ರೂ.2.43 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿಸಿದ 'ಪರಮ ಸುಂದರಿ’ ಕೃತಿ ಸನೋನ್

ಸೋಷಿಯಲ್ ಮೀಡಿಯಾಗಳಲ್ಲಿ 'ಪರಮ ಸುಂದರಿ' ಹಾಡು ಸಿಕ್ಕಾಪಟ್ಟೆ ಹವಾ ಸೃಷ್ಟಿಸಿದೆ. ಇದು 'ಮಿಮಿ' ಸಿನಿಮಾದ ಜನಪ್ರಿಯ ಹಾಡು ಆಗಿದೆ. ಈ 'ಮಿಮಿ' ಸಿನಿಮಾ ಕೂಡ ಸೂಪರ್​ ಹಿಟ್​ ಆಗಿದೆ. ಇದರಿಂದಾಗಿ 'ಮಿಮಿ' ಸಿನಿಮಾದ ನಟಿ ಕೃತಿ ಸನೋನ್​ ಅವರ ಖ್ಯಾತಿ ಕೂಡ ಹೆಚ್ಚಾಗಿದೆ.

ರೂ.2.43 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿಸಿದ 'ಪರಮ ಸುಂದರಿ’ ಕೃತಿ ಸನೋನ್

ಈ ಬಾಲಿವುಡ್ ನಟಿ ಕೃತಿ ಸನೋನ್ ಹೊಸ ಮರ್ಸಿಡಿಸ್-ಮೇಬ್ಯಾಕ್ ಜಿಎಲ್ಎಸ್ 600 ಕಾರನ್ನು ಖರೀದಿಸಿದ್ದಾರೆ. ಈ ಐಷಾರಾಮಿ ಕಾರಿನ ಬೆಲೆಯು ರೂ,2.43 ಕೋಟಿಯಾಗಿದೆ. ಈ ಐಷಾರಾಮಿ ಮರ್ಸಿಡಿಸ್ ಕಾರು ಕ್ಯಾನಾಸೈಟ್ ಬ್ಲೂ ಶೇಡ್ ಬಣ್ಣವನ್ನು ಹೊಂದಿದೆ. ಇನ್ನು ಬಾಲಿವುಡ್ ನಟ ಅರ್ಜುನ್ ಕಪೂರ್ ಕೂಡ ಇತ್ತೀಚೆಗಷ್ಟೇ ಇದೇ ಕಾರನ್ನು ಖರೀದಿ ಮಾಡಿದ್ದರು. ಇನ್ನು ಕೆಲವು ದಿನಗಳ ಹಿಂದೆ ಇನ್ನೊಬ್ಬ ಬಾಲಿವುಡ್ ನಟ ರಣ್‌ವೀರ್ ಸಿಂಗ್ ಕೂಡ ಇದೇ ವರ್ಷ ಇದೇ ಮರ್ಸಿಡಿಸ್-ಮೇಬ್ಯಾಕ್ ಜಿಎಲ್ಎಸ್ 600 ಕಾರನ್ನು ಖರೀದಿ ಮಾಡಿದ್ದರು.

ರೂ.2.43 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿಸಿದ 'ಪರಮ ಸುಂದರಿ’ ಕೃತಿ ಸನೋನ್

2014ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಕೃತಿ ಸನೋನ್​ ಅವರು ಮಹೇಶ್​ ಬಾಬು ನಟನೆಯ ತೆಲುಗು ‘ನೇನೊಕ್ಕಡಿನೆ' ಸಿನಿಮಾದಲ್ಲಿ ಮೊದಲು ನಟಿಸಿದ್ದರು. ನಂತರ ನೇರವಾಗಿ ಬಾಲಿವುಡ್​ಗೆ ಎಂಟ್ರಿಯಾದರು. ಬಾಲಿವುಡ್ ನಲ್ಲಿ ಹೀರೋಪಂಥಿ' ಸಿನಿಮಾದಲ್ಲಿ ನಟ ಟೈಗರ್​ ಶ್ರಾಫ್​ ನಾಯಕಿಯಾಗಿ ಅಭಿನಯಿಸಿದ್ದರು.

ರೂ.2.43 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿಸಿದ 'ಪರಮ ಸುಂದರಿ’ ಕೃತಿ ಸನೋನ್

ನಂತರ ಬಾಲಿವುಡ್ ನಲ್ಲೇ ‘ಬರೇಲಿ ಕಿ ಬರ್ಫಿ', ‘ಲುಕಾ ಚುಪ್ಪಿ', ‘ಹೌಸ್​ಫುಲ್​ 4' ಸಿನಿಮಾಗಳಲ್ಲಿ ನಟಿಸಿದ್ದರು. ಈ ನಡುವೆ ಈ ವರ್ಷ ನೆಟ್​ಫ್ಲಿಕ್ಸ್​ನಲ್ಲಿ ತೆರೆಕಂಡ ಕೃತಿ ಸನೋನ್​ ಅವರ 'ಮಿಮಿ' ಸಿನಿಮಾ ಸೂಪರ್​ ಹಿಟ್​ ಆಗಿದೆ. ಬಾಲಿವುಡ್​ನಲ್ಲಿ ಮಿಂಚುತ್ತಿರುವ ಕೃತಿ ಸನೋನ್​ ಸಂಭಾವನೆಯನ್ನು ಹೆಚ್ಚು ಮಾಡಿದ್ದಾರೆ,

ರೂ.2.43 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿಸಿದ 'ಪರಮ ಸುಂದರಿ’ ಕೃತಿ ಸನೋನ್

ಸದ್ಯ ‘ಮಿಮಿ' ಸಕ್ಸಸ್ ನಲ್ಲಿರುವ ನಟಿ ಕೃತಿ ಸನೊನ್ ಕೈಯಲ್ಲಿ ‘ಹಮ್ ದೋ ಹಮಾರೇ ದೋ', ‘ಬಚ್ಚನ್ ಪಾಂಡೆ' ಮತ್ತು ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ ನಟಿಸುತ್ತಿರುವ ‘ಆದಿಪುರುಷ್' ಮುಂತಾದ ಚಿತ್ರಗಳಿವೆ. ಟಾಲಿವುಡ್ ಹಾಗೂ ಬಾಲಿವುಡ್‌ನಲ್ಲಿ ಕೃತಿ ಸನೊನ್ ಬಹುಬೇಡಿಕೆ ನಟಿಯಾಗಿದ್ದಾರೆ.

ರೂ.2.43 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿಸಿದ 'ಪರಮ ಸುಂದರಿ’ ಕೃತಿ ಸನೋನ್

ಇನ್ನು ನಟಿ ಕೃತಿ ಸನೋನ್​ ಖರೀದಿಸಿದ ಮರ್ಸಿಡಿಸ್-ಮೇಬ್ಯಾಕ್ ಜಿಎಲ್ಎಸ್ 600 ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಈ ಐಷಾರಾಮಿ ಎಸ್‌ಯುವಿ 2021ಕ್ಕೆ ಕೇವಲ 50 ಯೂನಿಟ್‌ಗಳನ್ನು ನಿಗದಿಪಡಿಸಲಾಗಿದೆ. 2022 ಲ್ಲಿ ನಿಗದಿಯಾಗಿದ್ದ ಯುನಿಟ್ ಗಳಿಗಾಗಿ ಮರ್ಸಿಡಿಸ್ ಬೆಂಝ್ ಕಂಪನಿಯು ಎರಡನೇ ಹಂತದ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ. ಇನ್ನು ಈ ಐಷಾರಾಮಿ ಎಸ್‌ಯುವಿ ಮಾದರಿಯು 4 ಮ್ಯಾಟಿಕ್ ಎನ್ನುವ ಒಂದೇ ಒಂದು ವೆರಿಯೆಂಟ್ ಹೊಂದಿದೆ.

ರೂ.2.43 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿಸಿದ 'ಪರಮ ಸುಂದರಿ’ ಕೃತಿ ಸನೋನ್

ಗ್ರಾಹಕರ ಬೇಡಿಕೆಯೆಂತೆ 4 ಸೀಟರ್ ಅಥವಾ 5 ಸೀಟರ್ ಮಾದರಿಯೊಂದಿಗೆ ಖರೀದಿ ಮಾಡಬಹುದಾಗಿದೆ. ಇನ್ನು ಈ ಮರ್ಸಿಡಿಸ್-ಮೇಬ್ಯಾಕ್ ಜಿಎಲ್ಎಸ್ 600 ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಸರಣಿ ಕಾರುಗಳಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಸುಧಾರಿತ ತಂತ್ರಜ್ಞಾನ ಮತ್ತು ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿದೆ. ಇದರ ಒಳಗೆ ಮತ್ತು ಹೊರಗೆ ಬೆಸ್ಪೋಕ್ ವೈಶಿಷ್ಟ್ಯಗಳನ್ನು ಹೊಂದಿದೆ.

ರೂ.2.43 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿಸಿದ 'ಪರಮ ಸುಂದರಿ’ ಕೃತಿ ಸನೋನ್

ಈ ಎಸ್‍ಯುವಿಯ ಒಟ್ಟಾರೆ ವಿನ್ಯಾಸವು ಐಷಾರಾಮಿ ಮತ್ತು ಪ್ರೀಮಿಯಂ ಆಗಿದೆ. ಇದರಲ್ಲಿ ದೊಡ್ಡದಾದ ವರ್ಟಿಕಲ್ ಸ್ಲ್ಯಾಟ್ ಗ್ರಿಲ್, ವಿಂಡೋ ಲೈನ್, ಸೈಡ್-ಸ್ಟೆಪ್, ಮುಂಭಾಗ ಮತ್ತು ಹಿಂಭಾಗದ ಬಂಪರ್‌ಗಳಲ್ಲಿ ಡಿಸೈನ್ ಆಕ್ಸೆಂಟ್, ರೂಫ್ ರೈಲ್ಸ್ ಮತ್ತು ಸ್ಪೋರ್ಟಿ ಎಕ್ಸಾಸ್ ನೋಟ್ ಹೊಂದಿದೆ.ಪ್ರೀಮಿಯಂ ಐಷಾರಾಮಿ ಎಸ್‌ಯುವಿ ಕಾರಿನ ವಿನ್ಯಾಸಕ್ಕೆ ತಕ್ಕಂತೆ 23 ಇಂಚಿನ ಬ್ರಷ್ಡ್ ಮಲ್ಟಿ-ಸ್ಪೋಕ್ ವೀಲ್ಹ್ ಆಯ್ಕೆ ಜೊತೆಗೆ ವಿಂಡೋ ಪಿಲ್ಲರ್, ರೂಫ್ ಮೇಲೆ ಕಪ್ಪು ಬಣ್ಣದ ಡ್ಯುಯಲ್ ಟೋನ್ ಪೇಂಟ್ ಸ್ಕೀಮ್ ಮತ್ತು ‘ಮೇಬ್ಯಾಕ್' ಬ್ರಾಂಡ್ ಬ್ಯಾಡ್ಜ್ ಹೊಂದಿದೆ.

ರೂ.2.43 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿಸಿದ 'ಪರಮ ಸುಂದರಿ’ ಕೃತಿ ಸನೋನ್

ಈ ಎಸ್‍ಯುವು ಕಾರು ಮಾದರಿಯ ಪ್ರತಿ ಸೀಟ್ ವೆಂಟಿಲೆಟರ್ ಮತ್ತು ಮಸಾಜ್ ಫಂಕ್ಷನ್ ವೈಶಿಷ್ಟ್ಯತೆ ಒಳಗೊಂಡಿದ್ದು, ಪ್ರತಿ ಸೀಟ್ ನಲ್ಲೂ ಆಡಿಯೋ, ಹವಾಮಾನ ನಿಯಂತ್ರಣ, ಆಂಬಿಯೆಂಟ್ ಲೈಟಿಂಗ್, ಸನ್ಶೇಡ್ಸ್ ಮತ್ತು ನ್ಯಾವಿಗೇಷನ್ ಅನ್ನು ಒಳಗೊಂಡಿದೆ. ಹಿಂಭಾಗದಲ್ಲಿ ಫೋರ್ಡರ್‌ಗಳಲ್ಲಿ ರೆಫ್ರಿಜರೇಟರ್ ಅನ್ನು ಸಹ ಒಳಗೊಂಡಿದೆ.

ರೂ.2.43 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿಸಿದ 'ಪರಮ ಸುಂದರಿ’ ಕೃತಿ ಸನೋನ್

ಇನ್ನು ದೊಡ್ಡದಾದ ಪನೋರಮಿಕ್ ಮೂನ್‌ರೂಫ್, 12.3-ಇಂಚಿನ ಎಂಬಿಯುಎಕ್ಸ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಮತ್ತು 12.3-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬರ್ಮೆಸ್ಟರ್ ಸರೌಂಡ್ ಸೌಂಡ್ ಸಿಸ್ಟಮ್, 64 ಬಣ್ಣ ಮತ್ತು ಹೆಚ್ಚಿನ ಎಲ್ಇಡಿ ಆಪ್ಟಿಕಲ್ ಫೈಬರ್ ಆಂಬಿಯೆಂಟ್ ಲೈಟಿಂಗ್ ಅನ್ನು ಒಳಗೊಂಡಿದೆ.

ರೂ.2.43 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿಸಿದ 'ಪರಮ ಸುಂದರಿ’ ಕೃತಿ ಸನೋನ್

ಈ ಎಸ್‍ಯುವಿ ಮಾದರಿಯಲ್ಲಿ ವಿಶೇಷ ತಂತ್ರಜ್ಞಾನ ಪ್ರೇರಿತ ಇ-ಆಕ್ಟಿವ್ ಬಾಡಿ ಕಂಟ್ರೋಲ್ ಸಸ್ಪೆಂಕ್ಷನ್ ಸಿಸ್ಟಂ ಹೊಂದಿದ್ದು, ಫ್ರಂಟ್ ಕ್ಯಾಮೆರಾ ಮೂಲಕ ಕಾರು ಚಾಲನೆಯಲ್ಲಿರುವಾಗ ರಸ್ತೆಯನ್ನು ಸ್ಕ್ಯಾನ್ ಮಾಡುವ ಮೂಲಕ ಮತ್ತು ಸಸ್ಪೆಂಕ್ಷನ್ ಹೊಂದಾಣಿಕೆಯೊಂದಿಗೆ ಅಂಡರ್ ಬಾಡಿ ಡ್ಯಾಮೆಜ್ ತಪ್ಪಿಸಲು ನೆರವಾಗುತ್ತದೆ. ಈ ಮರ್ಸಿಡಿಸ್-ಮೇಬ್ಯಾಕ್ ಜಿಎಲ್ಎಸ್ 600 ಎಸ್‍ಯುವಿಯು 250 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.

ರೂ.2.43 ಕೋಟಿ ಮೌಲ್ಯದ ಐಷಾರಾಮಿ ಕಾರು ಖರೀದಿಸಿದ 'ಪರಮ ಸುಂದರಿ’ ಕೃತಿ ಸನೋನ್

ಈ ಎಸ್‍ಯುವಿಯಲ್ಲಿ 4.0 ಲೀಟರ್ ವಿ8 ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 9 ಜಿ-ಟ್ರಾನಿಕ್ ಸ್ವಯಂಚಾಲಿತ ಗೇರ್‌ಬಾಕ್ಸ್‌ನೊಂದಿಗೆ 550ಬಿಎಚ್‌ಪಿ ಮತ್ತು 730ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ ಹೊಸ ಎಂಜಿನ್‌ನಲ್ಲಿ 21ಬಿಎಚ್‌ಪಿ ಮತ್ತು 249ಎನ್ಎಂ ಟಾರ್ಕ್ ಕೊಡುಗೆ ನೀಡುವ ಸಂಯೋಜಿತ ಇಕ್ಯೂ ಬೂಸ್ಟ್ ಸ್ಟಾರ್ಟರ್-ಜನರೇಟರ್ ಅನ್ನು ಸಹ ಹೊಂದಿದೆ.

Most Read Articles

Kannada
English summary
Actress kriti sanon buys new mercedes maybach gls 600 suv check here details
Story first published: Monday, September 13, 2021, 12:46 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X