ಬಿಜೆಪಿ ಸೇರಿದ ಬಳಿಕ ಐಷಾರಾಮಿ ಕಾರು ಖರೀದಿಸಿದ ನಟ ಕಂಗನಾ ರಣಾವತ್: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
ಸಿನಿಮಾ ಸುದ್ದಿಗಳಿಗೆ ಹೊರತಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಸುದ್ದಿಯಲ್ಲಿರಲು ಬಯಸುತ್ತಾರೆ. ಅದರಲ್ಲೂ ಬಿಜೆಪಿ ಪಕ್ಷ ಸೇರಿದ ಬಳಿಕ ನಟಿ ಕಂಗನಾ ರಣಾವತ್ ಸಖತ್ ಸುದ್ದಿಯಲ್ಲಿದ್ದಾರೆ. ಲೋಕಸಭಾ ಚುನಾವಣೆಗೆ ಧುಮುಕಿರುವ ನಟಿ ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಈಗಾಗಲೇ ಪ್ರಚಾರ ನಡೆಸುತ್ತಿದ್ದಾರೆ.
ಬಿಜೆಪಿ ಸೇರಿ ಚುನಾವಣೆ ಪ್ರಚಾರ ನಡೆಸುತ್ತಿರು ಕಂಗನಾ ಇದೀಗ ಹೊಚ್ಚ ಹೊಸ ಮರ್ಸಿಡಿಸ್ ಮೇಬ್ಯಾಕ್ GLS600 (Mercedes Maybach GLS600) ಕಾರು ಖರೀದಿಸಿದ್ದಾರೆ. ತಮ್ಮ ಹೊಸ ಕಾರಿನಲ್ಲಿ ಕಾಣಿಸಿಕೊಂಡಿರುವ ವೀಡಿಯೊವನ್ನು ಯೋಗೇನ್ ಶಾ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ಕಂಗನಾ ರಣಾವತ್ ಮುಂಬೈನ ಸಲೂನ್‌ನಿಂದ ಹೊರಬರುವುದನ್ನು ನಾವು ನೋಡುತ್ತೇವೆ. ನಟಿ ಬಿಳಿ ಬಣ್ಣದ ಮರ್ಸಿಡಿಸ್ ಬೆಂಝ್ GLS600 ಎಸ್‍ಯುವಿಯನ್ನು ಹೊಂದಿದ್ದಾರೆ.

ಮರ್ಸಿಡಿಸ್ ಬೆಂಝ್ GLS600 ಪ್ರಸ್ತುತ ದೇಶದಲ್ಲಿ ಮಾರಾಟವಾಗುತ್ತಿರುವ ಅತ್ಯಂತ ದುಬಾರಿ ಮೇಬ್ಯಾಕ್ ಎಸ್‍ಯುವಿಯಾಗಿದೆ. ಇದು ಭಾರತದ ಮೊದಲ ಮೇಬ್ಯಾಕ್ ಎಸ್‌ಯುವಿಯಾಗಿದೆ. ಈ ಮರ್ಸಿಡಿಸ್ ಬೆಂಝ್ GLS600 ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.2.96 ಕೋಟಿಯಾಗಿದ್ದರೆ, ಆನ್ ರೋಡ್ ಬೆಲೆಯು ರೂ.3.50 ಕೋಟಿಯಾಗಿದೆ. ನಟಿ ಬಹುಕೋಟಿ ಮೌಲ್ಯದ ಐಷಾರಾಮಿ ಕಾರಿನ ಒಡತಿ.
ನಟಿ ಕಂಗನಾ ಬಳಿ ಈಗಾಗಲೇ ಹಲವಾರು ಐಷಾರಾಮಿ ಕಾರುಗಳಿದೆ. ನಟ ಕಂಗನಾ ರಣಾವತ್ ಅವರು ಈ ಮೊದಲೇ ಮೇಬ್ಯಾಕ್ ಮಾಡೆಲ್ ಅನ್ನು ಹೊಂದಿದ್ದಾರೆ. ಇದು ಎರಡನೇ ಮೇಬ್ಯಾಕ್ ಮಾಡೆಲ್ ಎಂಬುದು ಕೂಡ ಗಮನಾರ್ಹ. ಸುಮಾರು 2.96 ಕೋಟಿ ಮೌಲ್ಯದ ಮರ್ಸಿಡಿಸ್ ಮೇಬ್ಯಾಕ್ GLS 600 4MATIC ಕಾರನ್ನು ಕಂಗನಾ ಅವರ ನಿರ್ಮಾಣ ಕಂಪನಿ ಮಣಿಕರ್ಣಿಕಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಅಡಿಯಲ್ಲಿ ನೋಂದಾಯಿಸಲಾಗಿದೆ.

ಇದೀಗ ನಟಿ ಹೊಸ ಕಾರು ಖರೀದಿಸಿದ್ದು, ದುಬಾರಿ ಕಾರಿನಲ್ಲಿ ಕಂಗನಾ ರೌಂಡ್ಸ್ ಹಾಕ್ತಿದ್ದಾರೆ. ಈ ಹೊಸ ಮರ್ಸಿಡಿಸ್ ಬೆಂಝ್ GLS600 ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಈ ಎಸ್‍ಯುವಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಸರಣಿ ಕಾರುಗಳಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಇದು ಸುಧಾರಿತ ತಂತ್ರಜ್ಞಾನ ಮತ್ತು ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿದೆ. ಈ ಎಸ್‍ಯುವಿಯ ಒಟ್ಟಾರೆ ವಿನ್ಯಾಸವು ಐಷಾರಾಮಿ ಮತ್ತು ಪ್ರೀಮಿಯಂ ಆಗಿದೆ.
ಈ ಕಾರಿನಲ್ಲಿ ಬಳಸಲಾಗಿರುವ ಲೆದರ್ ಕೂಡಾ ಮೇಬ್ಯಾಕ್ ಎಕ್ಸ್‌ಕ್ಲೂಸಿವ್ ನಪ್ಪಾ ಲೆದರ್ ಮಾದರಿಯಾಗಿದೆ. ಇದರೊಂದಿಗೆ ಹೊಸ ಕಾರಿನಲ್ಲಿ ಕೇವಲ ನಾಲ್ಕು ಆಸನಗಳ ಸೌಲಭ್ಯವಿದೆ. ವಿಸ್ತರಿತವಾಗಿ ಸೆಂಟರ್ ಕನ್ಸೊಲ್ ಹಿಂಬದಿಯ ಸವಾರಿಗೆ ಹೆಚ್ಚಿನ ಮಟ್ಟದ ಸವಾರಿ ಅನುಭವ ನೀಡಲು ಇದನ್ನು ಅಭಿವೃದ್ದಿಗೊಳಿಸಲಾಗಿದೆ. ಇದರೊಂದಿಗೆ ಹೊಸ ಕಾರಿನಲ್ಲಿ ಅಡಾಪ್ಟಿವ್ ಡಿಜಿಟಲ್ ಎಲ್ಇಡಿ ಹೆಡ್‌ಲೈಟ್ಸ್, ಹಿಂತೆಗೆದುಕೊಳ್ಳಬಹುದಾದ ಡೋರ್ ಹ್ಯಾಂಡಲ್, ಫಿಂಗರ್‌ಪ್ರಿಂಟ್ ರೀಡರ್ ಮತ್ತು ಪನೋರಮಿಕ್ ಸನ್‌ರೂಫ್ ಹೊಂದಿದೆ.

ಇದರಲ್ಲಿ ದೊಡ್ಡದಾದ ವರ್ಟಿಕಲ್ ಸ್ಲ್ಯಾಟ್ ಗ್ರಿಲ್, ವಿಂಡೋ ಲೈನ್, ಸೈಡ್-ಸ್ಟೆಪ್, ಮುಂಭಾಗ ಮತ್ತು ಹಿಂಭಾಗದ ಬಂಪರ್‌ಗಳಲ್ಲಿ ಡಿಸೈನ್ ಆಕ್ಸೆಂಟ್, ರೂಫ್ ರೈಲ್ಸ್ ಮತ್ತು ಸ್ಪೋರ್ಟಿ ಎಕ್ಸಾಸ್ ನೋಟ್ ಹೊಂದಿದೆ. ಈ Mercedes Maybach GLS600 ಕಾರಿ ಹಿಂಭಾಗದಲ್ಲಿ ಫೋರ್ಡರ್‌ಗಳಲ್ಲಿ ರೆಫ್ರಿಜರೇಟರ್ ಅನ್ನು ಸಹ ಒಳಗೊಂಡಿದೆ. ಈ ಐಷಾರಾಮಿ ಎಸ್‍ಯುವಿಯಲ್ಲಿ 4.0 ಲೀಟರ್ ವಿ8 ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.
ಈ ಎಂಜಿನ್ 9 ಜಿ-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 542 ಬಿಎಚ್‌ಪಿ ಮತ್ತು 730ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ ಹೊಸ ಎಂಜಿನ್‌ನಲ್ಲಿ 21ಬಿಎಚ್‌ಪಿ ಮತ್ತು 249ಎನ್ಎಂ ಟಾರ್ಕ್ ಕೊಡುಗೆ ನೀಡುವ ಸಂಯೋಜಿತ ಇಕ್ಯೂ ಬೂಸ್ಟ್ ಸ್ಟಾರ್ಟರ್-ಜನರೇಟರ್ ಅನ್ನು ಸಹ ಹೊಂದಿದೆ. ಈ ಎಸ್‍ಯುವಿಯು 250 ಕಿ.ಮೀ ಟಾಪ್ ಸ್ಪೀಡ್ ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications