ಅಭಿಮಾನಿಗಳೆಂದರೆ ರಚ್ಚುಗೆ ಎಷ್ಟು ಇಷ್ಟ ನೋಡ್ರಿ: ಬೈಕ್ ಮೇಲೆ ಆಟೋಗ್ರಾಫ್

ಚಂದನವದಲ್ಲಿ ನೆಲೆ ಕಂಡುಕೊಂಡಿರುವ ಅಪ್ಪಟ ಕನ್ನಡದ ಹುಡುಗಿ ರಚಿತಾ ರಾಮ್‌. ಕಿರುತೆರೆ ಲೋಕದಿಂದ ಬಂದು ಹಿರಿತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಬ್ಯಾಕ್‌ ಟು ಬ್ಯಾಕ್‌ ದೊಡ್ಡ ಸ್ಟಾರ್ ಹೀರೋಗಳ ಜೊತೆ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. 2013ರಲ್ಲಿ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ನಟಿ ರಚಿತಾ ರಾಮ್‌ ಅವರಿಗೆ 'ಬುಲ್‌ಬುಲ್‌' ಸಿನಿಮಾ ಮೂಲಕ ಅದೃಷ್ಟ ಒಲಿಯಿತು

ಸ್ಯಾಂಡಲ್‌ವುಡ್‌ನಲ್ಲಿ ಕಿಚ್ಚ ಸುದೀಪ್‌, ಪುನೀತ್‌ ರಾಜ್‌ಕುಮಾರ್‌, ಚಾಲೆಂಜಿಂಗ್ ಸ್ಟಾರ್‌ ದರ್ಶನ್‌, ಗೋಲ್ಡನ್‌ ಸ್ಟಾರ್‌ ಗಣೇಶ್‌, ಉಪೇಂದ್ರ ಮುಂತಾದ ಸ್ಟಾರ್ ಹೀರೋಗಳ ಜೊತೆ ನಟಿಸಿದ್ದಾರೆ. ಸ್ಯಾಂಡಲ್‌ವುಡ್‌ ಡಿಂಪಲ್ ಕ್ವೀನ್ ರಚಿತಾ ರಾಮ್‌ (Rachita ram) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಡಿಂಪಲ್ ಕ್ವೀನ್ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಿದ ಬಳಿಕ ಈಗ ಟಾಲಿವುಡ್ ಕಡೆಯು ಅವರು ಮುಖ ಮಾಡಿದ್ದಾರೆ.

Actress Rachita ram

ಇತ್ತೀಚೆಗೆ ಡಿಂಪಲ್ ಕ್ವೀನ್ ರಚಿತಾ ರಾಮ್‌ ಅವರನ್ನು ಇತ್ತೀಚೆಗೆ ಒಬ್ಬ ಸ್ಪೆಷಲ್‌ ಅಭಿಮಾನಿ ಭೇಟಿ ಆಗಿದ್ದರು. ಅಭಿಮಾನಿ ತಮ್ಮ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನಲ್ಲಿ ರಚಿತಾ ರಾಮ್‌ ಅವರ ಮನೆಗೆ ಬಂದಿದ್ದಾರೆ. ಅಬಿಮಾನಿಯನ್ನು ಭೇಟಿ ಮಾಡಿ ಅವರ ಬೈಕ್ ಮೇಲೆ ಆಟೋಗ್ರಾಫ್ ಬರೆದಿದ್ದಾರೆ. ನಟಿ ಹಲವು ಸಿನಿಮಾಗಳ ಮೂಲಕ ಕನ್ನಡಿಗರ ಮನದಲ್ಲಿ ಸ್ಥಾನ ಪಡೆದಿದ್ದಾರೆ. ಕರ್ನಾಟಕದಲ್ಲಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಇನ್ನು ರಚಿತಾ ರಾಮ್‌ ಅವರು ಆಟೋಗ್ರಾಫ್ ನೀಡಿದ ಅಬಿಮಾನಿಯ ರಾಯಲ್ ಎನ್‌ಫೀಲ್ಡ್ ಬೈಕ್ ಬಗ್ಗೆ ಹೇಳುವುದಾದರೆ, ಇದು ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬಕ್ ಆಗಿದೆ. ಪ್ರಾರಂಭದಿಂದಲೂ ಕ್ಲಾಸಿಕ್ ಮಾದರಿಯು ರಾಯಲ್ ಎನ್‌ಫೀಲ್ಡ್ ಬ್ರ್ಯಾಂಡ್‌ಗೆ ಪ್ರಮುಖ ಮಾದರಿಗಳಲ್ಲಿ ಒಂದಾಗಿದೆ. ಕ್ಲಾಸಿಕ್ 350 ಬೈಕ್ ಮಾದರಿಯು ರೆಡ್‌ಡಿಚ್, ಹಾಲ್ಕೈನ್, ಸಿಗ್ನಲ್ಸ್, ಡಾರ್ಕ್ ಮತ್ತು ಕ್ರೋಮ್ ಎಂಬ ಐದು ವೆರಿಯೆಂಟ್ ಗಳಲ್ಲಿ ಲಭ್ಯವಿದೆ.

Actress Rachita ram

ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ J1A ಪ್ಲಾಟ್‌ಫಾರ್ಮ್ ಅಡಿಯಲ್ಲಿ ತಯಾರಿಸಲಾಗಿದೆ. ಈ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಈ ಮಾದರಿಯು ಮಿಟಿಯೊರ್ 350 ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆದುಕೊಳ್ಳಲಾಗಿದೆ. ಈ ಕ್ಲಾಸಿಕ್ 350 ಬೈಕ್ ಮಾದರಿಯಲ್ಲಿ ಸಸ್ಷೆಂಷನ್ ಸೆಟಪ್ ಮತ್ತು ಬ್ರೇಕಿಂಗ್ ಸಿಸ್ಟಂ ಅನ್ನು ಸಂಪೂರ್ಣವಾಗಿ ಬದಲಾವಣೆಗೊಳಿಸಿದೆ, ಈ ಹೊಸ ಬೈಕಿನಲ್ಲಿ ಫ್ಯೂಲ್ ಗೇಜ್ ಮತ್ತು ಟ್ರಿಪ್ಪರ್ ನ್ಯಾವಿಗೇಷನ್ ಫೀಚರ್ ಪ್ರಮುಖ ಆಕರ್ಷಣೆಯಾಗಿದೆ.

ಈ ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಕ್ಲಾಸಿಕ್ 350 ಬೈಕ್ ಮಾದರಿಯಲ್ಲಿ ಮಿಟಿಯೊರ್ 350 ಮಾದರಿಗಾಗಿ ಪರಿಚಯಿಸಿರುವ 349 ಸಿಸಿ SOHC ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 19.1 ಬಿಎಚ್‌ಪಿ ಪವರ್ ಮತ್ತು 28 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ, ಹಿಂದಿನ ಮಾದರಿಗಳಲ್ಲಿ ಇದ್ದ ವೈಬ್ರೆಷನ್ ಪ್ರಮಾಣವು ಗಣನೀಯವಾಗಿ ಸುಧಾರಣೆಯಾಗಿದೆ.

ಜೊತೆಗೆ ಎಲೆಕ್ಟ್ರಾನಿಕ್ಸ್ ಸೌಲಭ್ಯಗಳು ಬೈಕ್ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸಲಿದ್ದು, ಹೊಸ ಮಾದರಿಯ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇದರ ಜೊತೆಗೆ ಫ್ಯೂಲ್ ಗೇಜ್ ಮತ್ತು ಟ್ರಿಪ್ಲರ್ ಮೀಟರ್ ನೀಡಲಾಗಿದೆ. ಈ ಕ್ಲಾಸಿಕ್ 350 ಬೈಕ್ ಸಸ್ಪೆಂಕ್ಷನ್ 41 ಎಂಎಂ ಟೆಲಿಸ್ಕೊಪಿಕ್ ಫೋರ್ಕ್‌ನೊಂದಿಗೆ 170 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಇನ್ನು ಇದರ , ಈ ಬ್ರೇಕಿಂಗ್ ಕೂಡ ಸಾಕಷ್ಟು ಸುಧಾರಿಸಿದೆ.

ಇನ್ನು ಇದರ ಈ ಬ್ರೇಕಿಂಗ್ ಕೂಡ ಸಾಕಷ್ಟು ಸುಧಾರಿಸಿದೆ. ಇದು ಎರಡೂ ಕಡೆಗಳಲ್ಲಿ ಡಿಸ್ಕ್ ಬ್ರೇಕ್ ಅನ್ನು ನೀಡಲಾಗಿದೆ, ಇದರೊಂದಿಗೆ ಎಬಿಎಸ್‌ನೊಂದಿಗೆ ಸ್ಟ್ಯಾಂಡರ್ಡ್ ಆಗಿ ಹೊಂದಿದೆ. ಖರೀದಿದಾರರು ಆಯ್ಕೆ ಮಾಡಿದ ರೂಪಾಂತರವನ್ನು ಅವಲಂಬಿಸಿ ಸಿಂಗಲ್-ಚಾನೆಲ್ ಅಥವಾ ಡ್ಯುಯಲ್-ಚಾನೆಲ್ ಎಬಿಎಸ್ ಪಡೆಯುತ್ತಾರೆ. ಒಟ್ಟಾರೆಯಾಗಿ, ಈ ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350ಹಳೆಯ ಮಾದರಿಗಿಂತ ದೊಡ್ಡ ಸುಧಾರಣೆಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಲು ಮರೆಯದಿರಿ.

Article Published On: Tuesday, August 8, 2023, 18:19 [IST]
English summary
Actress rachita ram autograph on fan royal enfield bike
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+