ಹಾರ್ದಿಕ್ ಪಾಂಡ್ಯ ಜೊತೆ ಸಂಬಂಧದ ರೂಮರ್ಸ್ ನಡುವೆ ದುಬಾರಿ ಬೆಲೆಯ ಕಾರು ಖರೀದಿಸಿದ ಬಾಲಿವುಡ್ ನಟಿ
ಸಿನಿಮಾ ನಟರು ಮಾತ್ರವಲ್ಲದೇ ನಟಿಯರು ಕೂಡ ಕಾರುಗಳ ಮೇಲೆ ಕ್ರೇಜ್ ಹೊಂದಿದ್ದಾರೆ. ಅದರಲ್ಲೂ ಬಾಲಿವುಡ್ ಸಿನಿಮಾರಂಗ ಕಲರ್ ಫುಲ್ ದುನಿಯಾದ ನಟಿಯರು ಐಷಾರಾಮಿ ಕಾರುಗಳ ಕ್ರೇಜ್ ಹೊಂದಿದ್ದಾರೆ. ಬಾಲಿವುಡ್ ನಟಿಯರು ತಾವು ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಓಡಾಡಲು ಇಷ್ಟ ಪಡುತ್ತಾರೆ. ಅದರಲ್ಲೂ ಜನಪ್ರಿಯ ಬಾಲಿವುಡ್ ನಟಿ, ಚಂಕಿ ಪಾಂಡೆಯ ಮಗಳು ಅನನ್ಯಾ ಪಾಂಡೆ (Ananya Pandey) ಅವರು ಹೊಚ್ಚಹೊಸ ರೇಂಜ್ ರೋವರ್ ಎಸ್‍ಯುವಿಯನ್ನು ಖರೀದಿಸಿ ಸುದ್ದಿಯಾಗಿದ್ದಾರೆ. ಅನನ್ಯಾ ಪಾಂಡೆ ಅವರು ಖರೀದಿಸಿದ ರೇಂಜ್ ರೋವರ್ ಬೆಲೆಯು ಸುಮಾರು 2.7 ಕೋಟಿ ರೂ. ಆಗಿದೆ.
ಇತ್ತೀಚೆಗೆ ಅದ್ದೂರಿಯಾಗಿ ನಡೆದ ಅನಂತ್ ಅಂಬಾನಿ ಮದುವೆಯಲ್ಲಿ ಹಾರ್ದಿಕ್ ಪಾಂಡ್ಯ ಜೊತೆ ಅನನ್ಯಾ ಪಾಂಡೆ ಜೊತೆ ಡ್ಯಾನ್ಸ್ ಮಾಡಿದ್ದರು ಇಬ್ಬರು ಕಣ್ಣಲ್ಲೇ ಸನ್ನೆ ಮಾಡ್ತಾ ಡ್ಯಾನ್ಸ್ ಮಾಡ್ತಿದ್ದ ವಿಡಿಯೋ ವೈರಲ್ ಆಗಿತ್ತು. ಇಬ್ಬರ ಫ್ರೆಂಡ್ ಶಿಪ್ ನೋಡಿದ ನೆಟ್ಟಿಗರು ಹಾರ್ದಿಕ್ ಪಾಂಡ್ಯ, ಅನನ್ಯಾ ಪಾಂಡೆ ಜೊತೆ ಕ್ಲೋಸ್ ಆಗ್ತಿದ್ದಾರೆ ಎಂದು ಕಮೆಂಟ್ ಮಾಡ್ತಿದ್ದಾರೆ. ಅಲ್ಲದೇ ಅನನ್ಯಾ ಪಾಂಡೆ ಅವರನ್ನು ಹಾರ್ದಿಕ್ ಪಾಂಡ್ಯ ಇನ್ಸ್ಟಾಗ್ರಾಮ್ನಲ್ಲಿ ಫಾಲೋ ಮಾಡಿ ಸುದ್ದಿ ಆಗಿದ್ದರು.

ಈ ಬಾಲಿವುಡ್ ನಟಿ ಅನನ್ಯ ಪಾಂಡೆ ಮತ್ತು ಅವರ ಹೊಸ ರೇಂಜ್ ರೋವರ್ ಅನ್ನು ತೋರಿಸುವ ವೀಡಿಯೊವನ್ನು ಇದು ಕಾರ್ಸ್ ಫಾರ್ ಯೂ ಯೂಟ್ಯೂಬ್‌ನಲ್ಲಿ ಹಂಚಿಕೊಳ್ಳಲಾಗಿದೆ. ಈ ರೇಂಜ್ ರೋವರ್ ಎಸ್‍ಯುವಿಯ ಹೊಸ ಗ್ರಿಲ್ ಮತ್ತು ಹೆಡ್‌ಲ್ಯಾಂಪ್‌ನೊಂದಿಗೆ ಇದು ಹೆಚ್ಚು ಹೊಳಪು ತೋರುತ್ತಿದೆ. ಈ ರೇಂಜ್ ರೋವರ್ ಎಸ್‍ಯುವಿಯಲ್ಲಿ ಸಮತಟ್ಟಾದ ಮೇಲ್ಮೈಗಳು ಕೇವಲ 0.30 ಸಿಡಿಯ ಪ್ರಭಾವಶಾಲಿ ಡ್ರ್ಯಾಗ್ ಅಂಶವವನ್ನು ಒಳಗೊಂಡಿದೆ.
ಈ ರೇಂಜ್ ರೋವರ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ 13.7-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇನ್ನು ಸೆಂಟರ್ ಕನ್ಸೋಲ್ ದೊಡ್ಡ 13.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇ ಹ್ಯಾಪ್ಟಿಕ್ ಪ್ರತಿಕ್ರಿಯೆಯೊಂದಿಗೆ ಹೊಂದಿದೆ. ಇದು ಗೊಂದಲ-ಮುಕ್ತ ವಿನ್ಯಾಸವಾಗಿದೆ ಮತ್ತು ವಿನ್ಯಾಸದ ವಿಷಯದಲ್ಲಿ ಬಹಳ ಪರಿಚಿತವಾಗಿದೆ. ಇನ್ನು ಹಿಂಭಾಗದಲ್ಲಿ ಪ್ರಯಾಣಿಕರು 11.4-ಇಂಚಿನ ಮನರಂಜನಾ ಡಿಸ್ ಪ್ಲೇಯನ್ನು ಪಡೆಯುತ್ತಾರೆ.

ಇದನ್ನು ಮುಂಭಾಗದ ಸೀಟ್‌ಬ್ಯಾಕ್‌ಗಳಿಗೆ ಜೋಡಿಸಲಾಗಿದೆ. ಇನ್ನು ಎಕ್ಸಿಕ್ಯುಟಿವ್ ಕ್ಲಾಸ್ ಹಿಂಬದಿಯ ಸೀಟುಗಳೊಂದಿಗೆ, ಸೆಂಟರ್ ಆರ್ಮ್‌ರೆಸ್ಟ್‌ನಲ್ಲಿ 8.0-ಇಂಚಿನ ಟಚ್‌ಸ್ಕ್ರೀನ್ ಕೂಡ ಇದೆ, ಇದರೊಂದಿಗೆ ನ್ಯೂ ಜನರೇಷನ್ ರೇಂಜ್ ರೋವರ್ 1600-ವ್ಯಾಟ್, 35-ಸ್ಪೀಕರ್ ಮೆರಿಡಿಯನ್ ಸಿಗ್ನೇಚರ್ ಸೌಂಡ್ ಸಿಸ್ಟಂ ಅನ್ನು ಸಹ ಪಡೆಯುತ್ತದೆ. ಆದರೆ ಆಟೋಬಯೋಗ್ರಫಿ ಟ್ರಿಮ್ ಹೆಡ್‌ರೆಸ್ಟ್‌ನಲ್ಲಿ ಎಂಬೆಡ್ ಮಾಡಲಾದ ವಿಶ್ವದ ಮೊದಲ ಆಕ್ಟಿವ್ ಸ್ಪೀಕರ್‌ಗಳನ್ನು ಹೊಂದಿದೆ.
ರೇಂಜ್ ರೋವರ್ ಕ್ಯಾಬಿನ್‌ನಲ್ಲಿ ಹೆಚ್ಚು ಸಮರ್ಥನೀಯ ಐಷಾರಾಮಿ ವಸ್ತುಗಳನ್ನು ಬಳಸುತ್ತದೆ.ಹೊಸ ರೇಂಜ್ ರೋವರ್ ಎಸ್‍ಯುವಿಯು ಹೊಸ ಐದು-ಲಿಂಕ್ ಹಿಂಬದಿಯ ಆಕ್ಸಲ್‌ನೊಂದಿಗೆ ಅಡಾಪ್ಟಿವ್ ಏರ್ ಸಸ್ಪೆಂಕ್ಷನ್ ಅನ್ನು ಹೊಂದಿದೆ. ಇದು ನ್ಯಾವಿಗೇಷನ್ ಸಿಸ್ಟಂ ಅನ್ನು ಮುಂದಿನ ರಸ್ತೆಗೆ ಅನುಗುಣವಾಗಿ ಹೊಂದಿಸಲು ಬಳಸುತ್ತದೆ. ಈ ಯುನಿಟ್ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಮತ್ತು ರೈಡ್ ಗುಣಮಟ್ಟವನ್ನು ಮತ್ತಷ್ಟು ಸುಗಮಗೊಳಿಸಲು ಸ್ಟೀರಿಂಗ್ ಅಸಿಸ್ಟ್ ಅನ್ನು ಸಹ ನಿರ್ವಹಿಸುತ್ತದೆ.
ಈ ಎಸ್‍ಯುವಿಯ ನಿಯಂತ್ರಿತ ಆ್ಯಂಟಿ-ರೋಲ್ ಬಾರ್‌ಗಳನ್ನು ಸಹ ಪಡೆಯುತ್ತದೆ, ಅದು ಈಗ ವೇಗವಾದ ರೆಸ್ಪಾನ್ಸ್ ಹೊಂದಿದೆ. ಈ ಐದನೇ ತಲೆಮಾರಿನ ರೇಂಜ್ ರೋವರ್ ಆಲ್-ವ್ಹೀಲ್ ಸ್ಟೀರಿಂಗ್ ಅನ್ನು ಹೊಂದಿದೆ, ಇದು ಹಿಂದಿನ ಚಕ್ರಗಳನ್ನು 7.3 ಡಿಗ್ರಿಗಳವರೆಗೆ ಎಲೆಕ್ಟ್ರಿಕಲ್ ಆಗಿ ಚಲಿಸುತ್ತದೆ. ವಿಶೇಷವಾಗಿ ಬಿಗಿಯಾದ ಸ್ಥಳಗಳಲ್ಲಿ ಮತ್ತು ಟರ್ನಿಂಗ್ ವೇಳೆ 11 ಮೀಟರ್‌ಗಿಂತಲೂ ಕಡಿಮೆಗೊಳಿಸುತ್ತದೆ.
ರೇಂಜ್ ರೋವರ್ ಎಸ್‍ಯುವಿಯ ನೈಟ್‌ಶಿಫ್ಟ್ ಮೋಡ್‌ನೊಂದಿಗೆ 360-ಡಿಗ್ರಿ ಕ್ಯಾಮೆರಾವನ್ನು ಮತ್ತು ಆ್ಯಪ್-ಆಧಾರಿತ ಪಾರ್ಕಿಂಗ್ ವೈಶಿಷ್ಟ್ಯವನ್ನು ಸಹ ಪಡೆಯುತ್ತದೆ,. ರೇಂಜ್ ರೋವರ್ ಎಸ್‍ಯುವಿಯಲ್ಲಿ 3 ಎಂಜಿನ್ ಆಯ್ಕೆಗಳಲ್ಲಿ ನೀಡಲಾಗಿದೆ. ಇದು 3.0-ಲೀಟರ್ ಪೆಟ್ರೋಲ್ ಮೈಲ್ಡ್-ಹೈಬ್ರಿಡ್, 3.0-ಲೀಟರ್ ಟರ್ಬೊ-ಡೀಸೆಲ್ ಮತ್ತು 4.4-ಲೀಟರ್ ಟ್ವಿನ್-ಟರ್ಬೊ ವಿ8 ಎಂಜಿನ್ ಗಳಾಗಿವೆ.
ಇದರಲ್ಲಿ 3.0-ಲೀಟರ್ ಪೆಟ್ರೋಲ್ ಮೈಲ್ಡ್-ಹೈಬ್ರಿಡ್ 394 ಬಿಹೆಚ್‍ಪಿ ಪವರ್ ಮತ್ತು 550 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಟರ್ಬೊ-ಡೀಸೆಲ್ ಎಂಜಿನ್ 346 ಬಿಹೆಚ್‍ಪಿ ಪವರ್ ಮತ್ತು 700 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, ಟ್ವಿನ್-ಟರ್ಬೊ ವಿ8 ಎಂಜಿನ್ 523 ಬಿಹೆಚ್‍ಪಿ ಪವರ್ ಮತ್ತು 750 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಸ್‍ಯುವಿಯು 5.3 ಸೆಕೆಂಡ್‌ಗಳಲ್ಲಿ 0-100 ವೇಗವನ್ನು ಪಡೆದುಕೊಳ್ಳುತ್ತದೆ.


Click it and Unblock the Notifications








