ಯುಗಾದಿಗೆ ಕುಟುಂಬದೊಂದಿಗೆ ದುಬಾರಿ ಬೆಲೆಯ ಹೊಸ ಮರ್ಸಿಡಿಸ್ ಕಾರು ಖರೀದಿಸಿದ ಕ್ಯೂಟ್ ನಟಿ!
ಮರಾಠಿ ನಟಿ ಸಾಯಿ ತಮ್ಹಂಕರ್ (Sai Tamhankar), ಹಿಂದಿ, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸುವ ಮೂಲಕವು ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಈ ಗುಡಿ ಪಾಡ್ವಾ (ಯುಗಾದಿ)ದಲ್ಲಿ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ದುಬಾರಿ ಬೆಲೆಯ ಮರ್ಸಿಡಿಸ್ ಬೆಂಜ್ ಜಿಎಲ್ಇ ಕಾರನ್ನು ಖರೀದಿಸಿದ್ದಾರೆ.
ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದು, ಕುಟುಂಬದೊಂದಿಗೆ ನೂತನ ಕಾರನ್ನು ವಿತರಣೆ ಪಡೆಯುತ್ತಿರುವುದನ್ನು ನೋಡಬಹುದು. ಜೊತೆಗೆ 'ನೀವು ಏನು ಮಾಡಬಹುದು ಅಥವಾ ಮಾಡಬಾರದು ಎಂಬುದನ್ನು ಯಾರಿಂದಲೂ ಕೇಳಬೇಡಿ. ಕನಸು ಕಾಣಿ.. ಸಾಧಿಸಿ, ಬದುಕಿ!, ನಾವು ಹೊಸ ವರ್ಷವನ್ನು ಪ್ರಾರಂಭಿಸುತ್ತಿದ್ದಂತೆ, ನವೀನ ಗುರಿಗಳನ್ನು ಹೊಂದೋಣ ಹಾಗೂ ಅವುಗಳನ್ನು ಸಾಧಿಸೋಣ' ಎಂದು ಶೀರ್ಷಿಕೆ ಬರೆದಿದ್ದಾರೆ.

ನಟಿ ಸಾಯಿ ತಮ್ಹಂಕರ್ ಅವರ ಈ ಪೋಸ್ಟ್ 1 ಮಿಲಿಯನ್ ವೀಕ್ಷಣೆಯನ್ನು ಪಡೆದುಕೊಂಡಿದ್ದು, 1 ಲಕ್ಷಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ. ನೂತನ ಕಾರು ಕೊಂಡುಕೊಂಡಿರುವುದಕ್ಕೆ ನಟಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಸಾಯಿ ತಮ್ಹಂಕರ್ ಮರ್ಸಿಡಿಸ್ ಬೆಂಜ್ ಜಿಎಲ್ಇ (Mercedes-Benz GLE) ಎಸ್‌ಯುವಿಯ ಯಾವ ರೂಪಾಂತರವನ್ನು ಖರೀದಿಸಿದ್ದಾರೆ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ.
ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಮರ್ಸಿಡಿಸ್ ಬೆಂಜ್ ಜಿಎಲ್ಇ ಕಾರು ರೂ.96.40 ಲಕ್ಷದಿಂದ ರೂ.1.15 ಕೋಟಿ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಇದು ಜಿಎಲ್ಇ 300 ಡಿ 4ಮ್ಯಾಟಿಕ್, ಜಿಎಲ್ಇ 450 4ಮ್ಯಾಟಿಕ್, 450 ರೂಪಾಂತರ ಹಾಗೂ ವಿವಿಧ ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಎಸ್‌ಯುವಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. ಇದರ 2-ಲೀಟರ್ 4-ಸಿಲಿಂಡರ್ ಡೀಸೆಲ್ ಎಂಜಿನ್, 269 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 550 ಎಂಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 3-ಲೀಟರ್ 6-ಸಿಲಿಂಡರ್ ಡೀಸೆಲ್ ಎಂಜಿನ್ 367 ಪಿಎಸ್ ಪವರ್ ಹಾಗೂ 750 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.
ಮತ್ತೊಂದು 3-ಲೀಟರ್, 6-ಸಿಲಿಂಡರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, 381 ಪಿಎಸ್ ಗರಿಷ್ಠ ಪವರ್ ಮತ್ತು 500 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನುಒಳಗೊಂಡಿದೆ. 9 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿಯೂ ಸಿಗಲಿದ್ದು, AWD (ಆಲ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ.
ಮರ್ಸಿಡಿಸ್ ಬೆಂಜ್ ಜಿಎಲ್ಇ ಕಾರು ಬೆಲೆಗೆ ತಕ್ಕಂತೆ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯವನ್ನು ತನ್ನದಾಗಿಸಿಕೊಂಡಿದೆ. 12.3-ಇಂಚಿನ ಡುಯಲ್ ಡಿಸ್ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್‌ಸ್ಟ್ರುಮೆಂಟೇಶನ್ ಕ್ಲಸ್ಟರ್), 4-ಜೋನ್ ಕ್ಲೇಮೇಟ್ ಕಂಟ್ರೋಲ್, ಹೆಡ್-ಅಪ್ ಡಿಸ್ಪ್ಲೇ, 590ಡಬ್ಲ್ಯೂ 13-ಸ್ಪೀಕರ್ ಬರ್ಮೆಸ್ಟರ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 9 ಏರ್‌ಬ್ಯಾಗ್, 360-ಡಿಗ್ರಿ ಕ್ಯಾಮೆರಾ, ಟ್ರಾಕ್ಷನ್ ಕಂಟ್ರೋಲ್, ಪಾರ್ಕ್ ಅಸಿಸ್ಟ್ ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications