ಚೀನಾ ಮೂಲದ ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ಜನಪ್ರಿಯ ನಟಿ!
ಭಾರತದಲ್ಲಿ ಇತ್ತೀಚೆಗೆ ಚೀನಾ ಮೂಲದ ಜನಪ್ರಿಯ ಎಂಜಿ ಮೋಟಾರ್ ಕಾರುಗಳು ಭಾರೀ ಜನಪ್ರಿಯತೆ ಪಡೆಯುತ್ತಿವೆ. ಅದರಲ್ಲೂ ಪ್ರಮುಖವಾಗಿ ಸೆಲೆಬ್ರಿಟಿಗಳು ಪುಟ್ಟ ಎಂಜಿ ಕಾಮೆಟ್ ಇವಿ ಕಾರನ್ನು ಖರೀದಿಸುವ ಮೂಲಕ ಇದಕ್ಕೆ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತಿದೆ. ಅಂದಹಾಗೆ ಈ ಸಣ್ಣ ಎಲೆಕ್ಟ್ರಿಕ್ ಕಾರನ್ನು ಜನಪ್ರಿಯ ನಟಿ 'ಕೀರ್ತಿ ಕುಲ್ಹಾರಿ' ಇತ್ತೀಚೆಗೆ ಖರೀದಿಸಿದ್ದಾರೆ. ನಟಿ ತಮ್ಮ ಹೊಸ ಎಂಜಿ ಕಾಮೆಟ್ ಇವಿಯನ್ನು ಕುಟುಂಬ ಮತ್ತು ನಾಯಿಗಳೊಂದಿಗೆ ಡೆಲಿವರಿ ತೆಗೆದುಕೊಳ್ಳುವ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಬಾಲಿವುಡ್ ನಟಿ ಕೀರ್ತಿ ಕುಲ್ಹಾರಿ 'ಪಿಂಕ್', 'ದ ಸರ್ಜಿಕಲ್ ಸ್ಟ್ರೈಕ್', 'ಮಿಷನ್ ಮಂಗಲ್' ನಂತಹ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ದುಬಾರಿ ನಟಿ ಈಗ ಸಿಂಪಲ್ ಆಗಿ 10 ಲಕ್ಷದೊಳಗಿನ ಎಲೆಕ್ಟ್ರಿಕ್ ಕಾರು ಖರೀದಿಸಿರುವುದು ಎಲ್ಲರನ್ನು ಅಚ್ಚರಿಗೊಳಿಸಿದೆ. ಎಂಜಿ ಕಾಮೆಟ್ ಡೆಲಿವರಿ ಪಡೆದ ಚಿತ್ರಗಳು ಮತ್ತು ವೀಡಿಯೊಗಳನ್ನು ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೇಕ್ ಕತ್ತರಿಸಿ ತನ್ನ ಕುಟುಂಬ ಮತ್ತು ಹೊಸ ಕಾರಿನೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದ್ದಾರೆ. ನಟಿ ಕೀರ್ತಿ ಕುಲ್ಹಾರಿ ಅವರು ಎಂಜಿ ಕಾಮೆಟ್‌ನ ಟಾಪ್-ಸ್ಪೆಕ್ ವೇರಿಯೆಂಟ್‌ನಲ್ಲಿ ಅರೋರಾ ಸಿಲ್ವರ್ ಬಣ್ಣದ ಕಾರನ್ನು ಖರೀದಿಸಿದ್ದಾರೆ. ಈ ನಿರ್ದಿಷ್ಟ ವೇರಿಯೆಂಟ್ ಬೆಲೆಯು ರೂ.9.36 ಲಕ್ಷಗಳಾಗಿದೆ. ಎಂಜಿ ಕಾಮೆಟ್ ಇವಿ ಆರಂಭಿಕ ಬೆಲೆಯು 6.98 ಲಕ್ಷ ರೂ. ಇದೆ.
ಎಂಜಿ ಕಾಮೆಟ್ ವಿಶೇಷತೆಗಳು: ಈ ಕಾರು, ಪೇಸ್ (Pace), ಪ್ಲೇ (Play) ಮತ್ತು ಪ್ಲಸ್ (Plus) ಎಂಬ 3 ರೂಪಾಂತರದ ಆಯ್ಕೆಯಲ್ಲಿ ದೊರೆಯುತ್ತದೆ. ಕಾಮೆಟ್ ಇವಿ ಅರೋರಾ ಸಿಲ್ವರ್, ಕ್ಯಾಂಡಿ ವೈಟ್ ಸೇರಿದಂತೆ 2 ಡುಯಲ್ ಟೋನ್, 3 ಮೊನೊ ಟೋನ್ ಬಣ್ಣಗಳೊಂದಿಗೆ ದೊರೆಯುತ್ತದೆ. ವಿನ್ಯಾಸದ ದೃಷ್ಟಿಯಿಂದ ಸಹ ಎಂಜಿ ಕಾಮೆಟ್ ಅಕರ್ಷಕವಾಗಿದ್ದು, 4 ಜನ ಪ್ರಯಾಣಿಸಬಹುದು.

ವೈಶಿಷ್ಟ್ಯದ ವಿಚಾರವಾಗಿ ಹೇಳುವುದಾದರೆ, ಎಂಜಿ ಕಾಮೆಟ್ ಇವಿ ಕಾರಿನಲ್ಲಿ ಇನ್ಫೋಟೈನ್‌ಮೆಂಟ್ & ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಗಾಗಿ 10.25 - ಇಂಚಿನ ಸ್ಕ್ರೀನ್ ಸೆಟಪ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀಲೆಸ್ ಎಂಟ್ರಿ, 55ಕ್ಕೂ ಹೆಚ್ಚು ಕನೆಕ್ಟ್ದ್ ಕಾರ್ ಫೀಚರ್ಸ್ ಅನ್ನು ಒಳಗೊಂಡಿದೆ.
ಈ ಕಾರಿನಲ್ಲಿ 17.3 ಕೆಡಬ್ಲ್ಯೂಎಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಬಳಕೆ ಮಾಡಲಾಗಿದ್ದು, ಪೂರ್ತಿ ಚಾರ್ಜ್ ನಲ್ಲಿ 230 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 42 ಪಿಎಸ್ ಮತ್ತು 110 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 3.3 ಕೆಡಬ್ಲ್ಯೂ ಚಾರ್ಜರ್ ಬಳಕೆಯಲ್ಲಿ 7 ಗಂಟೆಗಳಲ್ಲಿ ಕಾಮೆಟ್ ಇವಿ ಚಾರ್ಜ್ ಆಗುತ್ತದೆ.
ಎಂಜಿ ಕಾಮೆಟ್ ಇವಿ ಪುಟ್ಟ ಕಾರು ಆಗಿದ್ದರೂ ಸುರಕ್ಷತೆಯ ದೃಷ್ಟಿಯಿಂದ ಅತ್ಯುತ್ತಮವಾಗಿದ್ದು, ಡುಯಲ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕ್ ಸಿಸ್ಟಮ್), ISOFIX ಚೈಲ್ಡ್ ಸೀಟ್ ಆಂಕರ್ಸ್, ರೇರ್ ಪಾರ್ಕಿಂಗ್ ಕ್ಯಾಮೆರಾ, ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ. ಈ ಕಾರಿಗೆ ಟಾಟಾ ಟಿಯಾಗೊ ಇವಿ ಹಾಗೂ ಸಿಟ್ರಸ್ ಇಸಿ3 ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








