ಯುವಕರು ಮಾತ್ರವಲ್ಲ ಈ ರಾಯಲ್ ಎನ್‍ಫೀಲ್ಡ್ ಬೈಕಿಗೆ ಯುವನಟಿ ಕೂಡ ಫುಲ್ ಫಿದಾ

ರಾಯಲ್‌ ಎನ್‌ಫೀಲ್ಡ್‌ ಬೈಕ್‌ಗಳ ಮೇಲೆ ಜನರಿಗಿರುವ ಕ್ರೇಜ್‌ ಇಂದು ನೆನ್ನೆಯದಲ್ಲ, ಅದು ಹಲವಾರು ದಶಕಗಳಿಂದ ಇರುವ ಕ್ರೇಜ್ ಆಗಿದೆ. ರಾಯಲ್ ಎನ್‍ಫೀಲ್ಡ್ ಬೈಕ್‌ಗಳು ವಿಶಿಷ್ಟವಾದ ಲುಕ್, ಸೌಂಡ್ ಮತ್ತು ಆಕರ್ಷಕ ವಿನ್ಯಾಸದಿಂದ ಎಲ್ಲರ ಗಮನಸೆಳೆದಿದೆ. ಇಂದಿಗೂ ರಾಯಲ್ ಎನ್‍ಫೀಲ್ಡ್ ಬೈಕ್ ಯುವಕರ ಕನಸಿನ ಬೈಕ್ ಮಾತ್ರವಲ್ಲ ಯುವತಿಯರ ಕನಸಿನ ಬೈಕ್ ಕೂಡ ಆಗಿದೆ.

ರಾಯಲ್ ಎನ್‍ಫೀಲ್ಡ್ ಬೈಕ್‌ ಮೇಲೆ ಕುಳಿತು ರೈಡ್‌ ಮಾಡುವುದೆಂದರೆ ಅದೊಂದು ಗತ್ತು. ರಾಯಲ್ ಎನ್‍ಫೀಲ್ಡ್ ತನ್ನ ವಿಶಿಷ್ಟವಾದ ಲುಕ್, ಶಬ್ಧ ಮತ್ತು ಆಕರ್ಷಕ ವಿನ್ಯಾಸದಿಂದ ಎಲ್ಲರ ಗಮನಸೆಳೆದ ಬೈಕ್. ಆರೇಳು ದಶಕಗಳಿಂದಲೂ ಅದೇ ಕ್ರೇಜ್‌, ಅದೇ ಟ್ರೆಂಡ್‌ ಉಳಿಸಿಕೊಂಡು ಬಂದಿರುವುದು ರಾಯಲ್‌ ಎನ್‌ಫೀಲ್ಡ್‌ ಬೈಕ್‌ಗಳ ಹೆಗ್ಗಳಿಕೆಯಾಗಿದೆ. ಈ ರಾಯಲ್ ಎನ್‍ಫೀಲ್ಡ್ ಬೈಕಿಗೆ ಖ್ಯಾತ ನಟಿ ಫಿಧಾ ಆಗಿದ್ದಾರೆ.

Royal Enfield Classic 350

ಮಲಯಾಳಂ ಚಿತ್ರರಂಗದ ಯುವನಟಿ ನೂರಿನ್ ಶರೀಫ್ ತಮ್ಮ ಮೆಚ್ಚಿನ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 350 ಬೈಕ್ ಅನ್ನು ಖರೀದಿಸಿದ್ದಾರೆ. ಈ ನಟಿ ತಮ್ಮ ಮೆಚ್ಚಿನ ಹಾಲ್ಸಿಯೋ ಟನ್ ಗ್ರೇ ಬಣ್ಣದ ಬೈಕ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಬೈಕಿನ ಬೆಲೆಯು ರೂ.2.24 ಲಕ್ಷವಾಗಿದೆ. ಇನ್ನು ಈ ನಟಿಯ ಬಳಿ ಈ ಹೊಸ ಬೈಕ್ ಅಲ್ಲದೇ ಹ್ಯುಂಡೈi10 ನಿಯೋಸ್, ಫೋಕ್ಸ್ ವ್ಯಾಗನ್ ವರ್ಟಿಸ್ ಮತ್ತು ಇತರ ಕಾರುಗಳನ್ನು ಹೊಂದಿದ್ದಾರೆ.

ಯುವನಟಿ ನೂರಿನ್ ಶರೀಫ್ ಖರೀದಿಸಿದ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ ಬಗ್ಗೆ ಹೇಳುವುದಾದರೆ, ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 (Royal Enfield Classic 350) ಈ ಮಾದರಿಯು ಮಿಟಿಯೊರ್ 350 ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಳ್ಳಲಾಗಿದೆ. ಈ ಕ್ಲಾಸಿಕ್ 350 ಬೈಕ್ ಮಾದರಿಯಲ್ಲಿ ಸಸ್ಷೆಂಷನ್ ಸೆಟಪ್ ಮತ್ತು ಬ್ರೇಕಿಂಗ್ ಸಿಸ್ಟಂ ಅನ್ನು ಸಂಪೂರ್ಣವಾಗಿ ಬದಲಾವಣೆಗೊಳಿಸಿದೆ.

Royal Enfield Classic 350

ಈ ಹೊಸ ಬೈಕಿನಲ್ಲಿ ಫ್ಯೂಲ್ ಗೇಜ್ ಮತ್ತು ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಪ್ರಮುಖ ಆಕರ್ಷಣೆಯಾಗಿದೆ. ಈ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಕ್ಲಾಸಿಕ್ 350 ಬೈಕ್ ಮಾದರಿಯಲ್ಲಿ ಮಿಟಿಯೊರ್ 350 ಮಾದರಿಗಾಗಿ ಪರಿಚಯಿಸಿರುವ 349 ಸಿಸಿ SOHC ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 19.1 ಬಿಎಚ್‌ಪಿ ಪವರ್ ಮತ್ತು 28 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಇನ್ನು ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ, ಹಿಂದಿನ ಮಾದರಿಗಳಲ್ಲಿ ಇದ್ದ ವೈಬ್ರೆಷನ್ ಪ್ರಮಾಣವು ಗಣನೀಯವಾಗಿ ಸುಧಾರಣೆಯಾಗಿದೆ. ಜೊತೆಗೆ ಎಲೆಕ್ಟ್ರಾನಿಕ್ಸ್ ಸೌಲಭ್ಯಗಳು ಬೈಕ್ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲಿದ್ದು, ಹೊಸ ಮಾದರಿಯ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇದರ ಜೊತೆಗೆ ಫ್ಯೂಲ್ ಗೇಜ್ ಮತ್ತು ಟ್ರಿಪ್ಲರ್ ಮೀಟರ್ ನೀಡಲಾಗಿದೆ.

ಈ ಜನಪ್ರಿಯ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಕ್ರೋಮ್ ರೆಡ್, ಕ್ರೋಮ್ ಬ್ರೊಂಜ್, ಡಾರ್ಕ್ ಸ್ಟೆಲ್ತ್ ಬ್ಲ್ಯಾಕ್, ಡಾರ್ಕ್ ಗನ್‌ಮೆಟಲ್ ಗ್ರೇ, ಸಿಗ್ನಲ್ಸ್ ಮಾರ್ಷ್ ಗ್ರೇ, ಸಿಗ್ನಲ್ಸ್ ಸ್ಯಾಂಡ್ ಸ್ಟಾರ್ಮ, ಹಾಲ್ಸಿಯಾನ್ ಗ್ರೀನ್, ಹಾಲ್ಸಿಯಾನ್ ಬ್ಲ್ಯಾಕ್, ಹಾಲ್ಸಿಯಾನ್ ಗ್ರೇ, ರೆಡ್‌ಡಿಚ್ ಗ್ರೀನ್ ಮತ್ತು ರೆಡ್‌ಡಿಚ್ ಗ್ರೇ ಎಂಬ ಬಣ್ಣಗಳನ್ನು ಹೊಂದಿದೆ.

ಇನ್ನು ಹೆಡ್‌ಲ್ಯಾಂಪ್ ಮಾತ್ರವಲ್ಲ ಟೈಲ್ ಲ್ಯಾಂಪ್, ಟರ್ನ್ ಇಂಡಿಕೇಟರ್ ಹಾಲೊಜೆನ್ ಬಲ್ಬ್ ಸಹ ನೀಡಿದೆ, ಕಂಪನಿಯು ಹೊಸ ಬೈಕ್ ಮಾದರಿಯನ್ನು ಸಿಂಗಲ್ ಕ್ರೆಡಲ್ ಫ್ರೆಮ್ ಬದಲಾಗಿ ಡ್ಯುಯಲ್ ಡೌನ್ ಟ್ಯೂಬ್ ಚಾರ್ಸಿ‌ಯೊಂದಿಗೆ ಅಭಿವೃದ್ದಿಗೊಳಿಸಿದೆ. ಡಬಲ್ ಕ್ರೆಡ್ ಚಾರ್ಸಿಸ್ ಬದಲಾವಣೆಯಿಂದಾಗಿ ಬೈಕ್ ರೈಡಿಂಗ್ ದೂರದ ಪ್ರಯಾಣದಲ್ಲೂ ಉತ್ತಮ ಅನುಭವವನ್ನು ನೀಡುತ್ತದೆ.

More from DriveSpark

Article Published On: Friday, July 7, 2023, 8:30 [IST]
English summary
Actress noorin shereef buys new royal enfield classic 350 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+