಮೆಂಡರ್ಸ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Friday, August 22, 2025, 11:14 [IST]
English summary
Actor yuva rajkumar gifted new toyota innova hycross for his father raghavendra rajkumar details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+